• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷ ಪೂರೈಸಿದೆ: ಸಿದ್ದರಾಮಯ್ಯ ಟೀಕೆ

Any Mind by Any Mind
July 29, 2021
in ಕರ್ನಾಟಕ, ರಾಜಕೀಯ
0
ʼ12 ಬಾರಿ ಚಾಮರಾಜನಗರಕ್ಕೆ ಹೋಗಿದ್ದ ನಾನು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿರಲಿಲ್ಲವೇ?ʼ ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷ ಪೂರೈಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

ADVERTISEMENT

ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೀವಿ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಹೊಡೆದರು. ಕೊರೋನ ಸಂದರ್ಭದಲ್ಲೂ ವಿಪರೀತ ಭ್ರಷ್ಟಾಚಾರ ನಡೆಸಿದ್ದು ಮಾತ್ರವಲ್ಲದೆ ಮಕ್ಕಳ ಪೌಷ್ಠಿಕಾಂಶ ಹೆಚ್ಚಿಸಲಿಕ್ಕಾಗಿ ಮೀಸಲಿಟ್ಟ ಮೊಟ್ಟೆಯ ಹಣವನ್ನೂ ಸರ್ಕಾರ ನುಂಗಿ ನೀರು ಕುಡಿಯಿತು ಎಂದು ಅವರು ಕಿಡಿ ಕಾರಿದ್ದಾರೆ.

ಎರಡು ವರ್ಷಗಳ ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕರೋನಾ ಸಲಕರಣೆಗಳು ವೆಂಟಿಲೇಟರ್, ಸ್ಯಾನಿಟೈಸರ್, ಪಿಪಿಇ ಕಿಟ್ಗಳ ಖರೀದಿಯಲ್ಲೂ ಲಂಚ ತಿಂದರು. ಮಾರುಕಟ್ಟೆ ದರಕ್ಕಿಂತ ಎರಡು ಮೂರು ಪಟ್ಟು ಹೆಚ್ಚಿನ ಬೆಲೆಗೆ ಖರೀದಿ ಮಾಡಿ ನೂರಾರು ಕೋಟಿ ಬಿಲ್ ಮಾಡಿಕೊಂಡರು. ಕರೋನ ಕಾಲದ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ದಾಖಲೆ ಸಮೇತ ಬಹಿರಂಗಗೊಳಿಸಿದೆ ಎಂದಿದ್ದಾರೆ.

ಇದ್ಯಾವುದಕ್ಕೂ ಮುಖ್ಯಮಂತ್ರಿಗಳು ಉತ್ತರ ಕೊಡಲೇ ಇಲ್ಲ. ಆರೋಗ್ಯ ಸಚಿವ ಸುಧಾಕರ್ ನಾನು ಹೇಳಿದ್ದನ್ನೆಲ್ಲಾ ಒಪ್ಪಿಕೊಂಡರು. ಆದರೂ ಭ್ರಷ್ಟಾಚಾರ ನಡೆದೇ ಇಲ್ಲ ಎಂದು ವಾದಿಸಿ ಸುಳ್ಳು ಹೇಳಿದರು. ಕೊರೋನ ಸಾವಿನ ಪ್ರಮಾಣದಲ್ಲೂ ಸರ್ಕಾರ ವಿಪರೀತ ಸುಳ್ಳು ಹೇಳಿದೆ. ಸರ್ಕಾರ ಹೇಳುತ್ತಿರುವುದಕ್ಕೂ 10 ಪಟ್ಟು ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದಿದ್ದಾರೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತದ ಬಗ್ಗೆಯೂ ಸುಳ್ಳು ಹೇಳಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು ಕೇವಲ ಮೂರೇ ಮಂದಿ ಎಂದು ಸುಳ್ಳು ಹೇಳಿದರು. ಆದರೆ ಮೃತಪಟ್ಟವರು 24 ಕ್ಕೂ ಹೆಚ್ಚು ಮಂದಿ. ಇವರ ಸುಳ್ಳುಗಳಿಗೆ ಇದೊಂದು ಉದಾಹರಣೆ ಅಷ್ಟೆ ಎಂದಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟೇ ಇಲ್ಲ ಎಂದು ಕೇಂದ್ರವೂ ಸುಳ್ಳು ಹೇಳುತ್ತಿದೆ. ಇಡೀ ದೇಶದಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಕೊರೋನ ನಿರ್ವಹಣೆಯಲ್ಲಿನ ವೈಫಲ್ಯದಿಂದಲೇ ಮೃತಪಟ್ಟಿದ್ದಾರೆ. ಎರಡನೇ ಅಲೆ ಬಂದಿದ್ದು 2021ರ ಫೆಬ್ರವರಿ-ಮಾರ್ಚ್ನಲ್ಲಿ. ಆದರೆ, 2020 ರ ನವೆಂಬರ್‌ನಲ್ಲೇ ತಜ್ಞರು ವರದಿ ನೀಡಿ ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಐದು ತಿಂಗಳು ಸಮಯಾವಕಾಶವಿತ್ತು. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊಣೆಗೇಡಿತನದಿಂದ ವರ್ತಿಸಿದ್ದರಿಂದಲೆ ಇಷ್ಟೊಂದು ಸಾವುಗಳು ಸಂಭವಿಸಿದವು ಎಂದಿದ್ದಾರೆ.

ಆಕ್ಸಿಜನ್ ಕೊರತೆ, ಬೆಡ್ಗಳ ಕೊರತೆ, ವೆಂಟಿಲೇಟರ್ಗಳ ಕೊರತೆ, ಐಸಿಯು ಬೆಡ್ಗಳ ಕೊರತೆ, ಜೀವ ರಕ್ಷಕ ಔಷಧಗಳ ಕೊರತೆ, ಆಂಬುಲೆನ್ಸ್ಗಳ ಕೊರತೆಯಿಂದ ಲಕ್ಷಾಂತರ ಮಂದಿ ಆಸ್ಪತ್ರೆಗಳ ಬಾಗಿಲಲ್ಲೇ ಮೃತಪಟ್ಟರು. ಸರ್ಕಾರ ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದರೆ ಈ ಸಾವುಗಳನ್ನು ತಡೆಯಬಹುದಿತ್ತು. ಆದ್ದರಿಂದ ಈ ಸಾವುಗಳ ಹೊಣೆಯನ್ನು ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಯಡಿಯೂರಪ್ಪ ಅವರು ಹೊರಬೇಕು ಎಂದಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗಗಳು ಕೆಲಸವಿಲ್ಲದೆ, ಊಟವಿಲ್ಲದೆ ಕೊರಗಿದರು. ಇವರಿಗೆ 10 ಸಾವಿರ ಪರಿಹಾರ ಹಣ ಮತ್ತು 10 ಕೆಜಿ ಅಕ್ಕಿ ಕೊಡಲು ಒತ್ತಾಯಿಸಿದ್ದೆ. ಆದರೆ ಸರ್ಕಾರದ ಹೃದಯ ಕೆಲಸವನ್ನೇ ಮಾಡಲಿಲ್ಲ. ಎಲ್ಲಾ ಬಿಪಿಎಲ್ ಕಾರ್ಡ್ದಾರರ ಖಾತೆಗಳಿಗೆ ತಲಾ 10 ಸಾವಿರ ರೂಪಾಯಿ ಹಾಕಿದ್ದರೆ ಸರ್ಕಾರಕ್ಕೆ ಹೆಚ್ಚೆಂದರೆ 12 ಸಾವಿರ ಕೋಟಿ ಖರ್ಚಾಗುತ್ತಿತ್ತು. 2 ಲಕ್ಷ 46 ಸಾವಿರ ಕೋಟಿ ಬಜೆಟ್‌ನಲ್ಲಿ ಹಸಿದವರಿಗಾಗಿ, ಬಡವರಿಗಾಗಿ 10 ಸಾವಿರ ರೂಪಾಯಿ ಕೊಡುವುದು ಕಷ್ಟವಿತ್ತಾ ? ಇದು ಎರಡು ವರ್ಷಗಳ ಸಾಧನೆಯಾ ? ವೈಫಲ್ಯವಾ ? ಎಂದು ಪ್ರಶ್ನಿಸಿದ್ದಾರೆ.

ಆರ್ಥಿಕ ಶಿಸ್ತು ಪಾಲಿಸದೆ ನಿಯಮ ಮೀರಿ ಸಾಲ ಮಾಡಿದ್ದು, ನಿಯಮ ಮೀರಿದ ಸಾಲ ತೀರಿಸುವುದಕ್ಕೇ ಮತ್ತೆ ಸಾಲ ಮಾಡುವ ಸ್ಥಿತಿಗೆ ಸರ್ಕಾರ ಬಂದಿದೆ. ರಾಜ್ಯದ ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. 4 ಲಕ್ಷ ಕೋಟಿವರೆಗೂ ಸಾಲ ಮಾಡಿರುವ ರಾಜ್ಯ ಸರ್ಕಾರದ ಬಳಿ ಈ ಸಾಲವನ್ನು ತೀರಿಸುವ ಯೋಜನೆಗಳೇ ಇಲ್ಲ. ಜಿಡಿಪಿಯ ದರದ ಶೇ 25ಕ್ಕಿಂತ ಸಾಲದ ಪ್ರಮಾಣ ಹೆಚ್ಚಾಗಬಾರದು ಎನ್ನುವುದು ನಿಯಮ. ರಾಜ್ಯ ಮತ್ತು ಕೇಂದ್ರ ಎರಡರಲ್ಲೂ ನಿಯಮ ಮೀರಿ ಸಾಲ ಮಾಡಿ ಅದರ ಹೊರೆಯನ್ನು ಜನರ ತಲೆ ಮೇಲೆ ಹೊರಿಸಿದ್ದಾರೆ ಎಂದಿದ್ದಾರೆ.

ಯುಪಿಎ ಸರ್ಕಾರದ ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ಈಗ ಅದು 135 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶ ಸ್ವಾತಂತ್ರ್ಯಗೊಂಡ ಬಳಿಕ 70 ವರ್ಷಗಳಲ್ಲಿ ಮಾಡಿದ ಸಾಲ 53 ಲಕ್ಷ ಕೋಟಿ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿ ಆದ 6 ವರ್ಷಗಳಲ್ಲೇ 82 ಲಕ್ಷ ಕೋಟಿ ಸಾಲ ಮಾಡಿ ಒಟ್ಟು ದೇಶದ ಸಾಲವನ್ನು 135 ಕೋಟಿಗೆ ತಲುಪಿಸಿದ್ದಾರೆ. ಅಚ್ಛೆ ದಿನ್ ಅಂದರೆ ಇದೇನಾ ? ಎಂದು ಪ್ರಶ್ನಿಸಿದ್ದಾರೆ

ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಜಿಡಿಪಿ ಶೇ10-11 ರಲ್ಲಿ ಇತ್ತು. ಮೋದಿ ಅವರ ಆಡಳಿತದಲ್ಲಿ ಮೈನಸ್ 7 ಕ್ಕೆ ಕುಸಿದಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದರು. ಆದರೆ 12 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. “ಕೆಲಸ ಕೊಡಿ ಮೋದಿ ಅವರೇ’ ಎಂದು ದೇಶದ ವಿದ್ಯಾವಂತ ನಿರುದ್ಯೋಗಿ ಯುವಕರು/ಯುವತಿಯರು ಕೇಳುತ್ತಿದ್ದಾರೆ. ಆದರೆ, ಮೋದಿ ಅವರು ಪಕೋಡ ಮಾರಿ ಎಂದು ಸಲಹೆ ಕೊಡುತ್ತಿದ್ದಾರೆ ಎಂದಿದ್ದಾರೆ.

ಅಡುಗೆ ಎಣ್ಣೆಯ ಬೆಲೆ 80 ರೂಪಾಯಿ ಇದ್ದದ್ದು 200 ರೂಪಾಯಿ ದಾಟಿದೆ. ಹೀಗಾಗಿ ಪಕೋಡ ಕೂಡ ಮಾರಲಾಗದ ಸ್ಥಿತಿ ಬಂದಿದೆ. “ಮೋದಿ-ಮೋದಿ” ಎಂದು ಕೂಗಿದ ದೇಶದ ಯುವಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊಟ್ಟ ಅಚ್ಛೆ ಅಂದರೆ ಇದೆ ಎಂದಿದ್ದಾರೆ.

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 5495 ಕೋಟಿ ಬರಬೇಕಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಪಾಲಿನ 5495 ಸಾವಿರ ಕೋಟಿ ಕೊಡಲು ಸಾಧ್ಯವಿಲ್ಲ ಎಂದು ಮುಲಾಜಿಲ್ಲದೆ ಹೇಳಿದರು. ಇದನ್ನು ರಾಜ್ಯ ಸರ್ಕಾರವಾಗಲೀ, ರಾಜ್ಯದ ಬಿಜೆಪಿ ಸಂಸದರಾಗಲೀ ಪ್ರಶ್ನಿಸಲೇ ಇಲ್ಲ ಎಂದಿದ್ದಾರೆ.

ಪೆಟ್ರೋಲ್ ಮೇಲಿನ ಎಕ್ದೈಸ್ ಡ್ಯೂಟಿಯನ್ನು 9 ರೂನಿಂದ 33 ರೂಪಾಯಿಗೆ, ಡೀಸೆಲ್ ಮೇಲಿನ ಎಕ್ಸೈಸ್ ಡ್ಯೂಟಿಯನ್ನು 3 ರೂನಿಂದ 32 ರೂಪಾಯಿಗೆ ಏರಿಸಿದ್ದಾರೆ. ಅಂದರೆ ಹತ್ತು ಪಟ್ಟು ಹೆಚ್ಚಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100 ರೂ. ದಾಟುವಂತೆ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೀವಿ ಎಂದು ಹೇಳಿದ್ದಿರಿ. ಇದೇನಾ ನೀವು ಸೃಷ್ಟಿಸಿದ ಸ್ವರ್ಗ ಎಂದಿದ್ದಾರೆ.

ರಾಜ್ಯ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. 2019 ರಲ್ಲಿ 69 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾಳಾಯ್ತು. ಇದರ ಪರಿಹಾರವನ್ನೇ ಇನ್ನೂ ಕೊಟ್ಟಿಲ್ಲ. ಈ ಬಾರಿ ಕೂಡ ಪ್ರವಾಹದ ಪರಿಸ್ಥಿತಿ ಇದೆ. ನಾನು ಬಾಗಲಕೋಟೆಯ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಬಂದಿದ್ದೀನಿ. ಅಲ್ಲಿನ ಜನ ಬಾಯಿ ತುಂಬಾ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಳೆ ಹಾನಿಗೆ, ಮನೆಗಳು ಮುಳುಗಿರುವುದಕ್ಕೆ ಸರಿಯಾದ ಪರಿಹಾರ ನೀಡಿಲ್ಲ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ವರ್ಗಾಯಿಸಿಲ್ಲ. ಇದೂ ಎರಡು ವರ್ಷಗಳ ಸಾಧನೆಯಾ?

ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ ನಾನು ವರ್ಷಕ್ಕೆ 3 ಲಕ್ಷ ಮನೆ ಕಟ್ಟಿಸುತ್ತಿದ್ದೆ. ಐದು ವರ್ಷದಲ್ಲಿ 15 ಲಕ್ಷ ಮನೆ ಕಟ್ಟಿಸಿದ್ದೀವಿ. ಈ ಸರ್ಕಾರ ಎರಡು ವರ್ಷಗಳಲ್ಲಿ ಒಂದೂ ಮನೆ ಕಟ್ಟಿಸಿಲ್ಲ. ಒಬ್ಬರಿಗೂ ಮನೆ ನೀಡಿಲ್ಲ. ಬೆಂಗಳೂರಿಗೆ ಒಂದು ಲಕ್ಷ ಮನೆ ಕೊಟ್ಟಿದ್ದೆ. ಆದರೆ ಈ ಸರ್ಕಾರ ಮನೆಗಳಿಗಾಗಿ ಹಾಕಿದ್ದ ಅರ್ಜಿಗಳನ್ನೆಲ್ಲಾ ರದ್ದು ಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಟ್ಟಿಸಿದ ಮನೆಗಳನ್ನೂ ನೀಡುತ್ತಿಲ್ಲ.

ನನ್ನ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ 7500 ಮನೆಗಳನ್ನು ಮಂಜೂರು ಮಾಡಿಸಿದ್ದೆ. ಅದರಲ್ಲಿ ಒಂದೂ ಮನೆಯನ್ನು ಕೊಟ್ಟಿಲ್ಲ. ಎಲ್ಲವನ್ನೂ ರದ್ದುಗೊಳಿಸಿದ್ದಾರೆ. ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, ವಿದ್ಯಾರ್ಥಿ ವೇತನ ನೀಡುವುದನ್ನು ನಿಲ್ಲಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ 371-ಜೆ ಪ್ರಕಾರ ನಾವಿದ್ದಾಗ ಸಾವಿರ ಕೋಟಿಗೂ ಹೆಚ್ಚು ಕೊಟ್ಟಿದ್ದೆವು. 30 ಸಾವಿರ ಮಂದಿಗೆ ಉದ್ಯೋಗ ಕೊಟ್ಟಿದ್ದೆವು. ಆದರೆ ಈ ಸರ್ಕಾರ “ಕಲ್ಯಾಣ ಕರ್ನಾಟಕ” ಎಂದು ಹೆಸರು ಬದಲಾಯಿಸಿ ಕೈ ಕಟ್ಟಿ ಕುಳಿತಿದ್ದು ಬಿಟ್ಟರೆ ಒಂದು ರುಪಾಯಿಯನ್ನೂ ನೀಡಿಲ್ಲ. ಇದೆಲ್ಲಾ ಎರಡು ವರ್ಷಗಳ ಬಿಜೆಪಿಯ ಸಾಧನೆ ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಹೊಸ ಮುಖ್ಯಮಂತ್ರಿಗಳು ಪೂರ್ಣಾವಧಿ ಸರ್ಕಾರ ನಡೆಸಲಿ ಎಂದು ಆಶಿಸುತ್ತೇನೆ. ಬಸವರಾಜ ಬೊಮ್ಮಾಯಿ ಅವರೇ “ನಾನು ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇನೆ” ಎಂದು ಹೇಳಿರುವುದರ ಅರ್ಥ ಏನು ಪ್ರಶ್ನಿಸಿದರು.

Tags: BJPಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

NEP: ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗ 11 ಪ್ರಾದೇಶಿಕ ಭಾಷೆಗಳಲ್ಲಿ ಕಲಿಸಲಾಗುವುದು: ಪ್ರಧಾನಿ ಮೋದಿ

Next Post

ಮುಂದಿನ ಆಂಧ್ರ ಚುನಾವಣೆ ಮೇಲೆ ಟಿಡಿಪಿ ಕಣ್ಣು; ಚಂದ್ರಬಾಬು ನಾಯ್ಡು ಭರ್ಜರಿ ತಯಾರಿ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post

ಮುಂದಿನ ಆಂಧ್ರ ಚುನಾವಣೆ ಮೇಲೆ ಟಿಡಿಪಿ ಕಣ್ಣು; ಚಂದ್ರಬಾಬು ನಾಯ್ಡು ಭರ್ಜರಿ ತಯಾರಿ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada