ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಜ್ಞರು ಈಗಾಗಲೇ ಎಚ್ಚರಿಸಿದ್ದು, ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯದಿಂದ ಹೋರಾಡಲು ಮಾಸ್ಕ್ ಅಗ್ಯವಿದ್ದರು 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಹೆಚ್ಎಸ್) ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಹೊಸ ಮಾರ್ಗ ಸೂಚಿಯಲ್ಲಿರುವ ಪ್ರಮುಖ ಅಂಶಗಳು
ಡೈರೆಕ್ಟರೇಟ್ ಜನರಲ್ ಆಫ್ ಹೆಲ್ತ್ ಸರ್ವೀಸಸ್ (DGHS) ಮಾರ್ಗಸೂಚಿಗಳ ಪ್ರಕಾರ 5 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸು ಮಾಡಿಲ್ಲ.
6 ರಿಂದ 11 ವರ್ಷ ವಯಸ್ಸಿನ ಮಕ್ಕಳು ಪೋಷಕರು ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾಸ್ಕ್ ಧರಿಸಬಹುದು ಎಂದು ತಿಳಿಸಲಾಗಿದೆ. 12-17 ವರ್ಷ ವಯಸ್ಸಿನ ಮಕ್ಕಳು ವಯಸ್ಕರಂತೆಯೇ ಮಾಸ್ಕ್ ಧರಿಸಬೇಕೆಂದು ಹೇಳಿದೆ.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೋವಿಡ್ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ನೀಡಬಾರದು ಮಕ್ಕಳಿಗೆ ಬೇಕಾಬಿಟ್ಟಿ ಸಿಟಿ ಸ್ಕ್ಯಾನ್ ಮಾಡಿಸಬಾರದು. ಗಂಭೀರ ಪ್ರಕರಣವಿದ್ದಲ್ಲಿ ಮಾತ್ರ ಎಚ್ಆರ್ಸಿಟಿ ಸ್ಕ್ಯಾನ್ ಮತ್ತು ಸ್ಟೆರಾಯ್ಡ್ ನೀಡಬಹುದು ಎಂದು ಮಾರ್ಗ ಸೂಚಿಯಲ್ಲಿ ಉಲ್ಲೇಖಿಸಿದೆ.
ಆದರೆ 18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ, ನೈರ್ಮಲ್ಯ ಕಾಪಾಡಿಕೊಳ್ಳುವುದು ಹಾಗು ಕೆಮ್ಮು ಬಂದಾಗ ಅಂತರ ಪಾಲಿಸುವುದು ಲಕ್ಷಣರಹಿತ, ಸೌಮ್ಯ, ಮಧ್ಯಮ, ತೀವ್ರ ರೋಗಿಗಳು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚಿಸಲಾಗಿದೆ.