• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ ಆಕ್ಸಿಜನ್ ದುರಂತ: ಇನ್ನೂ ಸಿಗದ ಮೃತರ ಪ್ರಮಾಣಪತ್ರ – ಡಿಕೆಶಿ ಆಕ್ರೋಶ

Any Mind by Any Mind
July 2, 2021
in ಕರ್ನಾಟಕ
0
ಚಾಮರಾಜನಗರ ಆಕ್ಸಿಜನ್ ದುರಂತ: ಇನ್ನೂ ಸಿಗದ ಮೃತರ ಪ್ರಮಾಣಪತ್ರ – ಡಿಕೆಶಿ ಆಕ್ರೋಶ
Share on WhatsAppShare on FacebookShare on Telegram

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಕೋವಿಡ್ ಸಾವು ಎಂದು ಮರಣ ಪ್ರಮಾಣ ಪತ್ರ ನೀಡದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ರಾಜ್ಯದಲ್ಲಿ 3.30 ಲಕ್ಷ ಕೋವಿಡ್ ಸಾವುಗಳ ಆಗಿವೆ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ನಾನು ಕೂಡ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಅದರಲ್ಲೂ ಚಾಮರಾಜನಗರದಲ್ಲೇ ಒಂದೇ ದಿನ 65 ಮಂದಿ ಆಕ್ಸಿಜನ್ ಇಲ್ಲದೆ ಸತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ 36 ಮಂದಿ ಸತ್ತಿದ್ದಾರೆ ಎಂದು ವರದಿ ಬಂದಿವೆ. ಸರ್ಕಾರ ಕೇವಲ 3 ಜನ ಸತ್ತಿದ್ದಾರೆ ಎಂದಿತ್ತು. ನಾನು 36 ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ಕೊಟ್ಟಿದ್ದೆ. ಇವರಲ್ಲಿ ಯಾರಿಗೂ ಸರ್ಕಾರ ಕೋವಿಡ್ ಸಾವು ಎಂದು ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ. ಈ ಮಧ್ಯೆ ಸರ್ಕಾರ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಸುಪ್ರೀಂ ಕೋರ್ಟ್ ಪರಿಹಾರ ನೀಡಲು ಕಾಲಾವಕಾಶ ನಿಗದಿ ಮಾಡಿದೆ ಎಂದರು.

ಆಂಧ್ರಪ್ರದೇಶ ಸರ್ಕಾರ ಮೃತರಿಗೆ ಪರಿಹಾರ ಘೋಷಿಸಿದೆ. ನಮ್ಮ ರಾಜ್ಯದಲ್ಲೂ ಮೃತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ಸೋಂಕಿನಿಂದ ಸತ್ತವರ ಮಾಹಿತಿ ಪಡೆಯಲು ಸರ್ಕಾರ ಡೆತ್ ಆಡಿಟ್ ಮಾಡಿ ಅವರಿಗೆ ಪರಿಹಾರ ನೀಡಬೇಕು. ನಿನ್ನೆ ನಮ್ಮ ಕಾರ್ಯಾಧ್ಯಕ್ಷರು ಬೀದರ್ ಒಂದೇ ಜಿಲ್ಲೆಯಲ್ಲಿ ಸರ್ಕಾರ ಹೇಗೆ ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ ಎಂದು ಹೇಳಿದ್ದಾರೆ. ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರತಿ ಮನೆಗೂ ಹೋಗಿ ಅವರ ಮಾಹಿತಿ ಪಡೆದು, ಅವರಿಗೆ ಪರಿಹಾರ ಸಿಗುವಂತೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದೇವೆ. ನಾವು ಈ ಸಂಕಷ್ಟದ ಸಮಯದಲ್ಲಿ ಜನರ ಬೆನ್ನಿಗೆ ನಿಲ್ಲುತ್ತೇವೆ’ ಎಂದು ತಿಳಿಸಿದರು.

ಇನ್ನು ವಿಜಯೇಂದ್ರ ಅವರ ಹೆಸರಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಪಿಎ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಸಚಿವರ ಪಿಎಗಳ ವ್ಯವಹಾರಗಳ ಬಗ್ಗೆ ಮಾತನಾಡುವುದಿಲ್ಲ’ ಎಂದು ತಿಳಿಸಿದರು.

ಕಾಂಗ್ರೆಸ್ ಅಪ್ಪ, ಅಮ್ಮ ಇಲ್ಲದ ಮನೆಯಾಗಿದೆ ಎಂಬ ಸಚಿವ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಅಯ್ಯೋ ಪಾಪ, ವಿಧಾನಸಭೆ ಚುನಾವಣೆ ಬರಲಿ, ಜನರೇ ಉತ್ತರ ಕೊಡುತ್ತಾರೆ’ ಎಂದರು.

ಇನ್ನು ಕುಮಾರಸ್ವಾಮಿ ಅವರು 17 ಮಂದಿ ಪಕ್ಷ ತೊರೆದವರ ವಿಚಾರವಾಗಿ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿ, ‘ಕುಮಾರಸ್ವಾಮಿ ಅವರ ಹೇಳಿಕೆಯನ್ನು ನೋಡಿದೆ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ. ಅವರ ಜೀವ ಉಳಿಸುವುದು ಎಂದರೆ ಯಾವ ರೀತಿ ಎಂದು ಗೊತ್ತಾಗಿಲ್ಲ’ ಎಂದರು

Tags: BSYDKShivakumarkarnataka gKPCC
Previous Post

ಜಾನ್ಸನ್‌ & ಜಾನ್ಸನ್ ಲಸಿಕೆ ಡೆಲ್ಟಾದ ವಿರುದ್ಧ ಪರಿಣಾಮಕಾರಿ: ವರದಿ

Next Post

ಕೆಲಸ ಕೊಡಿಸುವುದಾಗಿ ಹಣ ವಸೂಲಿ: ಚರ್ಚೆಗೆ ಗ್ರಾಸವಾದ ರಾಮುಲು ಪಿಎ ಬಂಧನ-ಬಿಡುಗಡೆ.! ಇಲ್ಲಿದೆ ಸಂಪೂರ್ಣ ಸುದ್ದಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕೆಲಸ ಕೊಡಿಸುವುದಾಗಿ ಹಣ ವಸೂಲಿ: ಚರ್ಚೆಗೆ ಗ್ರಾಸವಾದ ರಾಮುಲು ಪಿಎ ಬಂಧನ-ಬಿಡುಗಡೆ.! ಇಲ್ಲಿದೆ ಸಂಪೂರ್ಣ ಸುದ್ದಿ

ಕೆಲಸ ಕೊಡಿಸುವುದಾಗಿ ಹಣ ವಸೂಲಿ: ಚರ್ಚೆಗೆ ಗ್ರಾಸವಾದ ರಾಮುಲು ಪಿಎ ಬಂಧನ-ಬಿಡುಗಡೆ.! ಇಲ್ಲಿದೆ ಸಂಪೂರ್ಣ ಸುದ್ದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!