• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಹಿಳಾ ಎಂಪಿಗಳ ಮೇಲೆ ನಡೆದ ದಾಳಿ ಅಕ್ಷಮ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ –ರಾಹುಲ್ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
August 12, 2021
in ದೇಶ
0
ಮಹಿಳಾ ಎಂಪಿಗಳ ಮೇಲೆ ನಡೆದ ದಾಳಿ ಅಕ್ಷಮ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ –ರಾಹುಲ್ ಗಾಂಧಿ
Share on WhatsAppShare on FacebookShare on Telegram

ಲೋಕಸಭಾ ಮತ್ತು ರಾಜ್ಯಸಭೆಯ ಮುಂಗಾರು ಅಧಿವೇಶನವನ್ನು ಹಠಾತ್ತಾಗಿ ಕೊನೆಗೊಳಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ವಿರೋಧ ಪಕ್ಷದ ನಾಯಕರು ಇಂದು ಬೆಳಿಗ್ಗೆ ಸಂಸತ್ ಭವನದ ಹೊರಗೆ ಪರೇಡ್‌ ನಡೆಸಿದ್ದು, ಮೇಲ್ಮನೆಯಲ್ಲಿ ಮಹಿಳಾ ಸಂಸದರ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಈ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ “ಸಂಸತ್ತಿನ ಒಳಗಡೆ ಮಾತನಾಡಲು ಬಿಡದ್ದರಿಂದ ನಾವು ನಿಮ್ಮೊಂದಿಗೆ (ಮಾಧ್ಯಮ) ಮಾತನಾಡಲು ಇಲ್ಲಿಗೆ ಬರಬೇಕಾಯಿತು. ಇದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನ ಭದ್ರತಾ ಸಿಬ್ಬಂದಿಯಲ್ಲದವರ ಮೂಲಕ ಪ್ರತಿಪಕ್ಷಗಳ ಸಂಸದರ ಮೇಲೆ ದಾಳಿ ಮಾಡಿಸಲಾಗಿದೆ. ಮಹಿಳಾ ಎಂಪಿಗಳ ಮೇಲೂ ದಾಳಿಯಾಗಿವೆ. ಅವರು ವಿಪಕ್ಷ ಸಂಸದರನ್ನು ಎಳೆದಾಡಿದ್ದಾರೆ. ಅಧ್ಯಕ್ಷರು ಮತ್ತು ಸ್ಪೀಕರ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸದನದ ಕಾರ್ಯಗಳನ್ನು ಖಚಿತಪಡಿಸುವುದು ಅವರ ಜವಾಬ್ದಾರಿಯಾಗಿದೆ ಅವರು ತಮ್ಮ ಕೆಲಸವನ್ನು ಏಕೆ ಮಾಡಲು ಸಾಧ್ಯವಾಗಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಸತ್ ಅಧಿವೇಶನ ಮುಗಿದಿದೆ, ದೇಶದ ಶೇಕಡಾ 60 ರಷ್ಟು ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ, ಅವಮಾನ ಮಾಡಲಾಗಿದೆ ಮತ್ತು ರಾಜ್ಯಸಭೆಯಲ್ಲಿ ಸಂಸದರಿಗೆ ದೈಹಿಕವಾಗಿ ಥಳಿಸಲಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

#WATCH CCTV visuals of Opposition MPs jostling with marshals in Parliament yesterday pic.twitter.com/yfJsbCzrhl

— ANI (@ANI) August 12, 2021

ರಾಜ್ಯಸಭಾ ಸದಸ್ಯರಾದ ಸಂಜಯ್ ರಾವುತ್ ಅವರು ಮಹಿಳೆಯರು ಸೇರಿದಂತೆ ಸಂಸದರನ್ನು ದೈಹಿಕವಾಗಿ  ಥಳಿಸಲಾಗಿದೆ, ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಪ್ರತಿಪಕ್ಷಗಳಿಗೆ ಅವಕಾಶ ಸಿಗಲಿಲ್ಲ ಮಹಿಳಾ ಸಂಸದರ ವಿರುದ್ಧ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಒಂದು ಕ್ಷಣ ನಾವು ಪಾಕಿಸ್ತಾನದ ಗಡಿಯಲ್ಲಿ ನಿಂತಂತೆ ಭಾಸವಾಯಿತು ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. .

ಬುಧವಾರ  ರಾಜ್ಯಸಭೆಯಲ್ಲಿ ಗೊಂದಲದ ವಾತಾವರಣದ ನಡುವೆ ಸರ್ಕಾರವು ವಿಮಾ ( insurance) ಮಸೂದೆಗೆ ಸಂಬಂಧಿಸಿದ ತಿದ್ದುಪಡಿಯನ್ನು ಅಂಗೀಕರಿಸಲು ಮುಂದಾದಾಗ ಹಲವಾರು ಮಹಿಳಾ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.  ಈ ವೇಳೆ ಪುರುಷ ಮಾರ್ಷಲ್‌ಗಳಿಂದ ದೈಹಿಕವಾಗಿ ಮಹಿಳಾ ಸಂಸದರಿಗೆ ಕಿರುಕುಳ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಿರಿಯ ಸಂಸದ  ಶರದ್ ಪವಾರ್ ಕೂಡಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು,  ತಮ್ಮ 55 ವರ್ಷಗಳ ರಾಜಕೀಯ ಜೀವನದಲ್ಲಿ ಎಂದು ತಮ್ಮ ಮಹಿಳಾ ಸಹೋದ್ಯೋಗಿಗಳ ಮೇಲೆ ದಾಳಿ ಮಾಡಿರುವುದನ್ನು ನೋಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇದು “ಸಂಪೂರ್ಣ ಸುಳ್ಳು” ಎಂದು ಆರೋಪಗಳನ್ನು ತಳ್ಳಿಹಾಕಿದ್ದಾರೆ. ಅಗತ್ಯವಿದ್ದರೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ವಾಸ್ತವಾಂಶವನ್ನು ತಿಳಿದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

Next Post

ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ

ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada