• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾಂತ್ವನ ಕೇಂದ್ರವನ್ನು ಸ್ಥಗಿತಗೊಳಿಸುವ ತೀರ್ಮಾನ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮ: ಸಿದ್ದರಾಮಯ್ಯ

Any Mind by Any Mind
September 6, 2021
in ಕರ್ನಾಟಕ
0
ಸಾಂತ್ವನ ಕೇಂದ್ರವನ್ನು ಸ್ಥಗಿತಗೊಳಿಸುವ ತೀರ್ಮಾನ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮ: ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು.

ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು ಎಂದು ಹೇಳಿದ್ದಾರೆ.

ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ ಅಪರಾಧ.ಹೀಗಾಗಿ ತಕ್ಷಣ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Tags: Basavaraj BommaiBJPCongress PartyWOMEN PROTECTIONಬಿಜೆಪಿಸಿದ್ದರಾಮಯ್ಯ
Previous Post

JEE ಮೈನ್ಸ್ ಪರೀಕ್ಷೆ ಪತ್ರಿಕೆ ಲೀಕ್ ಅವ್ಯವಹಾರವನ್ನು ಖಂಡಿಸಿ NSUI ಪ್ರತಿಭಟನೆ

Next Post

ಉತ್ತರ ಪ್ರದೇಶದಲ್ಲಿ ಶೇಕಡಾ 20ರಷ್ಟು ಸ್ವಿಂಗ್ ಆದರೆ ಮಾತ್ರ ಸಮಾಜವಾದಿ ಪಕ್ಷಕ್ಕೆ ಚಾನ್ಸ್!

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ಉತ್ತರ ಪ್ರದೇಶದಲ್ಲಿ ಶೇಕಡಾ 20ರಷ್ಟು ಸ್ವಿಂಗ್ ಆದರೆ ಮಾತ್ರ ಸಮಾಜವಾದಿ ಪಕ್ಷಕ್ಕೆ ಚಾನ್ಸ್!

ಉತ್ತರ ಪ್ರದೇಶದಲ್ಲಿ ಶೇಕಡಾ 20ರಷ್ಟು ಸ್ವಿಂಗ್ ಆದರೆ ಮಾತ್ರ ಸಮಾಜವಾದಿ ಪಕ್ಷಕ್ಕೆ ಚಾನ್ಸ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!