• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇಕೆದಾಟು ವಿವಾದ: ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುಂತೆ ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ

Any Mind by Any Mind
June 19, 2021
in ಕರ್ನಾಟಕ, ರಾಜಕೀಯ
0
ಮೇಕೆದಾಟು ವಿವಾದ: ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುಂತೆ ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥ ಮೇಕೆದಾಟು ಯೋಜನೆಗೆ ತಮಿಳುನಾಡು ತಡೆ ಕೋರಿ ಅರ್ಜಿಯ ಸಲ್ಲಿಸಿತ್ತು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ) ರಾಜ್ಯದ ವಾದವನ್ನು ಶುಕ್ರವಾರ ಮನ್ನಿಸಿ, ಅರ್ಜಿಯನ್ನು ವಜಾಗೊಳಿಸಿತ್ತು ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ–ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದಿದ್ದಾರೆ.

ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸುವ ಯಡಿಯೂರಪ್ಪನವರ ಹೇಳಿಕೆಯನ್ನು ಸೋದರ ಎಂ.ಕೆ ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದೂ ತಪ್ಪಲ್ಲವೇ?‌ ಎಂದು ಪ್ರಶ್ನಿಸಿದ್ದಾರೆ.

ಹೊಗೇನಕಲ್‌ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು ಎಂ.ಕೆ. ಸ್ಟಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು. ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ ಎಂದಿದ್ದಾರೆ.

ಮೇಕೆದಾಟು ಯೋಜನೆಯನ್ನು ಯಾವ ಕೋನದಲ್ಲಿ ನೋಡಿದರೂ ಅದು ನ್ಯಾಯವಾಗೇ ಕಾಣುತ್ತದೆ. ಹೀಗಾಗಿ ವಿವಾದ ಅನಗತ್ಯ. ಕಾವೇರಿಗಾಗಿ ಕಲಹ ನಡೆದದ್ದು ಸಾಕು. ಈಗ ನಾವು ಸೋದರತೆ ಮೆರೆಯಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಸೋದರ ಎಂ.ಕೆ.ಸ್ಟಾಲಿನ್ ಅವರಿಗೆ ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅನಗತ್ಯ ಕಲಹದಲ್ಲಿ, ಅದೂ ಈ ಹೊತ್ತಲ್ಲಿ ನಾವು ಒಡೆದುಹೋಗಬಾರದು ಎಂದು ಮನವಿ ಮಾಡಿದ್ದಾರೆ.

Tags: Karnataka StatekumaraswamyM K StalinTamilnadu GovernmentYediyurappa
Previous Post

ರಾಜಾಸೀಟಿನಲ್ಲಿ ಅವೈಜ್ಞಾನಿಕ ಕಾಮಗಾರಿಯ ಆರೋಪ

Next Post

20 ದೇಶಗಳಲ್ಲಿ ಹೊಸ ರೂಪಾಂತರ ಕರೋನ ವೈರಸ್ ಪತ್ತೆ: ರೂಪಾಂತರ ‘ಲಾಂಬ್ಡಾ’ ಅಪಾಯಕಾರಿ: WHO

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
20 ದೇಶಗಳಲ್ಲಿ ಹೊಸ ರೂಪಾಂತರ ಕರೋನ ವೈರಸ್ ಪತ್ತೆ: ರೂಪಾಂತರ ‘ಲಾಂಬ್ಡಾ’ ಅಪಾಯಕಾರಿ: WHO

20 ದೇಶಗಳಲ್ಲಿ ಹೊಸ ರೂಪಾಂತರ ಕರೋನ ವೈರಸ್ ಪತ್ತೆ: ರೂಪಾಂತರ 'ಲಾಂಬ್ಡಾ' ಅಪಾಯಕಾರಿ: WHO

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada