• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕಿತ್ತಾಕೋದರ ಬಗ್ಗೆ ನಾನು ಮೊದಲ ಹೇಳಿದ್ದೇ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 19, 2021
in ಕರ್ನಾಟಕ, ರಾಜಕೀಯ
0
ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಿಎಂ ಬಿಎಸ್ ಯಡಿಯೂರಪ್ಪ ಸದ್ಯದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹೊತ್ತಲೇ ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಪದತ್ಯಾಗ ಮಾಡಲಿದ್ದಾರೆ. ಪುತ್ರ ವಿಜಯೇಂದ್ರ ಜತೆಗೆ ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳು ಚರ್ಚಿಸಿದ್ದರು. ಮೋದಿ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಮೊಗದಲ್ಲಿ ಖುಷಿ ಕಂಡು ಬಂದಿತ್ತು. ಈಗಂತೂ ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಕ ಎಂದು ಹೇಳುತ್ತಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಾಡಿದ್ದಾರೆ.

ADVERTISEMENT

ಈ ಸಂಬಂಧ ಬೆಂಗಳೂರನಲ್ಲಿ ಮಾತಾಡಿದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ ಎಂದು ಮೊದಲೇ ಹೇಳಿದ್ದೇ. ನಾನು ಹೇಳಿದ್ದನ್ನು ನೀವ್ಯಾರು ನಂಬಲೇ ಇಲ್ಲ. ನನಗೆ ಬಂದ ಮಾಹಿತಿಯನ್ನೇ ನಿಮ್ಮ ಬಳಿ ಶೇರ್ ಮಾಡಿದ್ದೇ ಹೊರತು ಭವಿಷ್ಯ ನುಡಿದಿರಲಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮೊದಲಿಂದಲೂ ಮಾಹಿತಿ ಇತ್ತು. ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ. ಯಡಿಯೂರಪ್ಪ ಭ್ರಷ್ಟ, ಅವರ ಮಗ ಭ್ರಷ್ಟ, ಈ ಸರ್ಕಾರ ತೊಲಗಿದರೆ ಒಳ್ಳೆಯದು. ಕಾಂಗ್ರೆಸ್ ಸರ್ಕಾರ ಚುನಾವಣೆ ಎದುರಿಸಲು ಸಿದ್ಧ. ಈಗ ಚುನಾವಣೆ ಬರುತ್ತೆ ಅಂತ ನನಗೆ ಅನ್ನಿಸ್ತಿಲ್ಲ ಎಂದು ತಿಳಿಸಿದರು.

ಅವಧಿಪೂರ್ವ ಚುನಾವಣೆ ಬರುತ್ತೆ ಅಂತ ನನಗೆ ಅನ್ನಿಸ್ತಿಲ್ಲ. ಯಡಿಯೂರಪ್ಪನ ತೆಗೆದರೆ ಇನ್ನೊಬ್ಬರ ಸಿಎಂ ಮಾಡ್ತಾರೆ. ನಳೀನ್ ಕುಮಾರ್ ಕಟೀಲ್ ಆಡಿಯೋವನ್ನು ತಿರಸ್ಕಾರ ಮಾಡಿದ್ದಾರೆ. ಅದು ನಂದಲ್ಲ ಎಂದು ಕಟೀಲ್ ಹೇಳುತ್ತಿರುವುದು ಸುಳ್ಳು ಇರಬಹುದು. ಒಬ್ಬ ಕರಪ್ಟ್ ಸಿಎಂ ಹೋಗ್ಬೇಕು ಅನ್ನೋದಷ್ಟೇ ನಮ್ಮ ಉದ್ದೇಶ ಎಂದರು.

ಹೊಸ ಸಿಎಂ ಆದ ನಂತರ ಮಂತ್ರಿಗಳ ಬದಲಾವಣೆ ಆಗಬಹುದು. ನಾನು ಒಂದು ವರ್ಷದ ಹಿಂದೆಯೇ ಸಿಎಂ ಬದಲಾಗ್ತಾರೆ ಅಂದಿದ್ದು ಭವಿಷ್ಯ ಅಲ್ಲ, ಅದು ನನ್ನ ಮಾಹಿತಿ. ಭವಿಷ್ಯ ಹೇಳೋದ್ರಲ್ಲಿ ನನಗೆ ನಂಬಿಕೆ ಇಲ್ಲ, ಭವಿಷ್ಯ ಹೇಳೋರನ್ನೂ ನಾನು ನಂಬಲ್ಲ. ನನಗಿದ್ದ ಮಾಹಿತಿಯನ್ನು ನಾನು ನಿಮಗೆ ಹೇಳಿದ್ದೆ ಅಷ್ಟೇ. ನಾನು ಯಾವತ್ತೂ ಭವಿಷ್ಯ ಹೇಳಿಲ್ಲ, ಭವಿಷ್ಯ ಹೇಳೋದರಲ್ಲಿ ನನಗೆ ನಂಬಿಕೆ ಇಲ್ಲ ಎಂದರು.

ರಾಹುಲ್ ತಮ್ಮನ್ನು ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಹೀಗೆಂದರು. ಯಾವ ಕಾರಣಕ್ಕೆ ನಮ್ಮನ್ನು ಕರೆದಿದ್ದಾರೆ ಅಂತ ನಿಮಗೆ ಹೇಳಕ್ಕೆ ಆಗುತ್ತಾ. ನನಗೂ ಅದರ ಬಗ್ಗೆ ಗೊತ್ತಿಲ್ಲ. ರಾಹುಲ್ ಗಾಂಧಿ ನಮ್ಮ ವರಿಷ್ಠರು, ಕರೆದಿದ್ದಾರೆ ಹೋಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪದಾಧಿಕಾರಿಗಳ ನೇಮಕ ವಿಚಾರ ನಿಮಗೆ ಹೇಳಿದ್ದಾರಾ? ಯಾವ ವಿಚಾರಕ್ಕೆ ಕರೆದಿದ್ದಾರೆ ಅನ್ನೋದು ಯಾರಿಗೆ ಗೊತ್ತು? ಸುಮ್ಮನೆ ಊಹಾಪೋಹ ಮಾಡಬೇಡಿ ಎಂದು ಸಿದ್ದರಾಮಯ್ಯ ಗರಂ ಆದರು.

Tags: siddaramaiahYediyurappa
Previous Post

ರಾಜ್ಯದಲ್ಲಿ SSLC ಪರೀಕ್ಷೆಗೆ 99.67% ವಿದ್ಯಾರ್ಥಿಗಳು ಹಾಜರು – ಸಚಿವ ಸುರೇಶ್‌ ಕುಮಾರ್‌

Next Post

ಅಧಿಕಾರದಿಂದ ಬಿಜೆಪಿ ತೆಗೆದು ಕಾಂಗ್ರೆಸ್ ಕೂರಿಸಲು ಜನ ತೀರ್ಮಾನಿಸಿದ್ದಾರೆ: ಡಿ.ಕೆ. ಶಿವಕುಮಾರ್

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್

ಅಧಿಕಾರದಿಂದ ಬಿಜೆಪಿ ತೆಗೆದು ಕಾಂಗ್ರೆಸ್ ಕೂರಿಸಲು ಜನ ತೀರ್ಮಾನಿಸಿದ್ದಾರೆ: ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada