• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ:ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

Any Mind by Any Mind
September 3, 2021
in ಕರ್ನಾಟಕ
0
ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ:ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿಳಿಸಿದ್ದಾರೆ.

ADVERTISEMENT

ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 60ನೇ ವರ್ಷದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ನಿಗಮವು ಸಂಕಷ್ಟದಲ್ಲಿದೆ ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು. ಕೆ.ಎಸ್.ಆರ್.ಟಿ.ಸಿ. ಗೆ ತನ್ನದೇ ಅಂತರ್ಗತವಾದ ಶಕ್ತಿ ಇದೆ; ವಿಸ್ತಾರವಿದೆ; ಜಾಲವಿದೆ. ಇವುಗಳನ್ನು ಹೆಚ್ಚಿಸುವುದು ಹೇಗೆ ಎಂಬ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ,  ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯ; ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಅವರು  ತಿಳಿಸಿದ್ದಾರೆ.

ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು , ಕೆ.ಎಸ್.ಆರ್.ಟಿ.ಸಿ.ಯೊಂದಿಗೆ ಜನತೆ ಭಾವನಾತ್ಮಕ ಬಾಂಧವ್ಯ ಬೆಸೆದಿದ್ದಾರೆ. ಬಸ್ ಎಂದರೆ ಹಲವು ಅರ್ಥಗಳನ್ನು ಧ್ವನಿಸುತ್ತದೆ- ಪ್ರಯಾಣ, ಜೀವನದ ಪ್ರಯಾಣ, ಎಲ್ಲರಿಗೂ ಸ್ಥಳಾವಕಾಶ ಒದಗಿಸುವ ಸಮಾನತೆಯ ಪರಿಕಲ್ಪನೆ, ನಿರಂತರ ಚಾಲನಾ ಶಕ್ತಿ ಮೊದಲಾದ ವಿಚಾರಗಳು ನಮ್ಮಲ್ಲಿ ಸುಳಿಯುತ್ತದೆ. ಸರ್ಕಾರದಲ್ಲಿ ನಿರಂತರ ಚಲನಶೀಲತೆ ಹೊಂದಿರುವ ಇಲಾಖೆ ಎಂದರೆ ಅದು ಸಾರಿಗೆ ಇಲಾಖೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದ್ದಾರೆ.

ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ ಹೊಂದಿಕೊಳ್ಳುವ ಜೊತೆಗೆ ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್ ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆ.ಎಸ್.ಆರ್.ಟಿ.ಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು. ಕೆ.ಎಸ್. ಆರ್. ಟಿ.ಸಿ. ಕಾರ್ಯಾಗಾರಗಳಲ್ಲಿ ಬಳಕೆಯಾಗುತ್ತಿರುವ ತಂತ್ರಜ್ಞಾನಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಈ ತಂತ್ರಜ್ಞಾನಗಳು ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಸಮಾರಂಭದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ವಿಶೇಷ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಇದರೊಂದಿಗೆ ನೌಕರರು ಮತ್ತು ಅವರ ಕುಟುಂಬದವರ ಅನುಕೂಲಕ್ಕಾಗಿ ಇನ್ಫೋಸಿಸ್ ಸಹಯೋಗದೊಂದಿಗೆ ಡಿಜಿಟಲ್ ಲರ್ನಿಂಗ್ ಕಾರ್ಯಕ್ರಮ ಹಾಗೂ ಆನ್ ಲೈನ್ ನಲ್ಲಿ ನೌಕರರ ಕುಂದುಕೊರತೆ ನಿವಾರಣಾ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಸಚಿವರಾದ ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ್, ಆನಂದ್ ಸಿಂಗ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ,  ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ , ಮತ್ತಿತರರು ಉಪಸ್ಥಿತರಿದ್ದರು.

Tags: Basavaraj BommaiCovid 19KSRTCTravelಕರೋನಾಕೋವಿಡ್-19
Previous Post

ಕಾಶ್ಮೀರದಲ್ಲಿ ಇಂಟರ್ನೆಟ್ ವ್ಯವಸ್ಥೆಗೆ ಸ್ಥಗಿತ; ಸುದ್ದಿಗೆ ನಿರ್ಬಂಧ: ಪತ್ರಕರ್ತರ ಕಳವಳ

Next Post

ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ

Related Posts

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 19, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್‌ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 1 ಸ್ವತಂತ್ರ...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ

ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada