• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ, ರಾಜಕೀಯ
0
ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ಕೋವಿಡ್ ಸಂಕಷ್ಟ ನಿವಾರಣೆಗೆ ನಾನು ಹಾಗೂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ADVERTISEMENT

ಕೋವಿಡ್ ಸಂಕಷ್ಟಪೀಡಿತರಿಗೆ ಸಾಂತ್ವನ ಹೇಳಿ, ಅವರಿಗೆ ಪರಿಹಾರ ಸಿಗುವಂತೆ ಮಾಡಲು ಕಾಂಗ್ರೆಸ್ ಒಂದು ತಿಂಗಳ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಕಾರ್ಯಕರ್ತರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ಕೋವಿಡ್ ನಿಂದ ನಿಮಗಾಗಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೊಡಿ. ನಾನು ಹಾಗೂ ಸಿದ್ದರಾಮಯ್ಯನವರು ವಿಧಾನಸೌಧದಲ್ಲಿ ನಿಮ್ಮ ಪರ ಹೋರಾಟ ಮಾಡುತ್ತೇವೆ’ ಎಂದೂ ಅವರು ತಿಳಿಸಿದ್ದಾರೆ.

ರಾಜಾಜಿನಗರದ ಮಂಜುನಾಥನಗರದಲ್ಲಿ ಆಹಾರ ಕಿಟ್ ಗಳ ವಿತರಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ, ಮಾತನಾಡಿದ ಡಿ.ಕೆ. ಶಿವಕುಮಾರ್ ‘ಈ ಭಾಗದಲ್ಲಿ ನಮ್ಮ ನಾಯಕರು ನೂರಾರು ದಿನಗಳಿಂದ ಬಡವರಿಗೆ ಆಹಾರ ಕಿಟ್ ಗಳನ್ನು ನೀಡುತ್ತಿದ್ದಾರೆ. ಕನಿಷ್ಟ ಸಾವಿರ ರೂಪಾಯಿ ಮೌಲ್ಯದ ಫುಡ್ ಕಿಟ್ ನೀಡುತ್ತಿದ್ದಾರೆ. ಕೃಷ್ಣಮೂರ್ತಿ ಅವರು ಶ್ರೀಮಂತರಲ್ಲ. ಅವರಿಗೆ ಅಧಿಕಾರವೂ ಇಲ್ಲ. ಅವರನ್ನು ನೀವು ಕಾರ್ಪೊರೇಷನ್ ಗೆ ಕಳುಹಿಸಿದ್ದೀರಿ ಎಂಬ ಕಾರಣಕ್ಕೆ ಅವರು ತಮ್ಮ ಕೈಲಾದ ಸಹಾಯವನ್ನು ನಿಮಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿರುವವರೆಲ್ಲ ಕಾರ್ಮಿಕರು. ಕಳೆದ ವರ್ಷ ನಿಮಗೆ 10 ಸಾವಿರ ಕೊಡಿಸಲು ನಾನು ಹಾಗೂ ಸಿದ್ದರಾಮಯ್ಯನವರು ಹೋರಾಟ ಮಾಡಿದೆವು. ಸರ್ಕಾರ 5 ಸಾವಿರ ನೀಡುವುದಾಗಿ ಹೇಳಿತ್ತು. ಆದರೆ ಆ ಹಣ ನಿಮಗೆ ಬಂತಾ.? ಈ ವರ್ಷ ಘೋಷಿಸಿದ 2-3 ಸಾವಿರ ಪರಿಹಾರ ಬಂತಾ.? ಯಾರಿಗೂ ಬಂದಿಲ್ಲ. ನಮ್ಮ ಹೋರಾಟಕ್ಕೆ ಹೆದರಿ ಸರ್ಕಾರ ಕಳೆದ ವರ್ಷ 1900 ಕೋಟಿ, ಈ ವರ್ಷ ಸಾವಿರ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿತು. ಚಾಲಕರಿಗೆ 5 ಸಾವಿರ ನೀಡುತ್ತೇವೆ ಎಂದರು, ಅವರಿಗೂ ಹಣ ಬರಲಿಲ್ಲ. ಇದು ನುಡಿದಂತೆ ನಡೆಯದ ಸರ್ಕಾರ. ಅದಕ್ಕಾಗಿಯೇ ಇಂದು ಇಲ್ಲಿನ 5 ಸಾವಿರ ಜನಕ್ಕೆ ಫುಡ್ ಕಿಟ್ ನೀಡಲು ನಮ್ಮ ನಾಯಕರು ಮುಂದಾಗಿದ್ದಾರೆ.

ನಮ್ಮ ಶಾಸಕರು ಇರುವ ಕಡೆ ಮಾತ್ರವಲ್ಲ, ಎರಡು ಮೂರು ಬಾರಿ ನಮ್ಮ ಅಭ್ಯರ್ಥಿಗಳು ಸೋತಿರುವ ಕ್ಷೇತ್ರಗಳಲ್ಲೂ ಪಕ್ಷದ ವತಿಯಿಂದ ಬಡವರಿಗೆ ಸಹಾಯ ಹಸ್ತ ನೀಡಲಾಗಿದೆ. ಅಲ್ಲಿನ ಬೇರೆ ಪಕ್ಷದ ಶಾಸಕರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಮ್ಮ ನಾಯಕರುಗಳು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸೋತಿದ್ದರೂ ಸಂಕಷ್ಟದ ಸಮಯದಲ್ಲಿ ನಿಮ್ಮ ಕೈ ಬಿಡಲಿಲ್ಲ. ಇದು ಬೆಂಗಳೂರಿನ ವಿಚಾರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಮ್ಮವರು ಜನರ ಸಹಾಯಕ್ಕೆ ನಿಂತಿದ್ದಾರೆ. ಕೊರೋನಾ ಸಂತ್ರಸ್ತರಿಂದ ಅರ್ಜಿ ಹಾಕಿಸಿ, ಅವರಿಗೆ ಪರಿಹಾರ ಒದಗಿಸಲು ವಾರ್ಡ್ ವಾರು ತಂಡಗಳನ್ನು ರಚಿಸಿ ಜನರಿಗೆ ನೆರವಾಗಲು ಕಾರ್ಯಕ್ರಮ ರೂಪಿಸಿದ್ದೇವೆ. ಸತ್ತವರ ಕುಟುಂಬ, ಆಸ್ಪತ್ರೆಯಲ್ಲಿ ನರಳಾಡಿದವರು, ಉದ್ಯೋಗ, ಆದಾಯ ಕಳೆದುಕೊಂಡವರಿಗೆ ಆಗಿರುವ ನಷ್ಟ, ಸಮಸ್ಯೆಯನ್ನು ಪಟ್ಟಿ ಮಾಡಿಕೊಡಿ. ನಿಮ್ಮ ಪರವಾಗಿ ನಾನು ಹಾಗೂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಹೇಗೆ ಹೋರಾಟ ಮಾಡುತ್ತೇವೆ ಎಂಬುದನ್ನು ನೋಡಿ.

ನಿಮ್ಮ ನೋವಿಗೆ ಸರಕಾರದ ಯಾರೂ ಸ್ಪಂದಿಸಲಿಲ್ಲ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗಲಿಲ್ಲ. ಪರಿಹಾರ ಪಡೆಯಲು ನೀವು ಆನ್ಲೈನ್ ನಲ್ಲಿ ಅರ್ಜಿ ಹಾಕಬೇಕಂತೆ. ಇದಕ್ಕಾಗಿಯೇ ನಾವು ಕಾರ್ಯಕ್ರಮ ರೂಪಿಸಿದ್ದು, ನಿಮ್ಮ ಮನೆಗೆ ನಮ್ಮ ಕಾರ್ಯಕರ್ತರು ಬರುತ್ತಾರೆ. ನಿಮಗೆ ಪರಿಹಾರ ಕೊಡಿಸಲು ನಾವು ಪ್ರಯತ್ನಿಸುತ್ತೇವೆ. ಮುಂದಿನ ಬಾರಿ ನೀವು ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ನಿಮ್ಮ ಋಣ ಹೇಗೆ ತೀರಿಸುತ್ತೇವೆ ಎಂಬುದರ ಬಗ್ಗೆ ಮುಂದೆ ಮಾತನಾಡುತ್ತೇನೆ. ನಮ್ಮ ಚುನಾವಣಾ ಪ್ರಣಾಳಿಕೆ ಬಂದಾಗ ಏನು ಹೇಳಬೇಕೋ ಅದನ್ನು ಹೇಳುತ್ತೇವೆ’ ಎಂದು ತಿಳಿಸಿದ್ದಾರೆ.

Previous Post

ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ: ಕರೋನ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ವಿನಂತಿ

Next Post

ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

ಸಚಿವ ಸುರೇಶಕುಮಾರ್ ‘ಪರೀಕ್ಷಾ ವ್ಯಾಪಾರಿ’ ಎಂದ ಶಿಕ್ಷಣ ತಜ್ಞರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada