ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು ತಂದು ಸಡಿಲಿಕೆಗಳನ್ನು ಮಾಡಲು ನೆನ್ನೆಯ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಸಭೆಯಲ್ಲಿ ಒಂದಷ್ಟು ಮಹತ್ತರವಾದ ನಿರ್ಧಾರಗಳನ್ನು ತೆಗೆದುಕೊಂಡಿರು ರಾಜ್ಯ ಸರ್ಕಾರ ಇವತ್ತು ಅಂದರೆ ಶುಕ್ರವಾರ ಸಂಪೂರ್ಣ ಮಾರ್ಗಸೂಚಿಯನ್ನು ಹೊರತಂದಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ನೂತನ ಲಾಕ್, ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಎಲ್ಲಾ ಕಾರ್ಖಾನೆಗಳನ್ನು ನಿರ್ಬಂಧಗಳೊಂದಿಗೆ ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಅಗತ್ಯ ವಸ್ತು ಖರೀದಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 10ರವರೆಗೆ ಇದ್ದಂತ ಸಮಯವನ್ನು ಲಾಕ್ ಡೌನ್ ಮುಂದುವರೆಸಿರುವಂತ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಸಿದ್ದರೇ, ಅನ್ ಲಾಕ್ ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.
ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಮದ್ಯದ ಅಂಗಡಿಗಳನ್ನು ಕೂಡ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದ್ದು, ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ನೀಡಿದೆ.
ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಪ್ರತಿದಿನ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ.
ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದ್ದು ಅದರ ಸಂಪೂರ್ಣ ವಿವರ ಇಲ್ಲಿದೆ.