• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
September 2, 2021
in ದೇಶ
0
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್ ಸೂಚನೆ
Share on WhatsAppShare on FacebookShare on Telegram

ಗೋ ಹತ್ಯೆ ಆರೋಪದ ಮೇರೆಗೆ ಬಂಧಿತನಾಗಿದ್ದ ಸಾಂಬಲ್ ಜಿಲ್ಲೆಯ ಜಾವೇದ್ ಎಂಬುವರ ಜಾಮೀನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಹಾಗೂ ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸಬೇಕು ಎಂದು ಹೇಳಿದೆ. ಅಲ್ಲದೆ, ಆರೋಪಿಯ ಜಾಮೀನು ನಿರಾಕರಿಸಿದೆ.

ADVERTISEMENT

ದೇಶದಲ್ಲಿ ಗೋಮಾಂಸ ಭಕ್ಷಣೆ ಯಾರ ಮೂಲಭೂತ ಹಕ್ಕಲ್ಲ.

ಗೋವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದು ವ್ಯಾಖ್ಯಾನಿಸಿರುವ ಹೈಕೋರ್ಟ್, ಅಹಾರದ ಮೂಲಭೂತ ಹಕ್ಕು ಎಂಬುದು ಗೋಮಾಂಸ ತಿನ್ನುವವರಿಗಿದ್ದರೆ, ಗೋವುಗಳನ್ನು ಪೂಜಿಸುವ ಮತ್ತು ಅದರ ಮೇಲೆಯೇ ಆರ್ಥಿಕವಾಗಿ ಅವಲಂಬಿಸಿರುವವರಿಗೂ ತಮ್ಮ ನಂಬಿಕೆ ಮತ್ತು ಬದುಕುವ ಮೂಲಭೂತ ಹಕ್ಕೂ ಇದೆ. ಜೀವಿಸುವ ಹಕ್ಕು ಕೊಲ್ಲುವ ಹಕ್ಕನ್ನು ಮೀರಿದ್ದು ಮತ್ತು ಗೋಮಾಂಸ ತಿನ್ನುವ ಹಕ್ಕನ್ನು ಎಂದಿಗೂ ಮೂಲಭೂತ ಹಕ್ಕಾಗಿ ಪರಿಗಣಿಸಲಾಗದು ಎಂದು ಹೇಳಿದೆ.

ಹಾಗೇ, ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಅಪರಾಧಕ್ಕೂ ಮುನ್ನ, ಅವರು ಹಲವು ಗೋ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅವರ ಕೃತ್ಯಗಳು ಸಮಾಜದಲ್ಲಿ ಸಾಮರಸ್ಯವನ್ನು ಕದಡಿವೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಮತ್ತೆ ಅದೇ ಅಪರಾಧ ಎಸಗುತ್ತಾರೆ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮುಸ್ಲಿಂ ಆಡಳಿತಗಾರರೇ ಗೋವನ್ನು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಪರಿಗಣಿಸಿದ್ದರು. ಗೋವಿನ ಮಹತ್ವವನ್ನು ಹಿಂದೂಗಳಂತೆಯೇ ಮುಸ್ಲಿಂ ಆಡಳಿತಗಾರರು ಕೂಡ ಅರ್ಥ ಮಾಡಿಕೊಂಡಿದ್ದರು. ಅದಕ್ಕೆ ಬಾಬರ್, ಹುಮಾಯೂನ್ ಮತ್ತು ಅಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಗೋವುಗಳ ಬಲಿ ನಿಷೇಧಿಸಿದ್ದೇ ನಿದರ್ಶನ. ಇದ್ದಲ್ಲದೆ ಮೈಸೂರಿನ ಆಡಳಿತಗಾರ ಹೈದರ್ ಅಲಿ ಆಡಳಿತಾವಧಿಯಲ್ಲಿ ಕೂಡ ಗೋಹತ್ಯೆ ಶಿಕ್ಷಾರ್ಹ ಅಪರಾಧವಾಗಿತ್ತು ಎಂದು ಹೈಕೋರ್ಟ್ ಹೇಳಿದೆ.

ಯಾವುದೇ ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆಯುಂಟಾದರೆ ಆ ದೇಶವೇ ದುರ್ಬಲವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು. ಹಾಗೇ ಗೋ ರಕ್ಷಣೆಯ ಹೆಸರಿನಲ್ಲಿ ಗೋವುಗಳಿಗೆ ಆಶ್ರಯ ಕಲ್ಪಿಸಿ ಹಣ ಗಳಿಕೆಯಲ್ಲಿ ತೊಡಗಿರುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸರ್ಕಾರ ಕಾನೂನುಗಳನ್ನು ತರಬೇಕು ಎಂದೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.

Tags: ಅಲಹಾಬಾದ್ಗೋಹತ್ಯೆಗೋಹತ್ಯೆ ನಿಷೇಧಹೈಕೋರ್ಟ್
Previous Post

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Next Post

ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post

ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada