• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲಸಿಕೆಯಿಂದ ಮಾತ್ರ ಕರೋನಾದಿಂದ ದೂರವಿರಲು ಸಾಧ್ಯ: ಸಚಿವ ಡಾ.ಕೆ.ಸುಧಾಕರ್

Any Mind by Any Mind
June 24, 2021
in ಕರ್ನಾಟಕ
0
ಲಸಿಕೆಯಿಂದ ಮಾತ್ರ ಕರೋನಾದಿಂದ ದೂರವಿರಲು ಸಾಧ್ಯ: ಸಚಿವ ಡಾ.ಕೆ.ಸುಧಾಕರ್
Share on WhatsAppShare on FacebookShare on Telegram

ಲಸಿಕೆಯೊಂದರಿಂದಲೇ ಕರೋನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ADVERTISEMENT

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕರೋನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದಿದ್ದಾರೆ.

ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದಿದ್ದಾರೆ.

ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು. ರಾಜ್ಯದಲ್ಲಿರುವ ಸುಮಾರು 1 ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

Previous Post

ಕೋವಿಡ್ ಸಂಕಷ್ಟಕ್ಕೀಡಾದವರ ನೆರವಿಗೆ ಕಾಂಗ್ರೆಸ್ ಅಭಿಯಾನ; ಡಿ.ಕೆ. ಶಿವಕುಮಾರ್

Next Post

ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!