ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಒಬ್ಬೊಬ್ಬರೇ ಸಚಿವರು ಕ್ಯಾತೆ ತೆಗೆಯಲು ಆರಂಭಿಸಿದ್ದಾರೆ.
ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಖಾತೆ ವಿಚಾರವಾಗಿ ಹಲವಾರು ಜನ ಕ್ಯಾತೆ ಸುರು ಮಾಡಿದ್ದು ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರುತ್ತಿದ್ದಾರೆ.
ನೂತನ ಸಚಿವ ಆನಂದ್ ಸಿಂಗ್ ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಕೂಡ ಖಾತೆ ಹಂಚಿಕೆ ವಿಚಾರವಾಗಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ಆನಂದ್ ಸಿಂಗ್ ಮಾತನಾಡಿ, ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ಹೊರ ಹಾಕಿ, ರಾಜೀನಾಮೆ ಎಚ್ಚರಿಕೆ ನೀಡಿದ್ದರು ಇದಾದ ಬೆನ್ನಲ್ಲೇ ಈಗ ಎಂಟಿಬಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.