• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ: ಕರೋನ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ವಿನಂತಿ

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ
0
ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ: ಕರೋನ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ವಿನಂತಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನ ಸೋಂಕು ಹರಡುವಿಕೆ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಇಂದು ಅನ್ ಲಾಕ್ 3.0 ಮಾಡಿದ್ದು ಇದಕ್ಕೆ ಸಂಬಂಧಪಟ್ಟ ಮಾರ್ಗಸೂಚಿ ಜಾರಿಗೊಳಿಸಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ, ರಾಜ್ಯದಲ್ಲಿ ಮತ್ತಷ್ಟು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ.

ADVERTISEMENT

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ, ಜುಲೈ 5, 2021 ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: ಜುಲೈ 19, 2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳಗೆ ಸಮೂದಿರುವ ಆರ್ಥಿಕ ಚಟುವಟಿಕೆಗಳು ಮತ್ತು ಇನ್ನಿತರೆ ಚಟುವಟಿಕೆಗಳಿಗೆ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ತಿಳಿಸಿದೆ.

ಯಾವುದಕ್ಕೆ ಅವಕಾಶ:

ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇಕಡಾ 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇಕಡಾ 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

ಯಾವುದು ನಿರ್ಬಂಧ:

ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ವಾರಾಂತ್ಯ ಕರ್ಪ್ಯೂಗೆ ಬ್ರೇಕ್, ನೈಟ್ ಕರ್ಫ್ಯೂ ಜಾತಿ:

ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

ಹೆಚ್ಚಿನ ನಿರ್ಬಂಧಗಳಿಗೆ ಜಿಲ್ಲಾ ಉಸ್ತುವಾರಿಗಳ ಜೊತೆ ಚರ್ಚೆ:

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿಸಿದೆ.

Previous Post

IBPS ಪರೀಕ್ಷೆ: 2014 ಕ್ಕೂ ಮುಂಚಿನ ನಿಯಮಾವಳಿಗಳ ಪುನರ್ ಜಾರಿಗೆ ಜಿಸಿ ಚಂದ್ರಶೇಖರ್‌ ಮನವಿ

Next Post

ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

Related Posts

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..
Top Story

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

by ಪ್ರತಿಧ್ವನಿ
May 24, 2026
0

ಬೆಂಗಳೂರು : ಸಂತೋಷ್ ಲಾಡ್ ಫೌಂಡೇಶನ್ ನ ಸಂಸ್ಥಾಪಕರಾದ ಸಂತೋಷ್ ಹಾಗೂ ಇಂಡಿಯಾ ರೈಸಿಂಗ್ ಫೌಂಡೇಶನ್ ಸಹಯೋಗದಲ್ಲಿ ನಗರದ ಬಳ್ಳಾರಿ ರಸ್ತೆಯಲ್ಲಿರುವ ಎಂಬೆಸಿ ಒನ್ ನ ಫೋರ್...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
Next Post
ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada