ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದಾಗ ಮಂತ್ರಿಮಂಡಲ ರಚನೆಗೆ ಎರಡು ತಿಂಗಳು ಸಮಯ ತಗೊಂಡಿದ್ದರು, ಈ ಬಾರಿ ರಾಜ್ಯದ ಪರಿಸ್ಥಿತಿ ಸರಿಯಿಲ್ಲ, ಪ್ರವಾಹ ಕೊರೊನಾ ಸಂಕಷ್ಟವಿದೆ, ಹಾಗಾಗಿ ಶೀಘ್ರ ಮಂತ್ರಿಮಂಡಲ ರಚನೆ ಮಾಡಬೇಕು ಎಂದು ಹೇಳಿದ್ದಾರೆ.
ಬಿಜೆಪಿಯ ಯಾವೊಬ್ಬ ಶಾಸಕ ಕೂಡ ತನ್ನ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ, ಎಲ್ಲ ಬೆಂಗಳೂರಿನಲ್ಲಿ ಕೂತು ಮಂತ್ರಿಗಿರಿಗಾಗಿ ಜಗಳ ಮಾಡುತ್ತಿದ್ದಾರೆ ಎಂದಯ ಆರೋಪಿಸಿದ್ದಾರೆ.
ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕು ತೀವ್ರವಾಗಿದೆ. ಅಲ್ಲಿಂದ ರಾಜ್ಯಕ್ಕೆ ಪ್ರವೇಶಿಸುವವರನ್ನು ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೊಳಪಡಿಸಿ, ಲಸಿಕೆ ಪಡೆದಿದ್ದಾರೋ ಇಲ್ಲವೋ ಎಂಬುದನ್ನು ಖಾತ್ರಿಪಡಿಸಿಕೊಂಡು ಪ್ರವೇಶ ಕೊಡಬೇಕು ಎಂದಿದ್ದಾರೆ.
ಇಲ್ಲದಿದ್ದರೆ ನಮ್ಮ ರಾಜ್ಯಕ್ಕೂ ಮೂರನೆ ಅಲೆ ಬರುವ ಸಾಧ್ಯತೆ ಹೆಚ್ಚಿದೆ. ಕರೊನಾದ ಮೊದಲ ಮತ್ತು ಎರಡನೇ ಅಲೆ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿತ್ತು, ಈ ಬಾರಿಯಾದರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿ ಎಂದಿದ್ದಾರೆ.
ಕಲಘಟಗಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಟಿಕೆಟ್ ಗಾಗಿ ಉಂಟಾದ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ವಿಚಾರ ಗೊತ್ತಾದಾಗ ಟಿಕೆಟ್ ಆಕಾಂಕ್ಷೆಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗುತ್ತದೆ. ಹೀಗಾದಾಗ ಸಣ್ಣ ಪುಟ್ಟ ಗೊಂದಲ ನಿರ್ಮಾಣವಾಗುತ್ತದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ಕಲಘಟಗಿಯ ಜನರ ಕಷ್ಟವನ್ನು ಅರಿತು ಸುಮಾರು 600 ಟನ್ ಅಕ್ಕಿಯನ್ನು ಜನರಿಗೆ ಉಚಿತವಾಗಿ ಹಂಚಿದ ಮಾಜಿ ಶಾಸಕ ಸಂತೋಷ್ ಲಾಡ್ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.