• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ಟಾನ್ ಸ್ವಾಮಿ ಅವರನ್ನು ಜೈಲಿನಲ್ಲಿ ಕೊಲ್ಲಲಾಯಿತು: ಕೇಂದ್ರ ಸರ್ಕಾರದ ವಿರುದ್ಧ ಸಂಜಯ್ ರಾವುತ್ ಗಂಭೀರ ಆರೋಪ

ಫಾತಿಮಾ by ಫಾತಿಮಾ
July 12, 2021
in ದೇಶ
0
ಸ್ಟಾನ್ ಸ್ವಾಮಿ ಅವರನ್ನು ಜೈಲಿನಲ್ಲಿ ಕೊಲ್ಲಲಾಯಿತು: ಕೇಂದ್ರ ಸರ್ಕಾರದ ವಿರುದ್ಧ ಸಂಜಯ್ ರಾವುತ್ ಗಂಭೀರ ಆರೋಪ
Share on WhatsAppShare on FacebookShare on Telegram

ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ಮಾತನಾಡುತ್ತಾ ಶಿವಸೇನೆಯ ಸಂಸದ ಸಂಜಯ್ ರೌತ್ ಅವರು ಬುಡಕಟ್ಟು ಜನರ ಹಕ್ಕುಗಳ ಕಾರ್ಯಕರ್ತರನ್ನು ಜೈಲಿನಲ್ಲಿ “ಕೊಲ್ಲಲಾಯಿತು” ಎಂದು ಹೇಳಿದ್ದಾರೆ. 84 ವರ್ಷದ ವ್ಯಕ್ತಿಯೊಬ್ಬರು ನರೇಂದ್ರ ಮೋದಿ ಸರ್ಕಾರವನ್ನು ಉರುಳಿಸಬಲ್ಲಷ್ಟು ದೇಶದ ಅಡಿಪಾಯ ದುರ್ಬಲವಾಗಿದೆಯೆ ಎಂದು ‌ಕೇಳಿದ ಸೇನಾ ಸಂಸದರು, ಕೇಂದ್ರ ಸರ್ಕಾರವನ್ನು ಹಿಟ್ಲರ್ ಮತ್ತು ಮುಸೊಲಿನಿಗೆ ಹೋಲಿಸಿದ್ದಾರೆ.

ADVERTISEMENT

ಅಕ್ಟೋಬರ್‌ನಲ್ಲಿ ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ್ದ ಸ್ವಾಮಿ ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ನ್ಯಾಯಾಂಗ ಬಂಧನದಲ್ಲಿ ನಿಧನರಾಗಿದ್ದರು.

ಜಾರ್ಜ್‌ನ ಫರ್ನಾಂಡಿಸ್ ಅವರು ತಮ್ಮ ಸರ್ಕಾರವನ್ನು ಉರುಳಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಹೊರಿಸಿದ್ದ ಇಂದಿರಾಗಂಧಿಯವರ ಸರ್ಕಾರಕ್ಕೆ ಪ್ರಸ್ತುತ ಸರ್ಕಾರವನ್ನು ಹೋಲಿಸಿದ ಅವರು “ಇಂದಿರಾ ಗಾಂಧಿ ಜಾರ್ಜ್ ಫರ್ನಾಂಡಿಸ್‌ಗೆ ಹೆದರುತ್ತಿದ್ದರು. ಜಾರ್ಜ್ ಆಗ ಯುವ ನಾಯಕರಾಗಿದ್ದರು ಮತ್ತು ಫಾದರ್ ಸ್ಟಾನ್ ಸ್ವಾಮಿಯಂತೆ ವಯಸ್ಸಾಗಿರಲಿಲ್ಲ. ಆದರೆ ಇಂದಿನ ಸರ್ಕಾರವು 84-85 ವರ್ಷ ವಯಸ್ಸಿನ ಸ್ಟಾನ್ ಸ್ವಾಮಿ ಮತ್ತು ವರ್ವರ ರಾವ್ ಅವರಿಗೆ ಹೆದರುತ್ತಿದೆ ಮತ್ತು ಜೈಲಿನಲ್ಲಿ ಸ್ಟಾನ್ ಸ್ವಾಮಿ ಅವರನ್ನು ಕೊಲ್ಲಲಾಯಿತು ” ಎಂದು ರೌತ್ ಅವರು ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿನ ತಮ್ಮ ಸಾಪ್ತಾಹಿಕ ಅಂಕಣದಲ್ಲಿ ಹೇಳಿದ್ದಾರೆ.

“84 ವರ್ಷದ ಮನುಷ್ಯನಿಗೆ ಹೆದರುವ ಸರ್ಕಾರವು ವರ್ತನೆಯಲ್ಲಿ ಸರ್ವಾಧಿಕಾರಿವಾಗಿದೆ ಆದರೆ ಹೃದಯದಲ್ಲಿ ಹಿಟ್ಲರ್ ಮತ್ತು ಮುಸಲೊನಿಯಂತೆ ದುರ್ಬಲವಾಗಿದೆ” ಎಂದು ಹೇಳಿದರು.

ಎಲ್ಗಾರ್ ಪರಿಷತ್‌ನಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಬೆಂಬಲಿಸಲಾಗುವುದಿಲ್ಲ ಆದರೆ ನಂತರ ನಡೆದದ್ದನ್ನು ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪಿತೂರಿ ಎಂದು ಕರೆಯಬೇಕಾಗುತ್ತದೆ ಎಂದು ಅವರು ಹೇಳಿದರು. “ರಾಜ್ಯ, ದೇಶದ್ರೋಹ ಮತ್ತು ರಾಷ್ಟ್ರ ವಿರೋಧಿ ಯುದ್ಧ ಮಾಡುವುದು ಎಂದರೇನು? ಕಾಡುಗಳಲ್ಲಿನ ಬುಡಕಟ್ಟು ಜನರಲ್ಲಿ ತಮ್ಮ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಬಗ್ಗೆ ಅರಿವು ಮೂಡಿಸುವುದು ದೇಶವನ್ನು ಉರುಳಿಸುವುದೇ? ಜನರಲ್ಲಿ ಪ್ರತಿಭಟನೆಯ ಕಿಡಿ ಹೊತ್ತಿಸುವುದು ಹೇಗೆ ದೇಶದ್ರೋಹವಾಗುತ್ತದೆ?” ಎಂದು ರೌತ್ ಕೇಳಿದರು.

“ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗಿಂತ ಮಾವೋವಾದಿಗಳು ಮತ್ತು ನಕ್ಸಲರು ಹೆಚ್ಚು ಅಪಾಯಕಾರಿಯಾಗಿದ್ದರೂ 84 ವರ್ಷದ ಅಂಗವಿಕಲ ಮತ್ತು ಅಸಹಾಯಕ ಫಾದರ್ ಸ್ಟಾನ್ ಸ್ವಾಮಿ ಜೈಲಿನಲ್ಲಿ ಮರಣ ಹೊಂದಿರುವುದನ್ನು ಸಮರ್ಥಿಸಲಾಗುವುದಿಲ್ಲ ” ಎಂದ ಅವರು

“ಸರ್ಕಾರವನ್ನು ವಿರೋಧ ಮಾಡುವುದಕ್ಕೂ ದೇಶವನ್ನು ವಿರೋಧ ಮಾಡುವುದಕ್ಕೂ ವ್ಯತ್ಯಾಸವಿದೆ. ಸರ್ಕಾರವನ್ನು ವಿರೋಧಿಸುವುದು ದೇಶದ ವಿರುದ್ಧದ ಪಿತೂರಿ ಎಂದು ಯಾರಾದರೂ ಭಾವಿಸಿದರೆ, ಸರ್ವಾಧಿಕಾರದ ಬೀಜಗಳನ್ನು ಅವರ ಮನಸ್ಸಿನಲ್ಲಿ ಬಿತ್ತಲಾಗಿದೆ ಎಂದರ್ಥ ” ಎಂದಿದ್ದಾರೆ.

Previous Post

ಸಾಮಾಜಿಕ ನ್ಯಾಯದ ಕುರಿತಾಗಿ ಮೌನ..

Next Post

ಯಾವ ಕ್ಷಣವೂ ಅಪ್ಪಳಿಸಬಹುದು ಅಪಾಯಕಾರಿ ಸೌರ ಮಾರುತ!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಯಾವ ಕ್ಷಣವೂ ಅಪ್ಪಳಿಸಬಹುದು ಅಪಾಯಕಾರಿ ಸೌರ ಮಾರುತ!

ಯಾವ ಕ್ಷಣವೂ ಅಪ್ಪಳಿಸಬಹುದು ಅಪಾಯಕಾರಿ ಸೌರ ಮಾರುತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada