• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಎ ವಿರುದ್ಧ ನಾಟಕ: ವಿಚಾರಣೆ ಸಂಧರ್ಭ ಪೊಲೀಸರಿಂದ ಮಕ್ಕಳ ಹಕ್ಕು ಉಲ್ಲಂಘನೆ.!

ಪ್ರತಿಧ್ವನಿ by ಪ್ರತಿಧ್ವನಿ
August 17, 2021
in ಕರ್ನಾಟಕ
0
ಸಿಎಎ ವಿರುದ್ಧ ನಾಟಕ: ವಿಚಾರಣೆ ಸಂಧರ್ಭ ಪೊಲೀಸರಿಂದ ಮಕ್ಕಳ ಹಕ್ಕು ಉಲ್ಲಂಘನೆ.!
Share on WhatsAppShare on FacebookShare on Telegram

ಬೀದರಿನ ಶಾಹೀನ್‌ ಪ್ರಾಥಮಿಕ ಶಾಲೆಯಲ್ಲಿ ನಾಟಕ ಮಾಡಿದ ಮಕ್ಕಳ ವಿಚಾರಣೆ ನಡೆಸುವಾಗ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಅಭಿಪ್ರಾಯಪಟ್ಟಿದೆ.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಬೀದರಿನ ಶಾಹೀನ್‌ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ನಡೆಸಿದ ನಾಟಕಕ್ಕೆ ಸಂಬಂಧ ಪಡಿಸಿದಂತೆ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದು, ವಿದ್ಯಾರ್ಥಿ ಪೋಷಕರನ್ನು ಹಾಗೂ ಶಿಕ್ಷಕರನ್ನು, ಶಾಲೆಯ ಆಡಳಿತ ಮಂಡಳಿಯನ್ನು ಆರೋಪಿಗಳಾಗಿಸಿತ್ತು.

ಈ ಸಂಬಂಧ ವಿಚಾರಣೆ ನಡೆಸುವಾಗ ಬಾಲ ನ್ಯಾಯ ಕಾಯ್ದೆ, 2015ರ ಉಲ್ಲಂಘನೆಯಾಗಿದೆಯೆಂದು ಕೋರ್ಟ್‌ ಹೇಳಿದೆ. ಅಲ್ಲದೆ, ಇನ್ನು ಮುಂದೆ ಇಂತಹ ಘಟನೆಗಳು ಪುನರಾವರ್ತನೆ ಆಗಕೂಡದೆಂದು ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ಪೊಲೀಸರು ನಡೆಸಿದ ವಿಚಾರಣೆ ರೀತಿಯನ್ನು ಪ್ರಶ್ನಿಸಿ ವಕೀಲರಾದ ನಯನಾ ಜ್ಯೋತಿ ಮತ್ತು ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣಾ ಸಂಸ್ಥೆ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು. ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸಬೇಕು ಹಾಗೂ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಅರ್ಜಿಯನ್ನು ಆಲಿಸಿದ ನ್ಯಾಯಾಲಯ, ವಿಚಾರಣೆ ನಡೆಸಿದ ಸಂಧರ್ಭದಲ್ಲಿ ತೆಗೆದ ಚಿತ್ರಗಳನ್ನು ನೋಡಿದರೆ ನಾಲ್ವರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಲ್ಲಿ ಇಬ್ಬರು ಬಂದೂಕುಗಳನ್ನು ಹೊಂದಿದ್ದರು. ಪೊಲೀಸರು ಈ ರೀತಿ ನಡೆಸಿರುವ ವಿಚಾರಣೆಯು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆಯಾಗಿದೆʼ ಎಂದು ಕೋರ್ಟ್‌ ಹೇಳಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ʼ ಮಕ್ಕಳ ಹಕ್ಕುಗಳು ಮತ್ತು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ. ಸಮವಸ್ತ್ರ ಧರಿಸಿ ಮತ್ತು ಬಂದೂಕುಗಳ ಸಹಿತ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ವಿವರಿಸುವ ಮೂಲಕ ಪ್ರತಿಕ್ರಿಯಿಸಲು ರಾಜ್ಯಕ್ಕೆ ನಿರ್ದೇಶನ ನೀಡುತ್ತೇವೆʼ ಎಂದು ಪೀಠ ಹೇಳಿದೆ.

ಕಳೆದ ವರ್ಷ ಸಿಎಎ ವಿರುದ್ಧ ಶಾಲೆ ಆವರಣದಲ್ಲಿ ಆಯೋಜಿಸಿದ್ದ ನಾಟಕದಲ್ಲಿ ಪಾತ್ರಧಾರಿಗಳು ಮೋದಿ ವಿರುದ್ಧ ಭಾಷಣ ಕೂಗಿದ್ದರು. ಇದರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಮಾರ್ಚ್‌ 2020 ರಲ್ಲಿ ನ್ಯಾಯಾಲಯವು ಇದರಲ್ಲಿ ಯಾವುದೇ ದೇಶದ್ರೋಹ ಚಟುವಟಿಕೆಗಳು ಇಲ್ಲವೆಂದು ಆಡಳಿತ ಮಂಡಳಿ ಸಿಬ್ಬಂದಿಗೆ ಜಾಮೀನು ನೀಡಿತ್ತು.

Tags: BJPChild RightsSedition for CAA School Play: Karnataka HC Says Police Violated JJ Actನರೇಂದ್ರ ಮೋದಿಬಿಜೆಪಿಶಾಹೀನ್‌ಶಾಹೀನ್‌ ಭಾಗ್ಸಿಎಎಸಿಎಎ - ಎನ್‌ಆರ್‌ಸಿಸಿಎಎ ಎನ್‌ಆರ್‌ಸಿ ಎನ್‌ಪಿಆರ್ಸಿಎಎ ವಿರೋಧಿಸಿಎಎ ವಿರೋಧಿ ಪ್ರತಿಭಟನೆ
Previous Post

ತಾಲಿಬಾನಿಗಳು ಮೋಜು-ಮಸ್ತಿ ಮಾಡುತ್ತಿರುವ ವೀಡಿಯೋಗಳು ವೈರಲ್‌

Next Post

ಅಫ್ಘಾನ್‌ನಿಂದ ಅಮೆರಿಕ ಮತ್ತು ಮಿತ್ರ ಪಡೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದಕ್ಕೆ ಗಮನವಹಿಸಿದ್ದೇವೆ– ಜೊ ಬಿಡೆನ್‌

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಅಫ್ಘಾನ್‌ನಿಂದ ಅಮೆರಿಕ ಮತ್ತು ಮಿತ್ರ ಪಡೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದಕ್ಕೆ ಗಮನವಹಿಸಿದ್ದೇವೆ– ಜೊ ಬಿಡೆನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada