• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೋಗ ಪ್ರವಾಸಿಗರಿಗೆ ಕರೋನಾ ನೆಗೇಟಿವ್ ಸರ್ಟಿಫಿಕೇಟ್ ಕಡ್ಡಾಯ: ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
August 4, 2021
in ಕರ್ನಾಟಕ
0
ಜೋಗ ಪ್ರವಾಸಿಗರಿಗೆ ಕರೋನಾ ನೆಗೇಟಿವ್ ಸರ್ಟಿಫಿಕೇಟ್ ಕಡ್ಡಾಯ: ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ
Share on WhatsAppShare on FacebookShare on Telegram

ಕೋವಿಡ್ ಮೂರನೇ ಅಲೆ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಜಾರಿಗೊಳಿಸಿದ್ದು, ಪ್ರಸಿದ್ಧ ಜೋಗ ಜಲಪಾತ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಆರ್ ಟಿ ಪಿಸಿಆರ್ ಪರೀಕ್ಷೆಯ ನೆಗೇಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ADVERTISEMENT

ಕೊರೊನಾ ಮೂರನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆಗಸ್ಟ್ 5 ರಿಂದ 15 ರವರೆಗೆ ಜಿಲ್ಲೆಯಾದ್ಯಂತ ಕಠಿಣ ಮಾರ್ಗಸೂಚಿ ಜಾರಿಗೊಳಿಸಿ ಆದೇಶಿಸಿದ್ದಾರೆ.

ಆ ಪ್ರಕಾರ, ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ವಾಹನ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿದ ಆರ್ಟಿಪಿಸಿಆರ್ ಪರೀಕ್ಷಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದು ಕಡ್ಡಾಯ.

ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಹೊರ ರಾಜ್ಯಗಳ ಪ್ರವಾಸಿಗರು ಚೆಕ್ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗೆ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಹೋಟೆಲ್ ಮತ್ತು ತಂಗುದಾಣಗಳಲ್ಲಿ ಪ್ರವೇಶಕ್ಕೂ ಈ ನಿಯಮ ಅನ್ವಯವಾಗಲಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಜೋಗ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ವ್ಯಾಪ್ತಿಯ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಹಿಂದಿನ 72 ಗಂಟೆಗಳ ಒಳಗೆ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಅಲ್ಲದೆ, ಕೋವಿಡ್ 19 ನಿರ್ವಹಣೆ, ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದಿಂದ ನೀಡುವ ನಿರ್ದೇಶನಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ರಿಂದ 60 ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತೆ ಕಲಂ 188 ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕಠಿಣ ಕ್ರಮ ಜರುಗಿಸುವ ಅಧಿಕಾರವನ್ನು ಪೊಲೀಸ್ ಮತ್ತು ಇತರೆ ಸಿಬ್ಬಂದಿಗೆ ನೀಡಲಾಗಿದೆ.

ಮಲೆನಾಡು ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಮಳೆಯ ನಡುವೆಯೂ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಪ್ರವಾಸಿ ಮತ್ತು ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಜನಜಾತ್ರೆ ನೆರೆಯುತ್ತಿದೆ. ಅದರ ಪರಿಣಾಮವಾಗಿ ಇತ್ತೀಚಿನ ದಿನಗಳಲ್ಲಿ ಪ್ರವಾಸಿ ತಾಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಮತ್ತು ಕೋವಿಡ್ ಸೋಂಕು ಹೆಚ್ಚಿರುವ ನೆರೆಯ ಜಿಲ್ಲೆಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಹೊಸ ಆದೇಶ ಜಾರಿಗೊಳಿಸಿದ್ದಾರೆ.

ಮಲೆನಾಡಿನ ಮತ್ತೊಂದು ಪ್ರವಾಸಿ ತಾಣಗಳ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಕೂಡ ಎರಡು ದಿನಗಳ ಹಿಂದೆ ಅಲ್ಲಿನ ಜಿಲ್ಲಾಧಿಕಾರಿ, ಜಿಲ್ಲೆಯ ಗಿರಿಧಾಮ, ಜಲಪಾತ ಸೇರಿದಂತೆ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆರ್ ಟಿ ಪಿಸಿಆರ್ ಪರೀಕ್ಷೆಯ ನೆಗೇಟಿವ್ ವರದಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಪ್ರವಾಸಿ ತಾಣಗಳ ಜಿಲ್ಲೆ ಶಿವಮೊಗ್ಗದಲ್ಲೂ ಅಂತಹದ್ದೇ ಕಠಿಣ ನಿಯಮ ಜಾರಿಗೊಳಿಸಲಾಗಿದೆ.

Tags: BJPಆಗುಂಬೆಆರ್ ಟಿ ಪಿಸಿಆರ್ಕರೋನಾಕೊಡಚಾದ್ರಿಕೋವಿಡ್-19ಚಿಕ್ಕಮಗಳೂರುಜೋಗ ಜಲಪಾತಪ್ರವಾಸಿ ತಾಣ‌ಬಿಜೆಪಿಮೂರನೇ ಅಲೆಶಿವಮೊಗ್ಗ
Previous Post

ಶಕೀರಾಳನ್ನು ಜೀವಂತ ಸಮಾಧಿ ಮಾಡಿದ್ದ ಶೃದ್ಧಾನಂದ ಸ್ವಾಮಿಗೆ ಕ್ಷಮಾದಾನವೇ.? ಒಂದು ಭೀಕರ ಹತ್ಯೆಯ ಹಿಂದಿನ ಕತೆಯ ಡಿಟೇಲ್ಸ್

Next Post

ಸಂಪುಟದಲ್ಲಿ ಪ್ರಾದೇಶಿಕ ಸಮನ್ವಯತೆ ಕಾಯ್ದುಕೊಳ್ಳಲು ವಿಫಲವಾದ ಬಿಜೆಪಿ: ಸ್ವಪಕ್ಷೀಯರಿಂದಲೇ ಕೇಳಿಬರುತ್ತಿದೆ ಅಪಸ್ವರ!

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಸಂಪುಟದಲ್ಲಿ ಪ್ರಾದೇಶಿಕ ಸಮನ್ವಯತೆ ಕಾಯ್ದುಕೊಳ್ಳಲು ವಿಫಲವಾದ ಬಿಜೆಪಿ: ಸ್ವಪಕ್ಷೀಯರಿಂದಲೇ ಕೇಳಿಬರುತ್ತಿದೆ ಅಪಸ್ವರ!

ಸಂಪುಟದಲ್ಲಿ ಪ್ರಾದೇಶಿಕ ಸಮನ್ವಯತೆ ಕಾಯ್ದುಕೊಳ್ಳಲು ವಿಫಲವಾದ ಬಿಜೆಪಿ: ಸ್ವಪಕ್ಷೀಯರಿಂದಲೇ ಕೇಳಿಬರುತ್ತಿದೆ ಅಪಸ್ವರ!

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada