• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Any Mind by Any Mind
July 31, 2021
in ಕರ್ನಾಟಕ, ರಾಜಕೀಯ
0
ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆ ಎರಡು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ಕಡ್ಡಾಯ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ.

ADVERTISEMENT

ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಎರಡು ಡೋಸ್‌ ಲಸಿಕೆ ಪಡೆದಿದ್ದರೂ, ಪಡೆಯದೆ ಇದ್ದರು ರಾಜ್ಯಕ್ಕೆ ಬರುವ 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಲಾಗಿದೆ.

ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಕಟ್ಟು ನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಅಥವಾ ಎರಡು ಬಾರಿ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಮೈಸೂರು ಹಾಗೂ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್‌ ಮೂಲಕ ರಾಜ್ಯಕ್ಕೆ ಬರುವ ವಾಹನ ಚಾಲಕರು, ಸಹಾಯಕರು ಮತ್ತು ಪ್ರಯಾಣಿಕರು ಮೇಲೆ ತಿಳಿಸಿರುವ ನಿಯಮದ ಅನುಪಾಲನೆಗೆ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪನೆ ಮತ್ತು ಸಿಬ್ಬಂದಿ ನಿಯೋಜನೆಗೆ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.

ವಿಮಾನದ ಬೊರ್ಡ್ ಪಾಸ್ಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು.

ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರ ಆರ್.ಟಿ.ಪಿ‌.ಆರ್ ವರದಿ ಕಡ್ಡಾಯವಾಗಿರಬೇಕು ಇದನ್ನು ರೈಲ್ವೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು.

ಬಸ್ ನಲ್ಲಿ ಪ್ರಯಾಣಿಸುವವರಿಗೂ ಆರ್.ಟಿ.ಪಿ.ಸಿ.ಆರ್ ಕಡ್ಡಾಯ, ಇದನ್ನು ಖಚಿತಪಡಿಸಿಕೊಳ್ಳವ ಜವಾಬ್ದಾರಿ ಬಸ್ ಕಂಡಕ್ಟರ್ ದ್ದಾಗಿದೆ.

ಕೇಳರಕ್ಕೆ ವಿದ್ಯಾಭ್ಯಾಸ, ಬಿಸಿನೆಸ್ ಸಂಬಂಧ ಬರುವವರಿಗೆ 15 ದಿನಕ್ಕೆ ಒಮ್ಮೆ ಆರ್‌ಟಿ‌ಪಿ‌ಸಿಆರ್ ಟೆಸ್ಟ್ ವರದಿ ಕಡ್ಡಾಯ.

ಸಂವಿಧಾನಿಕ ಕಾರ್ಯಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ, ಎರಡು ವರ್ಷಕಿಂತ ಕಡಿಮೆ ವಯಸ್ಸಿಬ ಮಕ್ಕಳಿಗೆ ಮತ್ತು ಕೇರಳದಿಂದ ಕರ್ನಾಟಕಕ್ಕೆ ತುರ್ತು ಸಂದರ್ಭಗಳಿಗೆ ಆರ್.ಟಿ.ಪಿ.ಸಿ.ಆರ್ ವರದಿ ಹೊಂದುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅಕ್ಕ ಪಕ್ಕ ರಾಜ್ಯದಲ್ಲಿ ಕರೋನ ಹೆಚ್ಚಳದ ಕುರಿತು ದೆಹಲಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.

ರಾಜ್ಯಕ್ಕೆ ವಾಪಸಾದ ನಂತರ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗುವುದು. ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: Covid 19Karnataka GovernmentKeralaMaharashtraಕರೋನಾಕೋವಿಡ್-19ಬಿಜೆಪಿ
Previous Post

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

Next Post

ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!