• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

14 ಹೊಸ ‘ಅಮೃತ್’ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ: ಇಲ್ಲಿದೆ ಸಂಪೂರ್ಣ ವಿವರ

ನೀಲಿ by ನೀಲಿ
August 15, 2021
in ಕರ್ನಾಟಕ
0
14 ಹೊಸ ‘ಅಮೃತ್’ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ: ಇಲ್ಲಿದೆ ಸಂಪೂರ್ಣ ವಿವರ
Share on WhatsAppShare on FacebookShare on Telegram

75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಭಾನುವಾರ 14 ಹೊಸ ಕಾರ್ಯಕ್ರಮಗಳನ್ನು ಘೋಷಿಸಿದರು, ಆಯ್ದ ಪ್ರದೇಶಗಳಲ್ಲಿ ಹಳ್ಳಿಯಿಂದ ನಗರ ಕೇಂದ್ರಗಳವರೆಗೆ ಅನೇಕ ಹಂತಗಳಲ್ಲಿ ಮೂಲಸೌಕರ್ಯ ಮತ್ತು ಸೇವೆಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದಾರೆ. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾನೆಕ್ ಶಾ ಪರೇಡ್ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ ಬೊಮ್ಮಾಯಿ ಭಾರತೀಯ ಸ್ವಾತಂತ್ರ್ಯದ ಪ್ಲಾಟಿನಂ ಜಯಂತಿ ಅಂಗವಾಗಿ ಹೊಸದಾಗಿ ಅಮೃತ್ ಯೋಜನೆಗಳನ್ನು ಘೋಷಿಸಿದರು.

ADVERTISEMENT
ಬೊಮ್ಮಾಯಿ ಪ್ರಕಾರ, ನಗರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ನಂತೆ 75 ಕೋಟಿ ರೂ. ಗಳನ್ನು ಒದಗಿಸುವ ಘೊಷಣೆಯನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ. ಇದಲ್ಲದೆ, ಆಯ್ದ 750 ಶಾಲೆಗಳಲ್ಲಿ ಗ್ರಂಥಾಲಯ, ಕಟ್ಟಡ, ಲ್ಯಾಬ್ ಮತ್ತು ಶೌಚಾಲಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒಟ್ಟು 75 ಕೋಟಿ ರೂ.ಗಳನ್ನು ಪ್ರತಿ ಶಾಲೆಗೆ 10 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ.. ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಹಣ ವಿನಿಯೋಗಿಸಲಾಗುವುದು. ಬೀದಿ ದೀಪ, ಕುಡಿಯುವ ನೀರು, ಶೇಕಡಾ 100 ರಷ್ಟು ಪ್ರತ್ಯೇಕತೆ ಮತ್ತು ಘನ ತ್ಯಾಜ್ಯ ವಿಲೇವಾರಿ, ಸೋಲಾರ್ ಪವರ್, ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುವುದು ಸೇರಿದಂತೆ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ವಸತಿ ರಹಿತ ಮತ್ತು ಆಶಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು.

ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು. “ಮೈಕ್ರೋ ಎಂಟರ್‌ಪ್ರೈಸಸ್ ಸ್ಥಾಪಿಸಲು ಆಯ್ದ 7,500 ಸ್ವಸಹಾಯ ಗುಂಪುಗಳಿಗೆ ತಲಾ 1 ಲಕ್ಷವನ್ನು ನೀಡಲು ಸರ್ಕಾರ ಯೋಜಿಸಿದೆ.

ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.. ಸಾಂಕ್ರಾಮಿಕ ಸನ್ನಿವೇಶ ಮತ್ತು ಉತ್ತಮ ಆರೋಗ್ಯ ಸೇವಾ ಸೌಲಭ್ಯಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, “ಒಟ್ಟು 750 ಪ್ರಾಥಮಿಕ ಆರೋಗ್ಯ ರಕ್ಷಣಾ ಕೇಂದ್ರಗಳನ್ನು (ಪಿಎಚ್‌ಸಿ) 20 ಲಕ್ಷ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು, ಒಟ್ಟಾರೆ ರೂ 150 ಕೋಟಿ ವೆಚ್ಚದಲ್ಲಿ” ಎಂದು ಬೊಮ್ಮಾಯಿ ವಿವರಿಸಿದರು.

ಇತ್ತೀಚೆಗೆ ಮುಕ್ತಾಯಗೊಂಡ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಗಮನಾರ್ಹ ಸಾಧನೆಯನ್ನು ಮೆಚ್ಚಿದ ಬೊಮ್ಮಾಯಿ, “ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿರುವ 75 ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಮತ್ತು ಪ್ರೋತ್ಸಾಹಿಸಲು ಅಮೃತ್ ಕ್ರೀಡಾ ದತ್ತು ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ತರಬೇತಿ ನೀಡಲು ರೂ 112 ಕೋಟಿ ವೆಚ್ಚದಲ್ಲಿ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು (ಸೀಡ್‌ಮನಿ) ಒದಗಿಸಲಾಗುವುದು. ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತೊಡಗಿಸಿಕೊಂಡು ಸಮುದಾಯದ ಅಭಿವೃದ್ಧಿ ಮಾಡುವುದು ಸಿಎಂ ಬೊಮ್ಮಾಯಿ ಅವರ ಗುರಿಯಾಗಿದೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಾಯಕಲ್ಪ ಕೊಡಲು ಯೋಜನೆ ಘೋಷಣೆ ಮಾಡಿದ್ದಾರೆ.

Tags: 75th independence dayamruth yoganeBasavaraj BommaiBJPಬಿಜೆಪಿ
Previous Post

ಕಳೆದ ಏಳು ವರ್ಷಗಳಿಂದ ಒಂದೇ ಭಾಷಣವನ್ನು ಮಾಡುತ್ತಿರುವ ನರೇಂದ್ರ ಮೋದಿ: ಕಾಂಗ್ರೆಸ್‌ ಟೀಕೆ

Next Post

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಹಣ ಹೆಚ್ಚಳಕ್ಕೆ ಬೊಮ್ಮಾಯಿ ಸರ್ಕಾರ ಆದೇಶ!

Related Posts

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಗರಿಗೆದರಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. https://youtu.be/lJkxhAdZhXc?si=7skLOG-oaNLSzXaG ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ...

Read moreDetails
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
Next Post
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಹಣ ಹೆಚ್ಚಳಕ್ಕೆ ಬೊಮ್ಮಾಯಿ ಸರ್ಕಾರ ಆದೇಶ!

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಹಣ ಹೆಚ್ಚಳಕ್ಕೆ ಬೊಮ್ಮಾಯಿ ಸರ್ಕಾರ ಆದೇಶ!

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!