• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಕುಮಾರಸ್ವಾಮಿ ರಾಜಕೀಯವಾಗಿ ನೆಲೆ ಕಳೆದುಕೊಂಡಿದ್ದಾರೆʼ – ಸಿ ಪಿ ಯೋಗೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
July 8, 2021
in ಕರ್ನಾಟಕ
0
ʼಕುಮಾರಸ್ವಾಮಿ ರಾಜಕೀಯವಾಗಿ ನೆಲೆ ಕಳೆದುಕೊಂಡಿದ್ದಾರೆʼ – ಸಿ ಪಿ ಯೋಗೇಶ್ವರ್
Share on WhatsAppShare on FacebookShare on Telegram


‘ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ರವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅವಾಚ್ಯ ಪದ ಬಳಕೆ ಮಾಡಲಾಗಿದ್ದು, ಖಂಡನೀಯ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ರವರು ಬಿಡದಿಯ ಈಗಲ್ಟನ್‍ ಗಾಲ್ಫ ರೆಸಾರ್ಟನಲ್ಲಿ ಹೇಳಿದ್ದಾರೆ.

ADVERTISEMENT

‘ಕೆ.ಆರ್.ಎಸ್‍ ಆಣೆಕಟ್ಟಿನ 30 ಕಿ.ಮೀ ವ್ಯಾಪ್ತಿಯ ಹಲವು ದಶಕಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲು ಗಣಿಗಾರಿಕೆಗೆ ಸ್ಪೋಟಕಗಳನ್ನು ಬಳಸುತ್ತಾರೆ. ಇದರಿಂದ ಕೆ.ಆರ್.ಎಸ್‍ ಗೋಡೆಗೆ ದಕ್ಕೆಯುಂಟಾಗಲಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿಯೂ ಸಹ  ಬಂದಿವೆ. ಈ ನಿಟ್ಟಿನಲ್ಲಿ ಸುಮಲತಾ ರವರು ಕೆ.ಆರ್.ಎಸ್‍ ಆಣೆಕಟ್ಟು ಬಿರುಕು ಬೀಳುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರು ತಮ್ಮ ಬಳಿ ಇರುವ ಮಾಹಿತಿಯನ್ನು ಹೇಳಬೇಕಿತ್ತು. ಅದನ್ನು ಬಿಟ್ಟು ಸುಮಲತಾ ರವರನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದು ಅವರಿಗೆ ಶೋಭೆ ತರುವುದಿಲ್ಲ. ಕುಮಾರಸ್ವಾಮಿ ವ್ಯಕ್ತಿತ್ವ ಕಳೆದುಕೊಂಡಿದ್ದಾರೆ. ಅವರನ್ನು ಮಾದ್ಯಮಗಳು ವಿಜೃಂಭಿಸುವುದು ಬೇಡ. ಅವರು ಘನತೆ ಹಾಗೂ ತೂಕವನ್ನು ಕಳೆದುಕೊಂಡಿದ್ದಾರೆ’ ಎಂದಿದ್ದಾರೆ.

ʼನಾನು ನನ್ನ ಜಿಲ್ಲೆ ರಾಮನಗರದ ಸಮಸ್ಯೆಗಳ ಬಗ್ಗೆ ಮಾತನಾಡಿದ ಮರುದಿನವೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳ ಮನೆಗೆ ಓಡಿ ಹೋಗುತ್ತಾರೆ. ಅದು ನನಗೆ ತಿರುಗುಬಾಣವಾಗುತ್ತಿದೆ. ಕುಮಾರಸ್ವಾಮಿ ರಾಜಕೀಯವಾಗಿ ನೆಲೆ ಕಳೆದುಕೊಂಡಿದ್ದಾರೆ. ರಾಜಕೀಯವಾಗಿ ದಿನೇ-ದಿನೇ ದುರ್ಬಲವಾಗುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪರವರ ಸಹಕಾರವಿಲ್ಲದಿದ್ದರೇ ಜೆ.ಡಿ.ಎಸ್‍ ಎಂ.ಎಲ್‍.ಎ ಗಳು ಆ ಪಕ್ಷದಲ್ಲಿ ಇರುತ್ತಿರಲಿಲ್ಲ. ಅವರನ್ನು ಉಳಿಸಿಕೊಳ್ಳಲು ಪದೇ-ಪದೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ರಾಮನಗರ, ಮಂಡ್ಯ ಬಿಟ್ಟರೇ ಅವರ ಪಕ್ಷಕ್ಕೆ ಬೇರೆ ಎಲ್ಲೂ ಅಸ್ತಿತ್ವವಿಲ್ಲ. ಉತ್ತರ ಕರ್ನಾಟಕಕ್ಕೆ ಹೋಗಿ ಪಕ್ಷ ಕಟ್ಟಲೀ ನೋಡೋಣʼ ಎಂದು ಕುಮಾರಸ್ವಾಮಿಗೆ ಸಚಿವ ಯೋಗೇಶ್ವರ ತಿರುಗೇಟು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ʼನಾನು ರಾಜ್ಯ ಬಿ.ಜೆ.ಪಿ ಸರ್ಕಾರ ಹಾಗೂ ಬಿ.ಜೆ.ಪಿ ಪಕ್ಷದೊಳಗಿನ ಲೋಪದೋಷಗಳ ಬಗ್ಗೆ ಮತ್ತು ನನಗೆ ಆಗಿರುವ ನೋವುಗಳ ಬಗ್ಗೆ ಆಯಾ ಸಂದರ್ಭದಲ್ಲಿ ನನ್ನ ನಿಲುವನ್ನು ಪ್ರದರ್ಶಿಸಿದ್ದೇನೆ. ಅದಕ್ಕೆ ಬದ್ಧವಾಗಿರುತ್ತೇನೆ. ರೇಣುಕಾಚಾರ್ಯರವರು ಸಿ.ಎಂ ರವರ ರಾಜಕೀಯ ಕಾರ್ಯದರ್ಶಿ ಆಗಬೇಕಾದರೆ ನನ್ನ ಶ್ರಮವು ಇದೇ. ಅವರಿಗೆ ಸಪ್ತ ಸಚಿವರ ವಸತಿ ಗೃಹದಲ್ಲಿ ಕ್ವಾಟರ್ಸ್ ದೊರೆಯಲು ಹಾಗೂ ಹೊನ್ನಾಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ರೂ.1000.00 ಕೋಟಿ ಅನುದಾನ ಸಿಗಲು ನನ್ನ ಅಳಿಲು ಸೇವೆ ಇದೇ ಎಂಬುದನ್ನು ಅವರು ಮರೆಯಬಾರದುʼ ಎಂದು ರೇಣುಕಾಚಾರ್ಯರಿಗೆ ಯೋಗೇಶ್ವರ ತಿರುಗೇಟು ನೀಡಿದ್ದಾರೆ.

ʼನನ್ನನ್ನು ರಾಜೀನಾಮೆ ನೀಡಿ, ವಿಧಾನಸಭೆಗೆ ಆಯ್ಕೆಯಾಗಿ ಬನ್ನಿ ಎಂದು ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ನಾನು ಸಚಿವನಾಗಿದ್ದಾಗಲೇ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಿದ್ದೇನೆ. 05 ಬಾರಿ ವಿವಿಧ ಚಿನ್ಹೆಗಳಲ್ಲಿ ಸ್ಪರ್ಧಿಸಿ, ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ರೇಣುಕಾಚಾರ್ಯ ರವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಬಗ್ಗೆ 40 ಶಾಸಕರು ಹೈಕಮಾಂಡಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಎಲ್ಲಾ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ವರಿಷ್ಠರಿಗೆ ಹೇಳಿದ್ದೇನೆ. ಮುಂದೆ ಫಲಿತಾಂಶ ಪ್ರಕಟವಾಗಲಿದೆʼ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಇದೇ ವೇಳೆ ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ ರವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಯೋಗೇಶ್ವರರವರು ʼಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪರವರ ಆಡಳಿತ ವೈಕರಿಗಳನ್ನು ಒಪ್ಪಿದ್ದೇನೆ. ನನಗೆ ಆಗುತ್ತಿರುವ ಕಿರುಕುಳ ಹಾಗೂ ನೋವಿನ ಬಗ್ಗೆ ಹೇಳಿಕೊಂಡಿದ್ದೇನೆ. ಕುಮಾರಸ್ವಾಮಿ ಯಡಿಯೂರಪ್ಪರವರಿಗೆ ದುಂಬಾಲು ಬೀಳಲು ಹಗಲು ಹೊತ್ತು ಹೋದರೇ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಾತ್ರಿವೇಳೆ ಸಿ.ಎಂ ರವರನ್ನು ಭೇಟಿಯಾಗುತ್ತಾರೆ. ನಾನು ಸಿ.ಎಂ ಬದಲಾಗಬೇಕೆಂದು ಯಾವಾಗಲೂ ಹೇಳಿಲ್ಲ. ನಿನ್ನೇ ತಾನೆ ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳು ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ಇದು ಸಂತಸದ ವಿಷಯ. ನಮ್ಮ ಮುಖ್ಯಮಂತ್ರಿಗಳು ಸಹ ಸಮರ್ಥರಾಗಿದ್ದು, ನಾನು ಅವರ ವಿರುದ್ಧವೆಂದು ಬಿಂಬಿಸಬೇಡಿʼ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: CP YogeshwarkumaraswamyMP RenukacharyaST Somshekarsumalatha
Previous Post

‘ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು’ – ಸಿದ್ದರಾಮಯ್ಯ

Next Post

ಮಾಜಿ ಸಿಎಂ ಎಚ್ಡಿಕೆ- ಹಾಲಿ ಸಂಸದೆ ಸುಮಲತಾ ವಾಗ್ವಾದದ ಹಕೀಕತ್ತು ಏನು?

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಮಾಜಿ ಸಿಎಂ ಎಚ್ಡಿಕೆ- ಹಾಲಿ ಸಂಸದೆ ಸುಮಲತಾ ವಾಗ್ವಾದದ ಹಕೀಕತ್ತು ಏನು?

ಮಾಜಿ ಸಿಎಂ ಎಚ್ಡಿಕೆ- ಹಾಲಿ ಸಂಸದೆ ಸುಮಲತಾ ವಾಗ್ವಾದದ ಹಕೀಕತ್ತು ಏನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada