• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ವಿಲ್ಲನ್ʼ – ಆಡಿಯೋ ವೈರಲ್ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
July 19, 2021
in ಕರ್ನಾಟಕ
0
ʼಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ವಿಲ್ಲನ್ʼ – ಆಡಿಯೋ ವೈರಲ್ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆ
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ ನಳಿನ್‌ ಕುಮಾರ್‌ ಕಟೀಲ್‌ ಅವರೆದ್ದೆನ್ನಲಾದ ವೈರಲ್‌ ಆಡಿಯೋ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ. ಪಕ್ಷ ಕಟ್ಟಿದ ಬಿಎಸ್‌ವೈ , ಈಶ್ವರಪ್ಪ ಹಾಗೂ ಶೆಟ್ಟರ್‌ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷರೇ ವಿಲ್ಲನ್‌ ಆಗಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌, ʼಸಿಎಂ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ, ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್‌ ಕುಮಾರ್‌ ಕಟೀಲ್‌.ʼ ಎಂದು #BJPvsBJP ಎಂಬ ಹ್ಯಾಶ್‌ಟ್ಯಾಗ್‌ ಮೂಲಕ ಟ್ವೀಟ್‌ ಮಾಡಿದೆ.

ಸರಣಿ ಟ್ವೀಟ್‌ ಮಾಡಿದ ಕಾಂಗ್ರೆಸ್‌,  ಬಿಜೆಪಿ ಪಕ್ಷದ ಮೀರ್ ಸಾದಿಕ್  ನಳಿನ್‌ ಕುಮಾರ್‌ ಕಟೀಲ್‌ ಬಗ್ಗೆ ಬಿ ಎಸ್‌ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್‌ ಶೆಟ್ಟರ್‌ ಹಾಗೂ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ!. ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ!. ಎಂದು ವ್ಯಂಗ್ಯ ಮಾಡಿದೆ.

ʼಬಿ ಎಸ್‌ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ , ಈಶ್ವರಪ್ಪ ಅವರು ರಾಜಕಾರಣಕ್ಕೆ ಬಂದಾಗ ನಳಿನ್‌ ಕುಮಾರ್‌ ಕಟೀಲ್‌ ಗೋಲಿ ಆಡುವುದನ್ನೂ ಕಲಿತಿರಲಿಲ್ಲ!. ಮಂಗಳೂರು ಭಾಗದಲ್ಲಿ ಅಬ್ಬೇಪಾರಿಯಾಗಿ ತಿರುಗುತ್ತಿದ್ದ ಕಟೀಲ್ ಇಂದು ಪಕ್ಷ ಕಟ್ಟಿದವರನ್ನೇ ಮೂಲೆಗುಂಪು ಮಾಡಲು ಸಜ್ಜಾಗಿದ್ದಾರೆ. ಬಿಜೆಪಿಯನ್ನ ಮುಳುಗಿಸಲು ಬೇರೆ ಯಾರ ಪ್ರಯತ್ನವೂ ಬೇಡ, ಕಟೀಲ್ ಒಬ್ಬರೇ ಸಾಕುʼ ಎಂದು ಟೀಕಿಸಿದೆ.

ADVERTISEMENT
Tags: Karnataka BJPKarnataka CongressNalin Kumar Kateel
Previous Post

ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಕೊಟ್ಟ ಸಚಿವ ಸುರೇಶ್ ಕುಮಾರ್

Next Post

ಕರೋನ ಬಗ್ಗೆ ಕಠಿಣ ಪ್ರಶ್ನೆ ಕೇಳಿ, ಉತ್ತರಿಸಲು ಅವಕಾಶ ಕೊಡಿ; ಪ್ರಧಾನಿ ಮೋದಿ

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಸಂಪುಟ ವಿಸ್ತರಣೆಯ ವದಂತಿ; ಸಚಿವರೊಂದಿಗೆ ನಡೆಯಬೇಕಿದ್ದ ಪ್ರಧಾನಿ ಸಭೆ ರದ್ದು

ಕರೋನ ಬಗ್ಗೆ ಕಠಿಣ ಪ್ರಶ್ನೆ ಕೇಳಿ, ಉತ್ತರಿಸಲು ಅವಕಾಶ ಕೊಡಿ; ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada