• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ: ನೂತನ ಸಿಎಂ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಸಲಹೆ

Any Mind by Any Mind
July 28, 2021
in ಕರ್ನಾಟಕ, ರಾಜಕೀಯ
0
ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದ ನೂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಾಲು ಸಾಲು ಸಮಸ್ಯೆ ಗಳನ್ನು ನೂತನ ಮುಖ್ಯ ಮಂತ್ರಗಳ ಮುಂದಿರಿಸಿ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

ADVERTISEMENT

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ ಅವರು, ವಿರೋಧ ಪಕ್ಷದ ನಾಯಕ
ಪ್ರಮಾಣವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯ ಕೋರಿದ್ದಾರೆ.

ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದಿದ್ದಾರೆ.

ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ ಎಂದಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದಿದ್ದಾರೆ.

ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ ಎಂದಿದ್ದಾರೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದಿದ್ದಾರೆ.

Tags: Basavaraj Bommaiಬಿಜೆಪಿಸಿದ್ದರಾಮಯ್ಯ
Previous Post

ಪ್ರಾಮಾಣಿಕ-ಜನಪರ ಆಡಳಿತ ನನ್ನ ಗುರಿ: ಅಧಿಕಾರಿಗಳ ಜೊತೆ ನಡೆಸಿದ ಮೊದಲ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಾಕೀತು!

Next Post

ಕೋವಿಡ್-19: ಅನಾಥರಾದ ಮಕ್ಕಳ ಶಿಕ್ಷಣ ಮುಂದುವರಿದಿರುವುದನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕೋವಿಡ್-19: ಅನಾಥರಾದ ಮಕ್ಕಳ ಶಿಕ್ಷಣ ಮುಂದುವರಿದಿರುವುದನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ಕೋವಿಡ್-19: ಅನಾಥರಾದ ಮಕ್ಕಳ ಶಿಕ್ಷಣ ಮುಂದುವರಿದಿರುವುದನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada