• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2024 ಲೋಕಸಭಾ ಚುನಾವಣೆ; ವಿಪಕ್ಷಗಳನ್ನು ಮುನ್ನಡೆಸಲು ಮುಂದಾದರೇ ಸೋನಿಯಾ ಗಾಂಧಿ?

ನಚಿಕೇತು by ನಚಿಕೇತು
August 14, 2021
in ದೇಶ
0
2024 ಲೋಕಸಭಾ ಚುನಾವಣೆ; ವಿಪಕ್ಷಗಳನ್ನು ಮುನ್ನಡೆಸಲು ಮುಂದಾದರೇ ಸೋನಿಯಾ ಗಾಂಧಿ?
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಂಸತ್ ಅಧಿವೇಶನ ಇತ್ತೀಚೆಗಷ್ಟೇ ಮುಗಿಯಿತು. ಸಂಸತ್ ಅಧಿವೇಶನದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿದ್ದವು. ಪೆಗಸಸ್, ರೈತರ ಪ್ರತಿಭಟನೆ, ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಒಗ್ಗಟ್ಟಿನಿಂದ ಧ್ವನಿ ಎತ್ತಿದ್ದವು. ಇದಾದ ಬಳಿಕವೂ ಕಾಂಗ್ರೆಸ್ ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ.

ADVERTISEMENT

ಇದಕ್ಕಾಗಿ ಆಗಸ್ಟ್ 20ನೇ ತಾರೀಕಿನಂದು ವಿರೋಧ ಪಕ್ಷಗಳ ನಾಯಕರ ವರ್ಚ್ಯುವಲ್ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಈ ವರ್ಚ್ಯುವಲ್ ಸಭೆಯಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಶಿವಸೇನೆಯ ಉದ್ಧವ್ ಠಾಕ್ರೆ, ಜೆಎಂಎಂನ ಹೇಮಂತ್ ಸೋರೆನ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.


ಸಂಸತ್‌ನಲ್ಲಿ ಈ ಬಾರಿ ಸೋನಿಯಾ ಗಾಂಧಿ ಹೆಚ್ಚಾಗಿ ಕಾಣಿಸಿಕೊಳ್ಳದೇ ಹೋದರೂ ವಿರೋಧ ಪಕ್ಷಗಳನ್ನು ಕೇಂದ್ರದ ವಿರುದ್ಧ ಎತ್ತಿಕಟ್ಟುವಲ್ಲಿ ಸಫಲರಾಗಿದ್ದರು. ಇದರ ಪರಿಣಾಮವಾಗಿ ಸಂಸತ್‌ನ ಉಭಯ ಸದನಗಳ ಕಲಾಪ ವ್ಯರ್ಥವಾಗಿದೆ. ಸಂಸತ್‌ ಅಧಿವೇಶನದಲ್ಲಿ 14 ವಿರೋಧ ಪಕ್ಷಗಳು ಒಗ್ಗೂಡಿ ಗದ್ದಲ ಎಬ್ಬಿಸಲು ಸೋನಿಯಾ ಗಾಂಧಿ ಪ್ರಮುಖ ಪಾತ್ರವಹಿಸಿದ್ದರು. ಸಂಸತ್ ಅಧಿವೇಶನದ ನಂತರ ಈಗ ಮೋದಿ ವಿರೋಧಿ ಕ್ಯಾಂಪ್‌ನ ನಾಯಕಿಯಾಗಿ ಮತ್ತೆ ಸೋನಿಯಾ ಗಾಂಧಿ ನೇತೃತ್ವ ವಹಿಸುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದರೆ, ವಿರೋಧ ಪಕ್ಷಗಳು ಪ್ರಬಲವಾಗಿರುತ್ತವೆ ಎಂಬ ಅಭಿಪ್ರಾಯವೂ ಇವರದ್ದಾಗಿದೆ.


ಇತ್ತೀಚೆಗಿನ ಸಂಸತ್ ಅಧಿವೇಶನದ ವೇಳೆ ವಿರೋಧ ಪಕ್ಷಗಳಿಂದ ಒಗ್ಗಟ್ಟು ವ್ಯಕ್ತವಾಯಿತು. ಈ ಒಗ್ಗಟ್ಟು ಕಾಪಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಇದಕ್ಕಾಗಿಯೇ ಆಗಸ್ಟ್ 20ರಂದು ಸೋನಿಯಾ ಗಾಂಧಿ ವಿರೋಧ ಪಕ್ಷಗಳ ನಾಯಕರ ವರ್ಚ್ಯವಲ್ ಸಭೆ ಕರೆದಿದ್ದಾರೆ.
ಇನ್ನು, ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ 14 ವಿರೋಧ ಪಕ್ಷಗಳ ಪ್ರಮುಖ ನಾಯಕರು ಹಾಜಾರಗಲಿದ್ದಾರೆ. ಇಲ್ಲಿ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ.


ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೇಗೆ ಧ್ವನಿ ಎತ್ತಬೇಕು. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಹೇಗೆ ಹೋರಾಟ ಮಾಡಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಪೆಗಾಸಸ್ ಸ್ಪೈವೇರ್ ಬಳಕೆ, ಕೃಷಿ ಕಾಯ್ದೆ ಜಾರಿ, ಕೋವಿಡ್ ನಿರ್ವಹಣೆ, ಲಸಿಕೆಯ ಕೊರತೆ ವಿರುದ್ಧ ಹೋರಾಟ ರೂಪಿಸುವುದರ ಬಗ್ಗೆಯೂ ಮಾತುಕತೆ ನಡೆಯಲಿದೆ.


ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್, ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಇದಕ್ಕಾಗಿಯೇ ಕಾಂಗ್ರೆಸ್ ವಿರೋಧ ಪಕ್ಷಗಳನ್ನು ಮುನ್ನಡೆಸಲು ಪ್ರಯತ್ನಿಸುತ್ತಿದೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿದೆ.


ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಕೇಂದ್ರದ ವಿರುದ್ಧ ಸಕ್ರಿಯವಾಗಿ ಕಾಂಗ್ರೆಸ್ ಹೋರಾಟಗಳನ್ನು ನಡೆಸುತ್ತಿದೆ. ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮನೆಯಲ್ಲೂ ಎಸ್ಪಿ, ಬಿಎಸ್ಪಿ, ನ್ಯಾಷನಲ್ ಕಾನ್ಫರೆನ್ಸ್, ಆಪ್, ಎನ್‌ಸಿಪಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಭೋಜನಕೂಟಕ್ಕೆ ಸೇರಿ ಚರ್ಚೆ ನಡೆಸಿದ್ದರು. ಇದೆಲ್ಲವೂ ಮುಂದಿನ ಚುನಾವಣೆ ತಯಾರಿ ಎಂಬ ಮಾತುಗಳು ಕೇಳಿ ಬರುತ್ತಿವೆ.

Tags: 2024 mp electionSonia Gandhi
Previous Post

ಅಮೃತ ಮಹೋತ್ಸವಕ್ಕೆ ಸಜ್ಜಾಗುವ ಮುನ್ನ, ಶೋಷಿತ ಮಹಿಳೆಯರ ದನಿ ಕೇಳುವಂತವರಾಗಿ

Next Post

ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada