ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ ಕರೋನ ಪಾಸಿಟಿವ್ ಧೃಡಪಟ್ಟಿತ್ತು ಮತ್ತು ಅವರ 85 ವರ್ಷದ ಪತ್ನಿ ನಿರ್ಮಲ್ ಕೌರ್ ಸಹ ವೈರಸ್ ಸೋಂಕಿಗೆ ಒಳಗಾಗಿದ್ದರು, ಅವರು ಭಾನುವಾರ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೌರ್ ಅವರು ಮಾಜಿ ರಾಷ್ಟ್ರೀಯ ಮಹಿಳಾ ವಾಲಿಬಾಲ್ ತಂಡದ ನಾಯಕಿಯಾಗಿದ್ದರು.
ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಮಿಲ್ಖಾ ಸಿಂಗ್ ಅವರನ್ನು ಜೂನ್ 3 ರಂದು ಪಿ.ಜಿ.ಐ.ಎಂ.ಆರ್ ಗೆ ದಾಖಲಿಸಲಾಯಿತು. ಮಿಲ್ಖಾ ಸಿಂಗ್ ಅವರು ನಾಲ್ಕು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದಾರೆ ಮತ್ತು 1958 ಕಾಮನ್ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಕೂಡ ಹೌದು.1960 ರ ರೋಮ್ ಒಲಿಂಪಿಕ್ಸ್ನ 400 ಮೀಟರ್ ಫೈನಲ್ನಲ್ಲಿ ಅವರ ನಾಲ್ಕನೇ ಸ್ಥಾನ ಪಡೆದು ಗಮನ ಸೆಳೆದಿದ್ದರು.
ಅವರು 1956 ಮತ್ತು 1964 ರ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದರು ಮತ್ತು 1959 ರಲ್ಲಿ ಪದ್ಮಶ್ರೀ ಅವರಿಗೆ ನೀಡಲಾಯಿತು.






