• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯನ್ನು ಹೈಕಮಾಂಡ್ ತೀರ್ಮಾನಿಸುತ್ತದೆ – ಸಿದ್ದರಾಮಯ್ಯ

Any Mind by Any Mind
June 23, 2021
in ಕರ್ನಾಟಕ
0
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯನ್ನು ಹೈಕಮಾಂಡ್ ತೀರ್ಮಾನಿಸುತ್ತದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಚರ್ಚೆ ಅನವಶ್ಯಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಜಮೀರ್ ಅಹಮದ್ ಹೇಳಿಕೆಯ ಬೆನ್ನಲ್ಲಿ ಸಿದ್ದರಾಮಯ್ಯ ಅವರ ಈ ಸ್ಪಷ್ಟನೆ ಹೊರಬಂದಿದೆ.

ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಮುಖ್ಯ ಗುರಿ. ನಮ್ಮ ಎಲ್ಲ ನಾಯಕರು ಈ ಗುರಿಸಾಧನೆಗೆ ತಮ್ಮದೆ ರೀತಿಯಲ್ಲಿ ಕೆಲಸಮಾಡುತ್ತಿದ್ದಾರೆ. ನಮ್ಮ ವಿರೋಧಿ ಪಕ್ಷಗಳು ನಮ್ಮ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ಪ್ರಯತ್ನ ಮಾಡುತ್ತಿದೆ. ಅವರ ದುರುದ್ದೇಶ ಈಡೇರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡು ಇನ್ನೂ ಉರಿಯುತ್ತಿದೆ. ದೆಹಲಿಯಿಂದ ಬಂದ ಪ್ರತಿನಿಧಿಯೂ ಕೈಚೆಲ್ಲಿ ಹಿಂದಿರುಗಿದ್ದಾರೆ. ಈ ಒಳಜಗಳದಿಂದಾಗಿ ಇಡೀ ಸರ್ಕಾರ ಸ್ಥಬ್ದವಾಗಿದೆ. ಈ ವೈಫಲ್ಯದಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಜಗಳ ತಂದು ಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಗೆ ಕರ್ಚೀಫ್ ಹಾಕುವ ಮುನ್ನ ಕೇಳಿಕೊಳ್ಳಬೇಕಾದ ಪ್ರಶ್ನೆಗಳು!

ಕೊರೊನಾ ಸೋಂಕಿತರ ಸಾವಿನ ಬಗ್ಗೆ ರಾಜ್ಯ ಸರ್ಕಾರ ನೀಡುತ್ತಿರುವ ಅಂಕಿ ಅಂಶಗಳು ಸಂಪೂರ್ಣ ಸುಳ್ಳು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಮಂದಿ ಸಾವಿಗೀಡಾದಾಗ, ದುರಂತದಲ್ಲಿ ಸತ್ತವರ ಸಂಖ್ಯೆ ಕೇವಲ 4 ಎಂದು ಸುಳ್ಳು ಹೇಳಿತ್ತು. ಸರ್ಕಾರದ ಸುಳ್ಳು ಲೆಕ್ಕಕ್ಕೆ ಇದಕ್ಕಿಂತ ಬೇರೆ ನಿದರ್ಶನ ಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ.

ಅಧಿಕಾರದಾಸೆಗೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ, ಬಿಜೆಪಿ ಸೇರಿರುವ ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಬಾಂಬೆಗಾದ್ರೂ ಹೋಗಲಿ, ದೆಹಲಿಗಾದ್ರೂ ಹೋಗಲಿ. ಅವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Previous Post

ಮೈಸೂರಿನಲ್ಲಿ ಮೂರನೇ ಅಲೆಯ ಆತಂಕ : 10 ದಿನದಲ್ಲಿ 769 ಮಕ್ಕಳಿಗೆ ಸೋಂಕು

Next Post

ಸುಮಾರು 200 ಬಿಜೆಪಿ ಕಾರ್ಯಕರ್ತರು ವಾಪಸ್ ಟಿಎಂಸಿಗೆ: ಪಕ್ಷ ಬಿಟ್ಟು ಹೋಗಿದಕ್ಕೆ ಪ್ರಾಯಶ್ಚಿತ್ತ.!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಸುಮಾರು 200 ಬಿಜೆಪಿ ಕಾರ್ಯಕರ್ತರು ವಾಪಸ್ ಟಿಎಂಸಿಗೆ: ಪಕ್ಷ ಬಿಟ್ಟು ಹೋಗಿದಕ್ಕೆ ಪ್ರಾಯಶ್ಚಿತ್ತ.!

ಸುಮಾರು 200 ಬಿಜೆಪಿ ಕಾರ್ಯಕರ್ತರು ವಾಪಸ್ ಟಿಎಂಸಿಗೆ: ಪಕ್ಷ ಬಿಟ್ಟು ಹೋಗಿದಕ್ಕೆ ಪ್ರಾಯಶ್ಚಿತ್ತ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!