ಸೆಪ್ಟೆಂಬರ್ 3ನೇ ತಾರೀಕಿನಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಇದೇ ಮೊದಲ ಬಾರಿಗೆ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಹಲವು ಪಾರ್ಟಿಗಳು ಸ್ಪರ್ಧಿಸುತ್ತಿವೆ. ಬಿಜೆಪಿಗೆ ಆರಂಭದಲ್ಲಿಯೇ ಅಸಮಾಧಾನದ ಹೊಡೆತ ಬಿದ್ದಿದೆ. ಕಾಂಗ್ರೆಸ್ನಲ್ಲೂ ಭಿನ್ನಮತದ ಕಿಡಿ ಸಿಡಿಯಲಾರಂಭಿಸಿದೆ.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಬಹುತೇಕ ಎಲ್ಲಾ ವಾರ್ಡ್ನಲ್ಲಿ ಅಭ್ಯರ್ಥಿಗಳು ಕಣಕ್ಕೆ ಇಳಿಸಲಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷ 49 ವಾರ್ಡ್ಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಹಾಕಿದೆ.
ಎಂದಿನಂತೆಯೇ ಈಈ ಬಾರಿಯೂ ಸ್ಥಳೀಯ ಪ್ರಭಾವ ಮತ್ತು ಭಾಷಾ ಸೂಕ್ಷ್ಮತೆ ಆಧಾರದ ಮೇರೆಗೆ ನಡೆಯುತ್ತಿದ್ದ ಬೆಳಗಾವಿ ಪಾಲಿಕೆ ಚುನಾವಣೆಗೆ ಕೊನೆಗೂ ರಾಷ್ಟ್ರೀಯ ಪಕ್ಷಗಳು ಎಂಟ್ರಿ ನೀಡಿವೆ. ಹಾಗಾಗಿ ಚುನಾವಣೆ ಅಖಾಡವೇ ಹೊಸ ರೂಪಕ್ಕೆ ತಿರುಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಸಾಕಷ್ಟು ಕಾರ್ಯಕರ್ತರನ್ನು ಹೊಂದಿದ್ದರೂ ಪ್ರಭಾವಿ ಅಭ್ಯರ್ಥಿಗಳಿಗಾಗಿ ಭಾರೀ ಸರ್ಕಸ್ ನಡೆಸಬೇಕಾಯ್ತು.
ಮೊದಲ ಬಾರಿ ಬೆಳಗಾವಿ ಪಾಲಿಕೆ ಮೇಲೆ ಅಧಿಕಾರ ಸಾಧಿಸಲು ಹೊರಟ ಬಿಜೆಪಿ ಸಾಕಷ್ಟು ಪ್ರಯೋಗಗಳನ್ನು ನಡೆಸುತ್ತಿದೆ. ಆರಂಭದಲ್ಲಿಯೇ ಪಕ್ಷಕ್ಕೆ ಹೊಡೆತ ಬಿದ್ದರೂ ಪಕ್ಷದ ಪ್ರಾಥಮಿಕ ಸದಸ್ಯತ್ವವೇ ಇಲ್ಲದವರಿಗೆ ಟಿಕೆಟ್ ನೀಡಲಾಗಿದೆ. ಕಾರ್ಯಕರ್ತರನ್ನು ಬಿಟ್ಟು ಹೇಗೆ ಚುನಾವಣೆ ನಡೆಸುತ್ತೀರಿ ಎಂದು ನೋಡುತ್ತೇವೆ ಬಿಜೆಪಿ ನಾಯಕರಿಗೆ ಸವಾಲ್ ಹಾಕಿದ್ದಾರೆ.
ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕಾರ್ಯಕರ್ತರೇ ಇಲ್ಲ. ಹಾಗಾಗಿ ಅನೇಕರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಟಿಕೆಟ್ ಪಡೆದವರಲ್ಲಿ ಒಂದಷ್ಟು ಎಂಇಎಸ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳೂ ಇದ್ದಾರೆ. ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎನ್ನುವುದು ಕಾರ್ಯಕರ್ತರ ಆರೋಪ. ಹೀಗಿರುವಾಗಲೇ ರಮೇಶ್ ಜಾರಕಿಹೊಳಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ನನ್ನ ಆಪ್ತರಿಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದಂತೆಯೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೆರಳಿದ್ದಾರೆ. ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ.
ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ಠಿಕಾಣಿ ಹೂಡಿರುವ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ಬೆಳಗಾವಿ ಪಾಲಿಕೆ ಚುನಾವಣೆಯನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆ ಸಾಕಷ್ಟು ಸವಾಲಿನಿಂದ ಕೂಡಿದೆ. ನಾನು ಕೂಡ ಕೇವಲ ಶಾಸಕನಾಗಿದ್ದೇನೆ. ಇದು ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ ತರಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರಾಯಾಸದ ಗೆಲುವು ಸಾಧಿಸಿದ್ದಾರೆ. ಇದಕ್ಕೆ ಕಾರಣವೇ ನನಗೆ ಸ್ಥಾನ ಇಲ್ಲದಿರುವುದು. ನನಗೆ ಸಚಿವನಾಗುವ ಮನಸ್ಸು ಇಲ್ಲ. ನಮ್ಮ ಜಿಲ್ಲೆಯ ಶಾಸಕರಾದ ಮಹೇಶ್ ಕುಮಠಳ್ಳಿ ಇಲ್ಲವೇ ಶ್ರೀಮಂತ ಪಾಟೀಲ್ಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಿಗೆ ಮನವಿ ಮಾಡಲಿದ್ದಾರೆ ರಮೇಶ್.
ಬೆಳಗಾವಿ ಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರಬೇಕೆಂದರೆ ನನ್ನ ಬೆಂಬಲಿಗೆ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಬ್ಬರಲ್ಲಿ ಒಬ್ಬರಿಗಾದರೂ ಬೆಳಗಾವಿ ಜಿಲ್ಲೆಯ ಕೋಟಾದಲ್ಲಿ ಸಚಿವ ಸ್ಥಾನ ನೀಡಿ ಮುಂದಿನ ಚುನಾವಣೆ ಗೆಲ್ಲಬೇಕು ಎಂದು ರಮೇಶ್ ಹೈಕಮಾಂಡ್ಗೆ ಮನವರಿಕೆ ಮಾಡಲಿದ್ದಾರಂತೆ.
ಇನ್ನು, ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ರಮೇಶ್ ಜಾರಕಿಹೊಳಿ ಸರ್ಕಸ್ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಮಾತಿಗೆ ಹೈಕಮಾಂಡ್ ಮನ್ನಣೆ ನೀಡಿ ತನ್ನ ಬೆಂಬಲಿಗರಿಗೆ ಸಚಿವ ಸ್ಥಾನ ನೀಡಬಹುದು ಇಲ್ಲದೇ ತಿರಸ್ಕಾರವೂ ಮಾಡಬಹುದು. ಒಂದು ವೇಳೆ ಹೀಗಾದರೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮೇಲೆ ಕೆಟ್ಟ ಪರಿಣಾಮ ಬೀರೋದಂತು ಗ್ಯಾರಂ