• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನ ಎಫೆಕ್ಟ್: “ಸ್ವಾತಂತ್ರ್ಯ ದಿನಾಚಾರಣೆ” ಕುರಿತು ಮುಖ್ಯ ಶಿಕ್ಷಕರಿಗೆ ಬಂತು ಮಹತ್ವದ ಆದೇಶ!

ಪ್ರತಿಧ್ವನಿ by ಪ್ರತಿಧ್ವನಿ
August 14, 2021
in ಕರ್ನಾಟಕ
0
ಕರೋನ ಎಫೆಕ್ಟ್: “ಸ್ವಾತಂತ್ರ್ಯ ದಿನಾಚಾರಣೆ” ಕುರಿತು ಮುಖ್ಯ ಶಿಕ್ಷಕರಿಗೆ ಬಂತು ಮಹತ್ವದ ಆದೇಶ!
Share on WhatsAppShare on FacebookShare on Telegram

ಕರೋನ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ಭೌತಿಕ ತರಗತಿ ಆರಂಭಕ್ಕೆ ಅನುಮತಿ ನೀಡಿಲ್ಲ. ಹಾಗಾಗಿ ನಾಳೆ ಆಗಸ್ಟ್ 15ರಂದು ರಾಜ್ಯದ್ಯಂತ ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾರ್ಥಿಗಳಿಲ್ಲದೇ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ, ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಆಯಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರ ಉಪಸ್ಥಿತಿಯಲ್ಲಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೂ ಆದೇಶಿಸಿದೆ.

ADVERTISEMENT

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆಯೊಂದನ್ನು ಹೊರಡಿಸಿದ್ದು, ಪ್ರತಿ ವರ್ಷ ಆಗಸ್ಟ್ 15ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದು ಅತ್ಯಂತ ಪ್ರಾಮುಖ್ಯದ ದಿನ ಕೂಡ ಆಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತಂತೆ ಕೇಂದ್ರ ಗೃಹ ಮಂತ್ರಾಲಯ ತಿಳಿಸಿರುವಂತೆ ಶಾಲೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರುಸುವುದು, ಸ್ಯಾನಿಟೈಜೇಶನ್ ಮಾಡಿಕೊಳ್ಳುವುದು, ಗುಂಪುಗೂಡುವುದನ್ನು ತಡೆಗಟ್ಟುವುದು ಇತ್ಯಾದಿ ಅಂಶಗಳ ಜೊತೆಗೆ ಕೋವಿಡ್-19ರ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಲು ತಿಳಿಸಿರುತ್ತಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಶಾಲೆಗಳು ಭೌತಿಕವಾಗಿ ಪ್ರಾರಂಭಿಸಲು ಅನುಮತಿ ಇಲ್ಲವಾದ್ದರಿಂದ, ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಆದರೆ, ಸ್ವಾತಂತ್ರ್ಯ ದಿನಾಚರಣೆಯ ಪೂರ್ವದಲ್ಲಿ ಹಾಗೂ ನಂತರದ ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆ, ರಸಪ್ರಶ್ನೆ, ದೇಶಭಕ್ತಿಯ ಕುರಿತಾದ ಪ್ರಬಂಧ ಸ್ಪರ್ಧೆ, ದೇಶಭಕ್ತಿ ಕವನಗಳನ್ನು ರಚಿಸುವ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ಆನ್ ಲೈನ್ ಮೂಲಕ ಹಮ್ಮಿಕೊಂಡು, ಶಾಲಾ ಮಕ್ಕಳಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸ, ಇದರಲ್ಲಿ ಮಹನೀಯರು ನೀಡಿದ ತ್ಯಾಗ ಬಲಿದಾನ ಮುಂತಾದವುಗಳ ಮಹತ್ವವನ್ನು ತಿಳಿಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಆದೇಶಿಸಿದೆ.

ಮುಂದುವರೆದು, ಈ ಬಾರಿ ರಾಜ್ಯಾಧ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಆಯಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಹಾಗೂ ಇತರರು ಮಾತ್ರ ಭಾಗವಹಿಸಿ, ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಶಿಷ್ಟಾಚಾರದೊಂದಿಗೆ ಆಚರಿಸಲು ತಿಳಿಸಿದೆ. ಆಯಾ ಶಾಲಾ ಮಕ್ಕಳಿಗೆ ಈ ಆಚರಣೆಯ ಛಾಯಾ ಚಿತ್ರಗಳನ್ನು ಲಭ್ಯ ಆನ್ ಲೈನ್ ಮಾಧ್ಯಮಗಳ ಮೂಲಕ ಹಚ್ಚಿಕೊಳ್ಳಲು ಕ್ರಮ ವಹಿಸುವಂತೆಯೂ ತಿಳಿಸಿದೆ.

Tags: 75th independence daySchool
Previous Post

ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಕೊಡದ ಬೊಮ್ಮಾಯಿ; ವೋಟ್ ಬ್ಯಾಂಕ್ ಕಳೆದುಕೊಳ್ಳುವ ಭೀತಿಯಲ್ಲಿ ಬಿಜೆಪಿ

Next Post

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ : ಸಿದ್ದರಾಮಯ್ಯ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಮೇಲ್ಜಾತಿಗೆ ಮೀಸಲಾತಿ ಘೋಷಣೆಯಾದ್ದರಿಂದ ಮೀಸಲಾತಿ ಬಗ್ಗೆ RSS ಧೋರಣೆ ಬದಲಾದಂತಿದೆ -ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada