• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2023ರ ಚುನಾವಣೆ ಗೆಲ್ಲಲು ಸರ್ಕಸ್; ಬೊಮ್ಮಾಯಿಗೆ ಬ್ರೇಕ್ ಹಾಕಲು ಮುಂದಾದ ಕಾಂಗ್ರೆಸ್; ಐದು ಅಸ್ತ್ರಗಳು

ನಚಿಕೇತು by ನಚಿಕೇತು
August 19, 2021
in ಕರ್ನಾಟಕ, ರಾಜಕೀಯ
0
ಎನ್ಇಪಿ ಜಾರಿಗೊಳಿಸುವಾಗ ಉನ್ನತ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ:  ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
Share on WhatsAppShare on FacebookShare on Telegram


2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಲ್ಲಿ ಶತಾಯಗತಾಯ ಜೆಡಿಎಸ್ ಮತ್ತು ಬಿಜೆಪಿಯನ್ನು ಸೋಲಿಸಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲೇಬೇಕು ಎಂದು ಕಾಂಗ್ರೆಸ್ ಪ್ಲಾನ್ ಮಾಡಿದೆ. ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಮೂಲಕ ಪಕ್ಷದ ವ್ಯಾಪ್ತಿಯನ್ನು ವಿಸ್ತರಿಸಬೇಕು. ಸಾಧ್ಯವಾದಷ್ಟು ಯುವಕರನ್ನು ಗುರುತಿಸಿ ಬೆಳೆಸುವುದು, ಜನರೊಂದಿಗೆ ಹೆಚ್ಚೆಚ್ಚು ಸಂಪರ್ಕ ಸಾಧಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ.

ADVERTISEMENT


ರಾಜ್ಯ ಬಿಜೆಪಿ ಸರ್ಕಾರ ಜನ ವಿರೋಧಿ ನಡೆಗಳನ್ನು ಆಳವಡಿಸಿದೆ. ಕೊರೋನಾ ಸಂದರ್ಭದಲ್ಲಂತೂ ಸರಿಯಾಗಿ ನಿರ್ವಹಣೆ ಮಾಡಲಾಗದೆ ಜನರಿಂದ ಛೀಮಾರಿ ಹಾಕಿಸಿಕೊಂಡಿದೆ. ಹಾಗಾಗಿ ಮುಂದಿನ ಬಾರಿ ಕಾಂಗ್ರೆಸ್ ಗೆಲ್ಲಲು ಅವಕಾಶ ಇದೆ. ನಮ್ಮ ಸ್ವಂತ ಬಲದಿಂದ 2023ರಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದ್ದೇವೆ. ಈಗಲಿಂದಲೇ ಪಕ್ಷದ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಮುಂದಾಗಿದ್ದೇವೆ. ಪ್ರತಿಯೊಬ್ಬರನ್ನು ತೃಪ್ತಿಪಡಿಸಲು ಕಾರ್ಯಕ್ರಮವನ್ನು ಜಾರಿಗೆ ತರಲಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಒಬ್ಬರು ಹೇಳಿದ್ದಾರೆ.

ಪ್ರತಿ ಚುನಾವಣೆಯಲ್ಲೂ 50 ಲಕ್ಷಕ್ಕೂ ಅಧಿಕ ಮುಸಲ್ಮಾನರು ಸಾಮಾನ್ಯವಾಗಿ ಕಾಂಗ್ರೆಸ್ ಗೆಮತ ಚಲಾಯಿಸುತ್ತಾರೆ. 2018ರಲ್ಲಿ ನಮಗೆ ಮುಸಲ್ಮಾನರು ಮತ ಹಾಕಲಿಲ್ಲ. ಬದಲಾಗಿ ಜೆಡಿಎಸ್‌ ಗೆ ಬೆಂಬಲಿಸಿದರು. ಹಿಂದಿನಂತೆ 2018ರಲ್ಲಿ ನಮ್ಮನ್ನು ಬೆಂಬಲಿಸಿದ್ದರೆ ಇನ್ನಷ್ಟು ಸೀಟುಗಳನ್ನು ಗೆಲ್ಲುತ್ತಿದ್ದೆವು. ಮುಸ್ಲಿಮರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ನಾವು ಮೂರನೇ ಸ್ಥಾನಕ್ಕೆ ಬಂದೆವು. ಇದಕ್ಕೆ ನಮ್ಮ ನಾಯಕರೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ


ಆದರೀಗ, ಮುಂದಿನ ಎರಡು ವರ್ಷಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲೋದು ಪಕ್ಕಾ ಎಂದು ಗೊತ್ತಾಗಿದೆ. ಹಾಗಾಗಿ ಯುವ ನಾಯಕರನ್ನು ಗುರುತಿಸಿ ಪ್ರೋತ್ಸಾಹ ನೀಡಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಲು ಉತ್ತೇಜನ ನೀಡುತ್ತೇವೆ. ಇವರ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿಯನ್ನು ಟಾರ್ಗೆಟ್ ಮಾಡುತ್ತಿದ್ದೇವೆ ಎಂದು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.


ಹೌದು, ಸರ್ಕಾರದ ವರ್ಚಸ್ಸು ವೃದ್ಧಿಯ ಗುರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಕಾಂಗ್ರೆಸ್ ನಾಯಕರ ಮುಂದಿನ ಟಾರ್ಗೆಟ್ ಎನ್ನಲಾಗಿದೆ. ಅಗ್ರೆಸ್ಸಿವ್ ಇಮೇಜ್ ಬೆಳಸಿಕೊಳ್ಳಲು ಸರ್ಕಸ್ ಮಾಡುತ್ತಿರುವ ಸಿಎಂ ಬೊಮ್ಮಾಯಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸುತ್ತಿದೆ ಎಂದು ಹೇಳಲಾಗಿದೆ.


ಸಿಎಂ ಬೊಮ್ಮಾಯಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ರೂಪಿಸಿದ ಅಸ್ತ್ರಗಳು ಏನೇನು?
1. ನೀಡಿದ ಗಡುವು ಮುಗಿಯುತ್ತಿದ್ದಂತೆಯೇ ಕೊರೋನಾ ನಿರ್ವಹಣೆಯಲ್ಲಿ ವಿಫಲ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಲಸಿಕೆ ಹಂಚಿಕೆಯಲ್ಲೂ ಮೋಸ, ರೈತರ ಸಮಸ್ಯೆ ಹೀಗೆ ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಬೊಮ್ಮಾಯಿ ವಿರುದ್ಧ ಸರಣಿ ಹೋರಾಟ ರೂಪಿಸುವುದು.
2. ಬೊಮ್ಮಾಯಿ‌ ಸ್ವತಂತ್ರ ಮುಖ್ಯಮಂತ್ರಿಯಲ್ಲ. ಬದಲಿಗೆ ವಲಸಿಗ ಮಂತ್ರಿಗಳ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಘಪರಿವಾರ, ಬಿಜೆಪಿ ಹೈಕಮಾಂಡ್ ಹೇಳಿದಂತೆ ನಡೆಸುಕೊಳ್ಳುವ ಕೈಗೊಂಬೆ. ಹೀಗೆಂದು ಜನರಿಗೆ ಪದೇ ಪದೇ ಹೇಳುವ ಮೂಲಕ ತಾನು ಕಟ್ಟಿಕೊಳ್ಳಲು ಹೊರಟ ಅಗ್ರೆಸ್ಸಿವ್ ಇಮೇಜ್ ಹಾಳು ಮಾಡುವುದು
3. ಯಡಿಯೂರಪ್ಪ ಹಾದಿಯಲ್ಲೇ ನಾನು ಸಾಗುವೆ ಎನ್ನುತ್ತ ಬೊಮ್ಮಾಯಿ ಲಿಂಗಾಯತ ಸಮುದಾಯದ ಮತಗಳ ಓಲೈಕೆಗೆ ಮುಂದಾಗಿದ್ದಾರೆ. ಇವರು ಬಿ.ಎಸ್ ಯಡಿಯೂರಪ್ಪನಂತೆಯೇ ಒಬ್ಬ ಭ್ರಷ್ಟ ಎಂದು ಇಮೇಜ್ ಕಟ್ಟಿ ಪ್ರಚಾರ ಮಾಡುವುದು. ಒಂದು ವೇಳೆ ಯಾವುದಾದರೂ ಭ್ರಷ್ಟಚಾರದ ಕೇಸಿನಲ್ಲಿ ಸಿಲುಕಿಕೊಂಡರೆ ಹೋರಾಟಕ್ಕೆ ಸಜ್ಜಾಗುವುದು.
4. ಮುಂಬರುವ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಹಲವು ವೈಪಲ್ಯಗಳ ಮುಂದಿಟ್ಟು ಸರಣಿ ಹೋರಾಟ ಮಾಡುವುದು. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯನ್ನು ಸದನದ ಚಕ್ರವ್ಯೂಹದೊಳಗೆ ಸಿಲುಕಿಸಲು ಕಾರ್ಯತಂತ್ರ ರೂಪಿಸುವುದು.
5. ತನ್ನ ಮಂತ್ರಿ ಮಂಡಲದಲ್ಲಿ ಭ್ರಷ್ಟಚಾರ ಆರೋಪವೊತ್ತ ಹಲವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈ ಪೈಕಿ ಕಳಂಕಿತ ಸಚಿವೆ  ಶಶಿಕಲಾ ಜೊಲ್ಲೆಯವರನ್ನು ಸಂಪುಟದಿಂದ ವಜಾಗೊಳಿಸಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಂತ್ರಿಗಳನ್ನೇ ಮುಂದುವರಿಸಿರುವ ಸರ್ಕಾರದ ಭಂಡತನವನ್ನೇ ಅಸ್ತ್ರ ಮಾಡಿಕೊಳ್ಳುವುದು. ಇದಕ್ಕಾಗಿ ಸದನದೊಳಗೆ ಪ್ರಬಲ ಹೋರಾಟ ನಡೆಸುವುದು ಕಾಂಗ್ರೆಸ್ಸಿನವರ ಪ್ಲಾನ್.

Tags: BOMMAICongress Partyಎಚ್ ಡಿ ಕುಮಾರಸ್ವಾಮಿಕರೋನಾಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ʼಸಿಟಿ ರವಿ ಒಬ್ಬ ಅರೆ ಹುಚ್ಚʼ – ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಬಿ‌ ವಿ ಶ್ರೀನಿವಾಸ್

Next Post

ನಿಮ್ಮ ಕೋವಿಡ್‌ ನಿಯಮ ಎಲ್ಲರಿಗೂ ಅನ್ವಯಿಸಲಿ ; ಬಿಜೆಪಿಯ ಜನಾಶಿರ್ವಾದ ಕಾರ್ಯಕ್ರಮದ ಬಗ್ಗೆ ಡಿಕೆ ಶಿವಕುಮಾರ್ ಟೀಕೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post

ನಿಮ್ಮ ಕೋವಿಡ್‌ ನಿಯಮ ಎಲ್ಲರಿಗೂ ಅನ್ವಯಿಸಲಿ ; ಬಿಜೆಪಿಯ ಜನಾಶಿರ್ವಾದ ಕಾರ್ಯಕ್ರಮದ ಬಗ್ಗೆ ಡಿಕೆ ಶಿವಕುಮಾರ್ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada