• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಡಿ ಸಂಘರ್ಷ: ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ ಮಿಝೋರಾಂ ಪೊಲೀಸ್

ಪ್ರತಿಧ್ವನಿ by ಪ್ರತಿಧ್ವನಿ
July 31, 2021
in ದೇಶ
0
ಗಡಿ ಸಂಘರ್ಷ: ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ ಮಿಝೋರಾಂ ಪೊಲೀಸ್
Share on WhatsAppShare on FacebookShare on Telegram

ಅಸ್ಸಾಂ-ಮಿಝೋರಾಂ ಗಡಿ ವಿವಾದ ಸದ್ಯ ಬೇರೆಯದ್ದೇ ಮಜಲಿಗೆ ತಲುಪಿದೆ. ಗಡಿಯಲ್ಲಿ ಉಂಟಾದ ಸಂಘರ್ಷಕ್ಕೆ  ಪ್ರಕರಣ ದಾಖಲಿಸಿಕೊಂಡಿರುವ ಮಿಝೋರಾಂ ಪೊಲೀಸರು ನೆರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳನ್ನೇ ಆರೋಪಿಗಳನ್ನಾಗಿಸಿದೆ.

ADVERTISEMENT

ಮಂಗಳವಾರ ನಡೆದಿದ್ದ ಉಭಯ ರಾಜ್ಯಗಳ ಪೊಲೀಸರ ನಡುವಿನ ಗುಂಡಿನ ಕಾಳಗದಲ್ಲಿ ಅಸ್ಸಾಮಿನ ಐವರು ಪೊಲೀಸರು ಹಾಗೂ ಓರ್ವ ನಾಗರಿಕ ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದರು.

ತಾರಕಕ್ಕೇರಿದ ಅಸ್ಸಾಂ-ಮಿಜೋರಾಂ ಗಡಿ ವಿವಾದ; ಪರಸ್ಪರ ಗುಂಡು ಹಾರಿಸಿದ ಉಭಯ ರಾಜ್ಯ ಪೊಲೀಸರು

ಅಸ್ಸಾಂ ಸಿಎಂ‌ ಹಿಮಂತ ಬಿಸ್ವಾ ಶರ್ಮಾ ಹಾಗೂ ಉನ್ನತ ಅಧಿಕಾರಿಗಳ ವಿರುದ್ಧ ಮಿಝೋರಾಮ್‌ನ ವೈರೆಂಗ್ಟೆ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಮಿಝೋರಾಮ್‌ ಪೊಲೀಸರು ತಿಳಿಸಿದ್ದಾರೆ.

ಅಸ್ಸಾಂ ಪೊಲೀಸರು ಮುಖ್ಯಮಂತ್ರಿ ಶರ್ಮಾ ಅವರ ಅಣತಿಯಂತೆ ಕರ್ತವ್ಯ ನಿರ್ವಹಿಸಿದ್ದು, ಮಿಝೋರಾಂ ಪೊಲೀಸರೊಂದಿಗೆ ಸೌಹಾರ್ದಯುತ ಸಂವಾದ ನಡೆಸಲು ಅಸ್ಸಾಂ ಸಿಎಂ ನಿರಾಕರಿಸಿದ್ದೇ ಕಾರಣ ಎಂದು ಎಫ್‌ಐಆರ್‌ ನಲ್ಲಿ ಉಲ್ಲೇಖಿಸಿದೆ.

ವಿವಾದಿತ ಸ್ಥಳದಲ್ಲಿ ಅಸ್ಸಾಂ ಸಿಎಂ ನಿರ್ದೇಶನದ ಮೇರೆಗೆ ಪೊಲೀಸ್‌ ಶಿಭಿರ ನಿರ್ಮಿಸಲಾಗಿದೆ ಎಂದು ಮಿಝೋರಾಂ ಪೊಲೀಸರು ಆರೋಪಿಸಿದ್ದಾರೆ.

“ಅವರು ಶಿಬಿರ ನಿರ್ಮಾಣಕ್ಕಾಗಿ ಗುಡಾರಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ಬಂದಿದ್ದರು, ಮಿಜೋರಾಂ ವ್ಯಾಪ್ತಿಯ ಭೂಪ್ರದೇಶವನ್ನು ಬಲವಂತವಾಗಿ ಆಕ್ರಮಿಸಿಕೊಳ್ಳುವ ಉದ್ದೇಶದಿಂದ ಎಂದು ಸ್ಪಷ್ಟವಾಗಿ ತೋರಿತ್ತು, ಏಕೆಂದರೆ ಅವರು ಸುಮಾರು 20 ಬೆಂಗಾವಲು ವಾಹನಗಳು ಮತ್ತು ಆಂಬುಲೆನ್ಸ್ ವಾಹನಗಳಲ್ಲಿ ಬಂದಿದ್ದರು ಎಂದು ಮಿಝೋರಾಂ ಪೊಲೀಸ್‌ ವರದಿ ಹೇಳಿದೆ.

ವೈರಿ ರಾಷ್ಟ್ರಗಳಂತೆ ಎರಡು ರಾಜ್ಯಗಳು ಕಿತ್ತಾಡಿಕೊಳ್ಳುತ್ತಿರುವುದು ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಎರಡೂ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟದ ಸದಸ್ಯ ಪಕ್ಷಗಳ ಸರ್ಕಾರಗಳೇ ಇರುವುದು ಕೂಡಾ ಕೇಂದ್ರ ನಾಯಕತ್ವಕ್ಕೆ ಇರುಸು-ಮುರಿಸು ತಂದಿದೆ.

Previous Post

ಬೊಮ್ಮಾಯಿ-ಮೋದಿ ಭೇಟಿ: ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಏಮ್ಸ್ ನಿರ್ಮಾಣಕ್ಕೆ ಮನವಿ

Next Post

ಪೆಗಾಸಸ್ ತನಿಖೆಗೆ ಅಮೇರಿಕಾ ಒಲವು; ಗಂಭೀರ ವಿಷಯವಲ್ಲ ಎಂದ ಭಾರತ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಪೆಗಾಸಸ್ ತನಿಖೆಗೆ ಅಮೇರಿಕಾ ಒಲವು; ಗಂಭೀರ ವಿಷಯವಲ್ಲ ಎಂದ ಭಾರತ

ಪೆಗಾಸಸ್ ತನಿಖೆಗೆ ಅಮೇರಿಕಾ ಒಲವು; ಗಂಭೀರ ವಿಷಯವಲ್ಲ ಎಂದ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!