• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಕ್ಸಿಜನ್‌ ಕೊರತೆಯಿಂದಾದ ಸಾವುಗಳ ಬಗ್ಗೆ ಕೇಂದ್ರ ವರದಿಯನ್ನೇ ಕೇಳಿಲ್ಲ: ಛತ್ತೀಸ್ಗಢ

ಪ್ರತಿಧ್ವನಿ by ಪ್ರತಿಧ್ವನಿ
July 24, 2021
in ದೇಶ
0
ಆಕ್ಸಿಜನ್‌ ಕೊರತೆಯಿಂದಾದ ಸಾವುಗಳ ಬಗ್ಗೆ ಕೇಂದ್ರ ವರದಿಯನ್ನೇ ಕೇಳಿಲ್ಲ: ಛತ್ತೀಸ್ಗಢ
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿಲ್ಲ, ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸುತ್ತಿಲ್ಲ ಮಾತ್ರವಲ್ಲ ತನ್ನ ತಪ್ಪುಗಳನ್ನೂ ರಾಜ್ಯಗಳ ಮೇಲೆ ಹೊರಿಸಿ, ತಾನು ಬಚಾವಾಗುತ್ತದೆ ಎಂಬ ಆರೋಪಕ್ಕೆ ಪೂರಕವೆಂಬಂತೆ ಛತ್ತೀಸ್‌ಘಡ ಆರೋಗ್ಯ ಸಚಿವರ ಈ ಹೇಳಿಕೆ ಬಂದಿದೆ.

ADVERTISEMENT

ದೇಶಾದ್ಯಂತ ಅಪ್ಪಳಿದ ಕರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಕುರಿತು ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂಬ ಕೇಂದ್ರ ಸರ್ಕಾರ ಹೇಳಿಕೆಗೆ ಛತ್ತೀಸ್‌ಘಡ ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಪ್ರತ್ಯುತ್ತರ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಗಳಿಂದ ಅಂಕಿ ಅಂಶಗಳನ್ನು ಕೇಳಿಲ್ಲ ಎಂದು ಅವರು ಹೇಳಿದ್ದಾರೆ.

ಜುಲೈ 20 ರಂದು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಆಕ್ಸಿಜನ್‌ ಕೊರತೆಯ ಸಾವುಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರದಿಯನ್ನು ನೀಡಿಲ್ಲ ಎಂದು ಹೇಳಿತ್ತು. ಕೇಂದ್ರ ಸರ್ಕಾರದ ಈ ಬೇಜವಾಬ್ದಾರಿ ನಡೆಯು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

“ಭಾರತ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಮದ ನಿರಂತರವಾಗಿ ಮಾಹಿತಿ ನೀಡಲಾಗಿದೆ. ಆದರೆ, ಅವರು ಆಮ್ಲಜನಕದ ಕೊರತೆಯಿಂದ ಉಂಟಾಗುವ ಸಾವುಗಳ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕೇಳಲಿಲ್ಲ. ಈಗ ರಾಜ್ಯಗಳು ಸರಿಯಾದ ಡೇಟಾ ನೀಡಲ್ಲ ಎಂದು ಹೇಳುತ್ತಿದ್ದಾರೆ. ಇದು ಅವರ ವೈಫಲ್ಯ ಅಸಮರ್ಥತೆಯನ್ನು ಮುಚ್ಚಿಕೊಳ್ಳಲು ಹೇಳುತ್ತಿರುವ ದುರುದ್ದೇಶದ ಹೇಳಿಕೆಯಾಗಿದೆ” ಎಂದು ಟಿಎಸ್‌ ಸಿಂಗ್‌ ಡಿಯೋ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಛತ್ತಿಸ್‌ಘಡ ರಾಜ್ಯದಲ್ಲಿ ಆಕ್ಸಿಜನ್‌ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗಿದೆ. ಹೀಗಾಗಿ ನಾವು ಆಕ್ಸಿಜನ್‌ ಕೊರತೆಗೆ ಸಂಬಂಧಿಸಿದ ಸಾವುಗಳನ್ನು ದಾಖಲಿಸಿಲ್ಲ. ಆದರೆ, ಈ ಬಗ್ಗೆ ನಾವು ಮೊಂಡುತನವನ್ನು ಪ್ರದರ್ಶಿಸುವುದಿಲ್ಲ. ಆಕ್ಸಿಜನ್‌ ಸಾವುಗಳ ಬಗ್ಗೆ ಜನರು ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಪಡೆಯಲು ನಾವು ಸಿದ್ದರಿದ್ದೇವೆ. ಆಕ್ಸಿಜನ್‌ ಸಂಬಂಧಿತ ಸಾವುಗಳ ಬಗ್ಗೆ ಮರು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೂ, ಕೆಲವು ದೂರುಗಳನ್ನು ಪಡೆಯಲಾಗಿದೆ. ಹಾಗಾಗಿ, ಈ ಕುರಿತು ಎದ್ದಿರುವ ಗೊಂದಗಳನ್ನು ನಿವಾರಿಸಲು ನಾವು ಸಾವುಗಳ ಅಂಕಿಅಂಶಗಳನ್ನು ಮರು ಲೆಕ್ಕಪರಿಶೋಧನೆ ಮಾಡುತ್ತಿದ್ದೇವೆ” ಎಂದು ಸಿಂಗ್ ಡಿಯೋ ತಿಳಿಸಿದ್ದಾರೆ.

ದೇಶಾದ್ಯಂತ ಇದೇ ರೀತಿಯ ಸಾವುಗಳ ಲೆಕ್ಕಪರಿಶೋಧನೆ ನಡೆಸಬೇಕೆಂದು ಒಕ್ಕೂಟ ಸರ್ಕಾರವನ್ನು ಸಿಂಗ್ ಡಿಯೋ ಒತ್ತಾಯಿಸಿದ್ದಾರೆ. “ಯಾವುದೇ ಪುರಾವೆಗಳಿಲ್ಲದೆ ಲಸಿಕೆ ವ್ಯರ್ಥವಾಗಿದೆಯೆಂದು ಕೇಂದ್ರವು ಛತ್ತಿಸ್‌ಘಡದ ಮೇಲೆ ಆರೋಪ ಮಾಡುತ್ತಿದೆ. ಈ ರೀತಿ ದೇಶಾದ್ಯಂತ ತಮ್ಮ ತಂಡಗಳನ್ನು ಕಳುಹಿಸುವ ಮೂಲಕ ಎಷ್ಟು ಸಾವುಗಳು ಸಂಭವಿಸಿವೆ ಎಂಬುದನ್ನು ತಿಳಿಯಲು ಸಾಧ್ಯವಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಪಾರದರ್ಶಕತೆ ಪ್ರಜಾಪ್ರಭುತ್ವದಿಂದ ಚುನಾಯಿತವಾದ ಸರ್ಕಾರದ ಒಂದು ಅಂಶವಾಗಿದೆ. ಪಾರದರ್ಶಕತೆಗೆ ಕಾಂಗ್ರೆಸ್‌ ಬದ್ದವಾಗಿದೆ. ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಕೊರೊನಾ ರೋಗಿಯು ಸಾವನ್ನಪ್ಪಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಎನ್‌ಜಿಒಗಳು, ನಾಗರಿಕ ಸಮಾಜದ ಸದಸ್ಯರು ಮತ್ತು ರಾಜ್ಯದ ಪತ್ರಕರ್ತರಿಗೆ ನಾವು ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

Previous Post

ಹೈಕಮಾಂಡ್ ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ: ಸಚಿವ ಮುರುಗೇಶ್ ನಿರಾಣಿ

Next Post

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada