ಕಳೆದ ವಾರ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಬ್ರಾಹ್ಮಣ್ಯವನ್ನು ಬೇರೂರಿಸುವ ಜಾತಿ ನಾಯಕ ಎಂದು ಗುಡುಗಿದ ನಟ ಚೇತನ್ ಈಗ ಮತ್ತೆ ಸುದ್ದಿಯಲ್ಲಿದ್ದು ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ ಎಂದು ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್.ಎಸ್.ಎಸ್.ಅನ್ನು ಸ್ಥಾಪಿಸಿದರು ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು.
ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ ಎಸ್ ಎಸ್, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಪರಿವಾರ , ಎರಡನ್ನೂ ಸೋಲಿಸಬೇಕು ಎಂದು ನಟ ಚೇತನ್ರವರು ಟ್ವೀಟ್ ಮಾಡಿದ್ದಾರೆ.