• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಪಾಲರು ಮಧ್ಯೆಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ ಒತ್ತಾಯ

Any Mind by Any Mind
June 17, 2021
in ಕರ್ನಾಟಕ, ರಾಜಕೀಯ
0
ರಾಜ್ಯಪಾಲರು ಮಧ್ಯೆಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ ಒತ್ತಾಯ
Share on WhatsAppShare on FacebookShare on Telegram

ಕರೋನ ನಿಯಂತ್ರಣ ಕೆಲಸ ಮಾಡಬೇಕಾದ ಸಚಿವರು, ಶಾಸಕರು ಎಲ್ಲಾ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿರತಿ ನೆಲೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸುತ್ತೇನೆ.

ADVERTISEMENT

ಕರೋನ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿರತಿ ನೆಲೆಯಾಗಿದೆ.

ರಾಜ್ಯದಲ್ಲಿ ಮತ್ತೆ ಕರೋನ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ. ಕರೋನ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ.

ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಕರೋನ ಸೋಂಕನ್ನು ನಿಖರವಾಗಿ ಪತ್ತೆಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋದನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ.

ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಇಂದಿನ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿಯನ್ನು ಎದುರಿಸಿ ರಾಜ್ಯದ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.

ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ.
ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ನರೇಂದ್ರಮೋದಿಯವರು ತಾವೊಬ್ಬ ದುರ್ಬಲ ನಾಯಕನೆಂದು ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರಮೋದಿಯವರು ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಅವರು ಸ್ಪಷ್ಟಪಡಿಸಲಿ.

Previous Post

ಜನರ ಕಷ್ಟದಲ್ಲಿ ಭಾಗಿಯಾಗಲು, ಅವರ ಧ್ವನಿಯಾಗಲು ಕಾಂಗ್ರೆಸ್ ಸಂಕಲ್ಪ: ಡಿ.ಕೆ. ಶಿವಕುಮಾರ್

Next Post

ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ

ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada