• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಹಾರಾಷ್ಟ್ರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ: ಕೇಂದ್ರದ ಅನುಮತಿಗಾಗಿ ಕಾಯುವುದಿಲ್ಲ – ಮಹಾ ಸರ್ಕಾರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
June 30, 2021
in ದೇಶ
0
ಮಹಾರಾಷ್ಟ್ರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ: ಕೇಂದ್ರದ ಅನುಮತಿಗಾಗಿ ಕಾಯುವುದಿಲ್ಲ – ಮಹಾ ಸರ್ಕಾರ ಸ್ಪಷ್ಟನೆ
Share on WhatsAppShare on FacebookShare on Telegram

ಪ್ರಾಯೋಗಿಕವಾಗಿ ಹಾಗೂ ನಡೆದಾಡಲು ಸಾಧ್ಯವಾಗದವರಿಗಾಗಿ ಮಹಾರಾಷ್ಟ್ರದಲ್ಲಿ ಮನೆ ಮನೆಗೆ ಕೋವಿಡ್ ಲಸಿಕೆ ತಲುಪಿಸುವ ಅಭಿಯಾನವನ್ನು ಆರಂಭಿಸುತ್ತೇವೆ ಎಂದು ಮಹಾರಾಷ್ಟ್ರ ರಾಜ್ಯ ಸರ್ಕಾರ ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಈ ಯೋಜನೆಯ ಅನುಷ್ಟಾನಕ್ಕಾಗಿ ಒಕ್ಕೂಟ ಸರ್ಕಾರದ ಅನುಮತಿ ಪಡೆಯಲು ಕಾಯುವುದಿಲ್ಲ ಎಂದು ಕೂಡಾ ಹೇಳಿದ್ದು, ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಚಾಟಿ ಬಿಸಿದೆ.

ADVERTISEMENT

ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಮತ್ತು ಜಸ್ಟೀಸ್ ಜೆ ಎಸ್ ಕುಲಕರ್ಣಿ ಅವರಿದ್ದ ವಿಭಾಗೀಯ ಪೀಠಕ್ಕೆ ಮಾಃಇತಿ ನೀಡಿರುವ ರಾಜ್ಯದ ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಅವರು, ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಪುಣೆಯಲ್ಲಿ ಆರಂಭಿಸಲಾಗುವುದು. ಈ ಯೋಜನೆಯ ರೂಪುರೇಷೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡುವವರೆಗೂ ಕಾಯುವುದಿಲ್ಲ. ರಾಜ್ಯ ಸರ್ಕಾರವೇ ಇದರ ನಿರ್ಣಯ ಕೈಗೊಳ್ಳಲಿದೆ, ಎಂದು ಹೇಳಿದ್ದಾರೆ.

ಇನ್ನು, ಈ ಯೋಜನೆ ಅನುಷ್ಟಾನಗೊಳಿಸುವ ರೂಪುರೇಷೆಗಳನ್ನು ಹೈಕೋರ್ಟ್ ಗೆ ವಿವರಿಸಿರುವ ಮಹಾರಾಷ್ಟ್ರ ಸರ್ಕಾರ, ಲಸಿಕೆ ಪಡೆಯುವ ಮುನ್ನ, ಲಸಿಕೆ ಪಡೆಯುತ್ತಿರುವ ಕುಟುಂಬದವರಿಂದ ಹಾಗೂ ಅವರ ಕುಟುಂಬದ ವೈದ್ಯರಿಂದ ಅನುಮತಿ ಪತ್ರಕ್ಕೆ ಸಹಿ ಪಡೆಯಲಾಗುವುದು. ಲಸಿಕೆಯಿಂದ ಏನಾದರೂ ಋಣಾತ್ಮಕ ಪರಿಣಾಮ ಬೀರಿದ್ದಲ್ಲಿ ಅದಕ್ಕೆ ಆ ಕುಟುಂಬದವರೇ ಹೊಣೆಗಾರರಾಗುವರು, ಎಂದು ಅಫಿಡವಿಟ್ ಸಲ್ಲಿಸಲಾಗಿದೆ.

ಇದಕ್ಕೆ ತೀಕ್ಷ್ಣವಾಗಿ ಉತ್ತರಿಸಿರುವ ಕೋರ್ಟ್, ಒಬ್ಬ ವೈದ್ಯ ಪ್ರಮಾಣ ಪತ್ರ ನೀಡಲು ಹೇಗೆ ಸಾಧ್ಯ. ಇಂತಹ ಅಪ್ರಾಯೋಗಿಕವಾದ ನಿಯಮಗಳನ್ನು ಹೇರಬೇಡಿ, ಎಂದಿದೆ.

ಮಂಗಳವಾರ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಮನೆ ಮನೆಗೆ ಲಸಿಕೆ ನೀಡಲು ಕೇಂದ್ರದ ಅನುಮತಿ ಕೋರುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿದ ಕಾರಣಕ್ಕೆ, ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇರಳ, ಕಾರ್ಝಂಡ್ ನಂತಹ ರಾಜ್ಯಗಳು ಕೇಂದ್ರದ ಅನುಮತಿಗಾಗಿ ಕಾಯಲಿಲ್ಲ. ಅವರು ಈಗಾಗಲೇ ಅಭಿಯಾನ ಆರಂಭಿಸಿ ಆಗಿದೆ. ಕೇಂದ್ರದ ಅನುಮತಿಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿತ್ತು.

ಇದಕ್ಕೆ ಉತ್ತರವಾಗಿ ಇಂದು ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಕೇಂದ್ರದ ಅನುಮತಿಗಾಗಿ ಕಾಯುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Previous Post

ಐಎಎಸ್ ಅಧಿಕಾರಿ ಶಿಖಾ ಸೇರಿದಂತೆ ಏಳು ಅಧಿಕಾರಿಗಳ ವರ್ಗಾವಣೆ

Next Post

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ಯಡಿಯೂರಪ್ಪ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ಯಡಿಯೂರಪ್ಪ

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada