• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

#StopHindiImposition : ಕೇಂದ್ರ ಸರ್ಕಾರದ ʻಹಿಂದಿ ದಿವಸʼ ವಿರೋಧಿಸಿ ಕನ್ನಡ ಪರ ಹೋರಾಟಗಾರರಿಂದ ಟ್ವಿಟರ್ ಅಭಿಯಾನ .!

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ. ಹಿಂದಿ ಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ.

ಪ್ರತಿಧ್ವನಿ by ಪ್ರತಿಧ್ವನಿ
September 14, 2021
in ಕರ್ನಾಟಕ
0
#StopHindiImposition : ಕೇಂದ್ರ ಸರ್ಕಾರದ ʻಹಿಂದಿ ದಿವಸʼ ವಿರೋಧಿಸಿ ಕನ್ನಡ ಪರ ಹೋರಾಟಗಾರರಿಂದ ಟ್ವಿಟರ್ ಅಭಿಯಾನ .!
Share on WhatsAppShare on FacebookShare on Telegram
ADVERTISEMENT

ಸಂವಿಧಾನದಲ್ಲಿ ಯಾವುದೇ ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ನೀಡಿಲ್ಲ. ಆದರೆ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ವಿರೋಧವನ್ನೂ ಲೆಕ್ಕಿಸದೆ ಸೆಪ್ಟೆಂಬರ್14 ನ್ನು ಹಿಂದಿ ದಿವಸ್ ಎಂದು ಘೋಷಿಸಿತ್ತು. ಅಲ್ಲದೆ, ಎಲ್ಲಾ ರಾಜ್ಯಗಳಲ್ಲೂ ಇದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ತಾಕೀತು ಮಾಡಿತ್ತು. ಈ ವಿಚಾರ ಸಾಮಾನ್ಯವಾಗಿ ಕರ್ನಾಟಕವನ್ನು, ಕನ್ನಡ ಪರ ಹೋರಾಟಗಾರರನ್ನೂ ಕೆರಳಿಸಿದ್ದು ಸುಳ್ಳಲ್ಲ. ಇದೇ ಕಾರಣಕ್ಕೆ ಕರವೇ  ಪ್ರತಿವರ್ಷ ಸೆ.14 ರಂದು ಹಿಂದಿ ದಿವಸ್ ವಿರುದ್ದ ಹೋರಾಟ ನಡೆಸುತ್ತಲೇ ಇದೆ. ಇಂದೂ ಸಹ ಕರವೇ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನವನ್ನು ಆರಂಭಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಟ್ವಿಟರ್ ಅಭಿಯಾನ ಆರಂಭವಾಗಿದ್ದು, ಸತತ 12 ಗಂಟೆಗಳ ಕಾಲ ಈ ಅಭಿಯಾನ ನಡೆಯಲಿದೆ. ಎಲ್ಲಾ ಕನ್ನಡಿಗರೂ ಪಾಲ್ಗೊಳ್ಳಬೇಕು ಎಂದು ಕರವೇ ಮನವಿ ಮಾಡಿದೆ.

ಕೇಂದ್ರ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿರುವ ಕನ್ನಡ ಪರ ಹೋರಾಟಗಾರರು, “ಇಂದು (ಸೆಪ್ಟೆಂಬರ್‌ 14) ಒಕ್ಕೂಟ ಸರ್ಕಾರ ಹಿಂದಿ ದಿವಸವನ್ನು ಆಚರಿಸುತ್ತಿದ್ದು, ಭಾರತೀಯರ ಇತರೆ ಭಾಷೆಗಳ ಮೇಲೆ ಹಿಂದಿಯನ್ನು ಹೇರುವುದು ನಿರಂತರವಾಗಿ ನಡೆಯುತ್ತಿದೆ. ಹಿಂದಿ ಭಾಷೆಗೆ ಯಾರೂ ವಿರೋಧಿಸುತ್ತಿಲ್ಲ. ಒಂದು ಭಾಷೆಯಾಗಿ ಎಲ್ಲರೂ ಹಿಂದಿಯನ್ನು ಗೌರವಿಸುತ್ತಾರೆ. ಆದರೆ, ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆಯನ್ನು ಸರ್ಕಾರ ನಿರಂತರ ಮುಂದುವರಿಸುತ್ತಿದೆ. ಉದ್ಯೋಗಗಳನ್ನು ಹಿಂದಿ ಭಾಷಿಗರು ಕಿತ್ತುಕೊಳ್ಳುತ್ತಿದ್ದಾರೆ. ಹಿಂದಿಯೇತರ ಭಾಷಿಗರ ಸಾಂಸ್ಕೃತಿಕ ಅಸ್ಮಿತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಹಿಂದಿ ದಿವಸ್‌ ವಿರೋಧ ಮಾಡುತ್ತಿದೆ.

ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು. ಇದಕ್ಕೆ ಅಡ್ಡಿಯಾಗಿರುವುದು ಒಕ್ಕೂಟ ಸರ್ಕಾರದ ಹಿಂದಿ ಹೇರಿಕೆ. ಹಿಂದಿ ಭಾಷಿಕರಿಗೆ ತಮ್ಮ ಭಾಷೆಗಳಲ್ಲೇ ಔದ್ಯೋಗಿಕ ಪರೀಕ್ಷೆ ಬರೆಯುವ ಅವಕಾಶ, ಕನ್ನಡಿಗರು ಮಾತ್ರ ಹಿಂದಿ ಇಂಗ್ಲಿಷ್ ಕಲಿತು ಬರೆಯಬೇಕು. ಕನ್ನಡದ ಮಕ್ಕಳು ವಂಚನೆಗೊಳಗಾಗಿದ್ದಾರೆ#StopHindiImposition #ಹಿಂದಿಹೇರಿಕೆನಿಲ್ಲಿಸಿ

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) September 14, 2021

ಇದೇ ನಿಟ್ಟಿನಲ್ಲಿ, ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ,  ಕರ್ನಾಟಕ ರಕ್ಷಣಾ  ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ ಜನರಲ್ಲಿ ಮನವಿ ಮಾಡಿದೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ  ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, “ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಬೇಕು” ಎಂಬ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

https://www.facebook.com/NarayanaGowdruTA/photos/a.658908434157358/4323481424366689/?type=3

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ. ಹಿಂದಿ ಹೇರಿಕೆಯು ಕೇವಲ  ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ.  ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ.

ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ. ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂಬುವುದು ಒಟ್ಟಾರೆ ಕನ್ನಡ ಪರ ಹೋರಾಟಗಾರರ ವಾದ.

ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ. ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Tags: #StopHindiImpositionBOMMAIKannadaKarnatakaModiಹಿಂದಿ ದಿವಸ
Previous Post

ರಾಹುಲ್ ಗಾಂಧಿಗೆ ಮತ್ತೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ; ಯಾಕೆ ಗೊತ್ತಾ?

Next Post

Karnataka Assembly live

Related Posts

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್
ಇತರೆ / Others

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

by ಪ್ರತಿಧ್ವನಿ
January 13, 2026
0

ಬೆಂಗಳೂರು: ವಿವೇಕನಗರ ಪೊಲೀಸರ ವಿರುದ್ಧ ಕೇಳಿಬಂದಿದ್ದ ಲಾಕ್ ಅಪ್ ಡೆತ್ ಆರೋಪಕ್ಕೆ ಸಿಐಡಿ ತನಿಖೆ ತಿರುವು ನೀಡಿದೆ. ದರ್ಶನ್ ಎಂಬ ಯುವಕನ ಕೊಲೆ ಪ್ರಕರಣ ತನಿಖೆ ನಡೆಸಿದ್ದ...

Read moreDetails
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
Next Post
Karnataka Assembly live

Karnataka Assembly live

Please login to join discussion

Recent News

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!