ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಈ ಕುರಿತು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ತರಾಟೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಎರಡು ಟ್ವೀಟ್ ಮಾಡಿರುವ ಅವರು, ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಆಗ್ರಯಿಸಿದ್ದಾರೆ.
ಮುಂದುವರೆದು, ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.