• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಾಮಾಜಿಕ ಮಾಧ್ಯಮಗಳು ನ್ಯಾಯಾಧೀಶರ ಮಾತು ಕೇಳುವುದಿಲ್ಲ: ಸುಳ್ಳು, ಸೌಹಾರ್ದ ಕದಡುವ ಸುದ್ದಿ ಬಿತ್ತರಿಸುತ್ತಿವೆ!: ಸುಪ್ರೀಂ ಕಳವಳ

ನೀಲಿ by ನೀಲಿ
September 2, 2021
in ದೇಶ
0
ಸಾಮಾಜಿಕ ಮಾಧ್ಯಮಗಳು ನ್ಯಾಯಾಧೀಶರ ಮಾತು ಕೇಳುವುದಿಲ್ಲ: ಸುಳ್ಳು, ಸೌಹಾರ್ದ ಕದಡುವ ಸುದ್ದಿ ಬಿತ್ತರಿಸುತ್ತಿವೆ!: ಸುಪ್ರೀಂ ಕಳವಳ
Share on WhatsAppShare on FacebookShare on Telegram

ಪೋರ್ಟಲ್‌ಗಳು, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ
ಸುಳ್ಳು ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂಥ ಸುದ್ದಿಗಳ ಬಗ್ಗೆ ಸುಪ್ರೀಂಕೋರ್ಟ್‌ ಗುರುವಾರ ಕಳವಳ ವ್ಯಕ್ತಪಡಿಸಿದ್ದು ಸಾಮಾಜಿಕ ಮಾಧ್ಯಮ ಕಂಪೆನಿಗಳು ನ್ಯಾಯಾಧೀಶರಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದೆ.

ADVERTISEMENT

ಇಂತಹ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಕೇವಲ ಬಲಾಢ್ಯರ ಮಾತುಗಳನ್ನು ಕೇಳುತ್ತವೆ ಮತ್ತು ನ್ಯಾಯಾಂಗ ಸಂಸ್ಥೆಗಳ ಬಗ್ಗೆ ಯಾವುದೇ ಉತ್ತರಾದಾಯಿತ್ವ ಹೊಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜಮಿಯಾತ್ ಉಲೇಮಾ–ಐ–ಹಿಂದ್ ಸಂಘಟನೆ ಸಲ್ಲಿಸಿದ್ದಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್.ಬೋ ಪಣ್ಣಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ದೆಹಲಿಯ ಮರ್ಕಜ್ ನಿಜಾಮುದ್ದೀನ್ನಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸುಳ್ಳು ಸುದ್ದಿಗಳನ್ನು ಹರಡಿದವರ ವಿರುದ್ಧಶಿಸ್ತುಕ್ರಮ ಕೈಗೊ ಳ್ಳಬೇಕು ಎಂದು ಸಂಸ್ಥೆಮನವಿ ಮಾಡಿತ್ತು.

‘ಕೆಲವು ಖಾಸಗಿ ಸುದ್ದಿವಾಹಿನಿಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳಿಗೆ ಕೋಮು ಬಣ್ಣ ಬಳಿಯಲಾಗುತ್ತದೆ. ಅಂತಿಮವಾಗಿ ಇದರಿಂದ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ‘ಖಾಸಗಿ ಸುದ್ದಿವಾಹಿನಿಗಳ ನಿಯಂತ್ರಣಕ್ಕೆ ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ’ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು.

‘ಸಾಮಾಜಿಕ ಮಾಧ್ಯಮಗಳಲ್ಲಿನ್ಯಾಯಾಧೀಶರು, ಸಂಸ್ಥೆಗಳ ವಿರುದ್ಧವೂ ಬರೆಯಲಾಗುತ್ತಿದೆ. ಇಂಥ ಕೃತ್ಯಗಳಿಗೆ ಉತ್ತರದಾಯಿತ್ವವೇ ಇರುವುದಿಲ್ಲ. ಯೂಟ್ಯೂಬ್ ಚಾನೆಲ್ಗಳಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣವೇ ಇಲ್ಲ. ಯಾರು ಬೇಕಾದರೂ ಯೂಟ್ಯೂಬ್ ಚಾನೆಲ್ ಆರಂಭಿಸಬಹುದಾಗಿದೆ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

“ನಾನು ಯಾವುದೇ ಸಾರ್ವಜನಿಕ ಚಾನೆಲ್, ಟ್ವಿಟರ್, ಫೇಸ್ಬುಕ್ ಅಥವಾ ಯೂಟ್ಯೂಬ್ ನೋಡುವುದಿಲ್ಲ. ಅವರು ಎಂದಿಗೂ ನಮಗೆ ಪ್ರತಿಕ್ರಿಯಿಸುವುದಿಲ್ಲ ಮತ್ತು ಯಾವುದೇ ಜವಾಬ್ದಾರಿ ಹೊಂದಿಲ್ಲ. ಕೆಟ್ಟದಾಗಿ ಬರೆದಿವೆ. ಈ ಬಗ್ಗೆ ಅವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಮತ್ತು ಇದು ತಮ್ಮ ಹಕ್ಕು ಎಂದು ಭಾವಿಸಿವೆ” ಎಂಬುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ವೇದಿಕೆಗಳಲ್ಲಿ ಪ್ರಸಾರವಾಗುವ ಸುದ್ದಿಗಳಿಗೆ ಹಲವು ಬಾರಿ ಕೋಮು ಬಣ್ಣ ನೀಡಲಾಗುತ್ತಿದ್ದು ಇದು ದೇಶಕ್ಕೆ ಕೆಟ್ಟ ಹೆಸರು ತರುತ್ತದೆ ಎಂದು ಕೂಡ ಅವರು ಹೇಳಿದ್ದಾರೆ.

ನೀವು ಯುಟ್ಯೂಬ್ ನೋಡಿದರೆ ಅಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಗೋಚರಿಸುತ್ತವೆ. ವೆಬ್ ಪೋರ್ಟಲ್ಗಳಿಗೆ ಯಾವುದೇ ನಿಯಂತ್ರಣವಿಲ್ಲ . ಸುದ್ದಿಗೆ ಕೋಮು ಬಣ್ಣವನ್ನು ನೀಡುವ ಪ್ರಯತ್ನವಿದ್ದು ಅದು ಸಮಸ್ಯೆಯಾಗಿದೆ. ಇದು ಅಂತಿಮವಾಗಿ ದೇಶಕ್ಕೆ ಕೆಟ್ಟ ಹೆಸರನ್ನು ತರುತ್ತದೆ ಎಂದು ಕೋರ್ಟ್‌ ಹೇಳಿದೆ.

ಕೋವಿಡ್ ಸೋಂಕು ಹರಡುವುದಕ್ಕೂ ಮಾರ್ಚ್ 2020ರಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಗೂ ಸಂಪರ್ಕ ಕಲ್ಪಿಸಿ ಮಾಧ್ಯಮಗಳು ನಕಲಿ ಸುದ್ದಿ ಹರಡುವುದಕ್ಕೆ ತಡೆ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ನೂತನ ಮಾಹಿತಿ ತಂತ್ರಜ್ಞಾನ ನಿಯಮಾವಳಿ 2021 ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತದೆ ಎಂದು ಇದೇ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿಕ್ರಿಯಿಸಿದರು. ಅಲ್ಲದೆ ಅವರು ಐಟಿ ನಿಯಮಾವಳಿಗಳನ್ನು ಕುರಿತು ವಿವಿಧ ಹೈಕೋರ್ಟ್ಗಳಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಬೇಕೆಂದು ಕೇಂದ್ರ ಸರ್ಕಾರ ಕೋರಿರುವ ಮನವಿಯನ್ನು ಗಣನೆಗೆ ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದರು. ಬೇರೆ ಬೇರೆ ಹೈಕೋರ್ಟ್ಗಳು ವಿಭಿನ್ನ ಆದೇಶ ನೀಡುತ್ತಿದ್ದು ಸುಪ್ರೀಂಕೋರ್ಟ್ನಲ್ಲಿ ಅದರ ವಿಚಾರಣೆ ನಡೆದರೆ ಸಮಗ್ರ ಚಿತ್ರಣ ದೊರೆಯುತ್ತದೆ. ಏಕೆಂದರೆ ಇದು ದೇಶವ್ಯಾಪಿ ಸಮಸ್ಯೆಯಾಗಿದೆ” ಎಂದಿದ್ದಾರೆ.

ಇದಕ್ಕೆ ಸಮ್ಮತಿಸಿದ ಸಿಜೆಐ ಜಮೀಯತ್ ಉಲಮಾ-ಇ-ಹಿಂದ್ ಮತ್ತು ಪೀಸ್ ಪಾರ್ಟಿ ಸಲ್ಲಿಸಿರುವ ಪ್ರಸ್ತುತ ಅರ್ಜಿಯನ್ನು ವರ್ಗಾವಣೆ ಮನವಿಯೊಂದಿಗೆ ಪಟ್ಟಿ ಮಾಡಿದ್ದು ಆರು ವಾರಗಳ ಬಳಿಕ ಪ್ರಕರಣದ ವಿಚಾರಣೆ ನಡೆಯಲಿದೆ.

Tags: BJPCongress PartyCovid 19Fake NewsSocial MediaSupreme Court of Indiaಕೋವಿಡ್-19ನರೇಂದ್ರ ಮೋದಿಬಿಜೆಪಿಸುಪ್ರೀಂ ಕೋರ್ಟ್
Previous Post

CT Ravi, BSY, Eshwarappa ಎಲ್ಲಿದ್ರಂತೆ? ಸಿದ್ದರಾಮಯ್ಯ #Siddaramaiah

Next Post

ʼನನ್ನ ಕ್ಷೇತ್ರದಲ್ಲಿ ತಲೆ ಎತ್ತಿದ ಕ್ಯಾಸಿನೋ ಜೂಜುʼ – ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಮೀಷನರ್‌ಗೆ ಜಾರ್ಜ್‌ ಪತ್ರ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ʼನನ್ನ ಕ್ಷೇತ್ರದಲ್ಲಿ ತಲೆ ಎತ್ತಿದ ಕ್ಯಾಸಿನೋ ಜೂಜುʼ – ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಮೀಷನರ್‌ಗೆ ಜಾರ್ಜ್‌ ಪತ್ರ

ʼನನ್ನ ಕ್ಷೇತ್ರದಲ್ಲಿ ತಲೆ ಎತ್ತಿದ ಕ್ಯಾಸಿನೋ ಜೂಜುʼ - ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಮೀಷನರ್‌ಗೆ ಜಾರ್ಜ್‌ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada