• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆದಾಯ ಇಲ್ಲದ ಜನರಿಂದ ಖಾಸಗಿ ಶಾಲೆಯಿಂದ ಶುಲ್ಕ ವಸೂಲಿ: ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

Any Mind by Any Mind
June 15, 2021
in ಕರ್ನಾಟಕ, ರಾಜಕೀಯ
0
ಆದಾಯ ಇಲ್ಲದ ಜನರಿಂದ ಖಾಸಗಿ ಶಾಲೆಯಿಂದ ಶುಲ್ಕ ವಸೂಲಿ: ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
Share on WhatsAppShare on FacebookShare on Telegram

ಖಾಸಗಿ ಶಾಲೆ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕರೋನ ಅಂತ ಪರಿಸ್ಥಿತಿಯಲ್ಲಿ ಜನರ ಆಧಾಯ ಶೂನ್ಯವಾಗಿದೆ, ದುಡದ 80 90% ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ವ್ಯಯ ಮಾಡುತ್ತಿದ್ದಾರೆ. ಹಾಗಾಗಿ ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ.

ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯ್ತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ ಎಂದಿದ್ದಾರೆ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮಥ್ರ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ?ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ.

ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ದಿನಾಂಕ 15-6-2021 ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Tags: Karnataka GovernmentPrivate SchoolssiddaramaiahYediyurappa
Previous Post

ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ನತಾಶಾ ನರ್ವಾಲ್, ದೇವಂಗನಾ ಕಾಳಿತಾ, ಆಸಿಫ್ ಇಕ್ಬಾಲ್ ತನ್ಹಾಗೆ ಜಾಮೀನು: ದೆಹಲಿ ಹೈಕೋರ್ಟ್

Next Post

ರಾಮಮಂದಿರ ಭೂಮಿ ಖರೀದಿಯಲ್ಲಿ ಅಕ್ರಮ, ಇದು ದೇಶಕ್ಕೇ ಮಾಡಿದ ದೊಡ್ಡ ಅಪಮಾನ: ಡಿ.ಕೆ ಶಿವಕುಮಾರ್ ಕಿಡಿ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
Next Post
ರಾಮಮಂದಿರ  ಭೂಮಿ ಖರೀದಿಯಲ್ಲಿ ಅಕ್ರಮ, ಇದು ದೇಶಕ್ಕೇ ಮಾಡಿದ ದೊಡ್ಡ ಅಪಮಾನ: ಡಿ.ಕೆ ಶಿವಕುಮಾರ್ ಕಿಡಿ

ರಾಮಮಂದಿರ ಭೂಮಿ ಖರೀದಿಯಲ್ಲಿ ಅಕ್ರಮ, ಇದು ದೇಶಕ್ಕೇ ಮಾಡಿದ ದೊಡ್ಡ ಅಪಮಾನ: ಡಿ.ಕೆ ಶಿವಕುಮಾರ್ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada