• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಂಧನ ಬೆಲೆ ಏರಿಕೆಯ ಹಸಿಗಾಯದ ಮೇಲೆ ವಿದ್ಯುತ್ ದರ ಏರಿಕೆಯ ಬರೆ– ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Any Mind by Any Mind
June 10, 2021
in ಕರ್ನಾಟಕ
0
ಇಂಧನ ಬೆಲೆ ಏರಿಕೆಯ ಹಸಿಗಾಯದ ಮೇಲೆ ವಿದ್ಯುತ್ ದರ ಏರಿಕೆಯ ಬರೆ– ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Share on WhatsAppShare on FacebookShare on Telegram

ADVERTISEMENT

ಕರೋನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ.. ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಟರ್ಗೆ 30 ರೂಗಳಷ್ಟು ಬೆಲೆ ಜಾಸ್ತಿ ಆಗಿದೆ. 2014 ರಲ್ಲಿ 400 ರೂಗಳಿದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಈಗ 850 ರೂ ಆಗಿದೆ. ಈ ಕಾಲದಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನೀಡಿರುವ ಕಾರಣಗಳು ಜನರನ್ನು ತಪ್ಪುದಾರಿಗೆಳೆಯುವಂತಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು ಇಂದು ನಷ್ಟದಲ್ಲಿದ್ದರೆ ಅದಕ್ಕೆ ರಾಜ್ಯ ಸರ್ಕಾರದ ಅದಕ್ಷತೆ, ಭ್ರಷ್ಟಾಚಾರ ಮತ್ತು ಕಾರ್ಪೋರೇಟ್ ಕಂಪೆನಿಗಳ ಓಲೈಕೆ ಕಾರಣ. ಸಮರ್ಥನೀಯವಲ್ಲದ, ಅವೈಜ್ಞಾನಿಕ ಮತ್ತು ಜನವಿರೋಧಿಯಾಗಿರುವ ವಿದ್ಯುತ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿನ ವಿದ್ಯುತ್ ಕ್ಷೇತ್ರದ ಸುಧಾರಣೆ ಮತ್ತು ಕಾರ್ಯಗತಗೊಳಿಸಿದ ಹೊಸ ಯೋಜನೆಗಳಿಂದಾಗಿ ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿತ್ತು. ರಾಜ್ಯದಲ್ಲಿ ಸುಮಾರು 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಬಳಕೆ ಆಗುತ್ತಿರುವುದು ಕೇವಲ 8.5 ಸಾವಿರದಿಂದ 10 ಸಾವಿರ ಮೆಗಾವ್ಯಾಟ್ ಮಾತ್ರ. ಒಟ್ಟು ವಿದ್ಯುತ್ ಉತ್ಪಾದನೆಯ ಮೂರನೇ ಎರಡು ಭಾಗದಷ್ಟು ಸೋಲಾರ್ ಮತ್ತು ಗಾಳಿಯ ಮೂಲದಿಂದ ಇಂಧನ ಲಭ್ಯವಿದೆ. ಹೆಚ್ಚುವರಿ ವಿದ್ಯುತ್ ಉತ್ಪಾದನೆಯಿಂದಾಗಿ ರಾಯಚೂರು ಉಷ್ಣವಿದ್ಯುತ್ ಸ್ಥಾವರದ ಉತ್ಪಾದನೆಯನ್ನು ಇತ್ತೀಚೆಗೆ ಸ್ಥಗಿತಗೊಳಿಸಲಾಗಿತ್ತು. ಹೀಗಿರುವಾಗ ಬೇರೆ ಕಡೆಯಿಂದ ವಿದ್ಯುತ್ ಖರೀದಿಸುವ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.

 ಇಂತಹ ಸಂದರ್ಭದಲ್ಲಿ ವಿದ್ಯುತ್ ದರವನ್ನು ಇಳಿಸಿ ವಿದ್ಯುತ್ ಬಳಕೆಗೆ ಪ್ರೊತ್ಸಾಹ ನೀಡಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಾಗಿದೆ. ಆದರೆ ಕಳೆದ ಮೂರು ವರ್ಷಗಳಿಂದ ವಿದ್ಯುತ್ ಬಳಕೆ ಕಡಿಮೆಯಾಗುತ್ತಿದೆ. ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಯದ್ವಾತದ್ವಾ ಹೆಚ್ಚಿಸಿ ವಿದ್ಯುತ್ ಬಳಕೆದಾರರಿಗೆ ದಂಡ ವಿಧಿಸುವುದು ಸರಿ ಅಲ್ಲ ಎಂದಿದ್ದಾರೆ.

ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು ಇಂದು ನಷ್ಟದಲ್ಲಿದ್ದರೆ ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ವಹಿಸಬೇಕಾಗುತ್ತದೆ.ರಾಜ್ಯದ ಬಿಜೆಪಿ ಸರ್ಕಾರ ಯುನಿಟ್ ಗೆ ಹೆಚ್ಚುವರಿ 50 ಪೈಸೆ ನೀಡಿ ಕೇಂದ್ರ ಸರ್ಕಾರದಿಂದ ವಿದ್ಯುತ್ ಖರೀದಿಸುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ  5-6 ಸಾವಿರ ಕೋಟಿ ರೂಪಾಯಿ ಹೊರೆಯಾಗುತ್ತಿದೆ. ಈ ಪೋಲಾಗುತ್ತಿರುವ ಈ ಹಣವನ್ನು ಉಳಿಸಿದರೆ ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳನ್ನು ನಷ್ಟದಿಂದ ಪಾರುಮಾಡಬಹುದು ಎಂದು ಸಲಹೆ ನೀಡಿದ್ದಾರೆ.

ಅದಾನಿ ಮೊದಲಾದ ಕಾರ್ಪೋರೇಟ್ ಕಂಪನಿಗಳು ಹಾಗೂ ಕೇಂದ್ರದ ಗ್ರಿಡ್ಗಳಿಂದ ರಾಜ್ಯ ಸರ್ಕಾರ 38594 ಮಿಲಿಯನ್ ಯೂನಿಟ್ಗಳನ್ನು ಖರೀದಿಸುತ್ತಿದೆ. ಆದರೆ ಬಳಕೆ ಮಾಡುತ್ತಿರುವುದು ಮಾತ್ರ ಕೇವಲ 19921 ಮಿಲಿಯನ್ ಯೂನಿಟ್ಗಳು. ಇದಕ್ಕಾಗಿ ರಾಜ್ಯ ಸರ್ಕಾರ 4388 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ.  ಒಟ್ಟಾರೆಯಾಗಿ ಲೆಕ್ಕ ಹಾಕಿದರೆ ಎಲ್ಲಾ ಮೂಲಗಳಿಂದ ಪಾವತಿಸಬೇಕಾದ ಮೊತ್ತಕ್ಕಿಂತ 5460 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಪಾವತಿಸಲಾಗುತ್ತಿದೆ. ಕಷ್ಟದಲ್ಲಿರುವ ಜನರಿಂದ ಕಿತ್ತುಕೊಂಡು ಕಾರ್ಪೋರೇಟ್ ಕಂಪೆನಿಗಳನ್ನು ಉದ್ದಾರ ಮಾಡಲು ರಾಜ್ಯ ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅದೇ ರೀತಿ ಕೆಪಿಟಿಸಿಎಲ್ ವತಿಯಿಂದ ಸರಬರಾಜು ಮಾಡುವ ವಿದ್ಯುತ್ಗಾಗಿ 20 ಸಾವಿರ ರೂಪಾಯಿಗಳನ್ನು ಹೆಚ್ಚು ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಪಂಜಾಬ್ ಮುಂತಾದ ರಾಜ್ಯಗಳು ತಮ್ಮ ರಾಜ್ಯದ ಗ್ರಿಡ್ಗಳಿಗೆ ಸರಬರಾಜು ಆದ ನಂತರದ ವಿದ್ಯುತ್ಗೆ ಮಾತ್ರ ಶುಲ್ಕವನ್ನು ಪಾವತಿಸುತ್ತಿವೆ ರಾಜ್ಯದ ವಿದ್ಯುಚ್ಛಕ್ತಿ ಇಲಾಖೆ ಮಾತ್ರ ಖರೀದಿ ಮಾಡುವ ಕಂಪೆನಿಗಳಿಗೆ ಉತ್ಪಾದನೆ ಮಾಡುವ ಸ್ಥಳದಿಂದಲೇ ಸರಬರಾಜು ಶುಲ್ಕವನ್ನು ಪಾವತಿಸುತ್ತಿದೆ. ಇದರಿಂದ ರಾಜ್ಯ ಸರ್ಕಾರವು 3037 ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚಿನ ಹಣವನ್ನು  ಪಾವತಿಸಲಾಗುತ್ತಿದೆ. ಬೇರೆ ರಾಜ್ಯಗಳಂತೆ ಸರಬರಾಜು ಮಾಡಿದ ನಂತರದ ವಿದ್ಯುತ್ ಗೆ ಮಾತ್ರ ಶುಲ್ಕ ಪಾವತಿಸಿದರೆ ಸುಮಾರು 1252 ಕೋಟಿ ರೂಪಾಯಿ ಉಳಿಸಲು ಸಾಧ್ಯವಿದೆ. ಈಗಲೂ ಕಾಲ ಮಿಂಚಿಲ್ಲ. ವಿದ್ಯುಚ್ಛಕ್ತಿ ಕುರಿತಾದ ಪರಿಣತರು, ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಕರೆದು ವಿದ್ಯುಚ್ಛಕ್ತಿ ದರಗಳನ್ನು ಕಡಿಮೆ ಮಾಡುವುದು ಹೇಗೆ ಎಂದು  ಸಲಹೆಗಳನ್ನು ಪಡೆಯಬೇಕು. ಅಲ್ಲಿಯವರೆಗೆ ವಿದ್ಯುಚ್ಛಕ್ತಿ ದರಗಳನ್ನು ಹೆಚ್ಚಿಸಬಾರದು ಎಂದು ರಾಜ್ಯ ಸರ್ಕಾರವನ್ನು ಸಿದ್ದರಾಮಯ್ಯ  ಒತ್ತಾಯಿಸಿದ್ದಾರೆ.

Previous Post

ಕೊಡಗು ಜಿಲ್ಲೆಯಲ್ಲಿ ಈ ತಿಂಗಳಾಂತ್ಯದವರೆಗೂ ಲಾಕ್‌ಡೌನ್‌ ಅವಶ್ಯಕತೆ ಇದೆಯೇ ?

Next Post

ಮೆಹುಲ್ ಚೋಕ್ಸಿ,ಬಾರ್ಬರಾ ಜಾರಬಿಕಾ ಎಂಬ ಸುಂದರಿ, ಹನಿಟ್ರ್ಯಾಪ್ ಮತ್ತು ಅಪಹರಣದ ರೋಚಕ ಕತೆ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಮೆಹುಲ್ ಚೋಕ್ಸಿ,ಬಾರ್ಬರಾ ಜಾರಬಿಕಾ ಎಂಬ ಸುಂದರಿ, ಹನಿಟ್ರ್ಯಾಪ್ ಮತ್ತು ಅಪಹರಣದ ರೋಚಕ ಕತೆ

ಮೆಹುಲ್ ಚೋಕ್ಸಿ,ಬಾರ್ಬರಾ ಜಾರಬಿಕಾ ಎಂಬ ಸುಂದರಿ, ಹನಿಟ್ರ್ಯಾಪ್ ಮತ್ತು ಅಪಹರಣದ ರೋಚಕ ಕತೆ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!