ಕೊರೊನಾ ಕಾರಣ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದ ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ಎಸ್ಎಲ್ ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿತ್ತು. ಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಆ ಫಲಿತಾಂಶವನ್ನು ಒಪ್ಪಿರಲಿಲ್ಲ. ಅದನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶ ಇಂದು ಘೋಷಣೆಯಾಗಲಿದೆ.

ಸೆಪ್ಟೆಂಬರ್ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶವನ್ನು ಇಂದು 10:30ರ ಸುಮಾರಿಗೆ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಘೋಷಣೆಯಾಗಲಿದ್ದು, ಪಿಯು ಬೋರ್ಡ್ ಫಲಿತಾಂಶದಲ್ಲಿ ಲಭ್ಯವಾಗಲಿದೆ. ವಿಧಾನಸೌಧದಲ್ಲಿ 10.30ಕ್ಕೆ ಪಿಯುಸಿ ಫಲಿತಾಂಶ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಟಿ ನಡೆಸಲಿದ್ದು, ಪಿಯು ಬೋರ್ಡ್ ನಿರ್ದೇಶಕಿ ಡಾ ಆರ್ ಸ್ನೇಹಲ್ ಉಪಸ್ಥಿತಿ ಇರಲಿದ್ದಾರೆ.
ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅನ್ನು ಇಟ್ಟುಕೊಂಡು http://karresults.nic.in ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿಯ ಫಲಿತಾಂಶ ಲಭ್ಯವಾಗಲಿದೆ. ಕಳೆದ ಬಾರಿ ನೀಡಿದ್ದ ಫಲಿತಾಂಶದಲ್ಲಿ ಬಹುಪಾಲು ಮಕ್ಕಳು ಉತ್ತಮ ಅಂಕ ಪಡೆದು ಪಾಸ್ ಆಗಿದ್ದರು. ಆದರೆ ಕೆಲವರಿಗೆ ಈ ಫಲಿತಾಂಶದ ಕುರಿತು ಅಸಮಾಧಾನವಿದ್ದ ಕಾರಣ ಸರ್ಕಾರ ಅಂಥಹ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಕೊರೊನಾ ಕಾರಣಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಈ ಫಲಿತಾಂಶ ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಸಹ ಬರೆದಿದ್ದರು ಒಟ್ಟು 18 ಸಾವಿರದ 413 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಖಾಸಗಿ ಅಭ್ಯರ್ಥಿಗಳು 17,470 , ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ 592 ವಿದ್ಯಾರ್ಥಿಗಳು ಹಾಗೂ 351 ವಿದ್ಯಾರ್ಥಿಗಳು ರಿಪಿಟರ್ಸ್ ಚಾಲೆಂಜ್ ಪರೀಕ್ಷೆ ಬರೆದಿದ್ದರು. ಒಟ್ಟು 18,413 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ರು ಎಂದು ಇಲಾಖೆ ಮಾಹಿತಿ ನೀಡಿದೆ.
ಮೊದಲ ಬಾರಿ ನೀಡಿದ ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಅಲ್ಲದೇ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜೊತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡು ಫಲಿತಾಂಶ ನೀಡಲಾಗಿತ್ತು. ಇನ್ನು ಕಳೆದ ಬಾರಿ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು ಹಾಗೂ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಆಗಿದ್ದರು. ಪುನರಾವರ್ತಿತ ಅಭ್ಯರ್ಥಿಗಳನ್ನು ಕೂಡ ಪಾಸ್ ಮಾಡಲಾಗಿತ್ತು. ಕನಿಷ್ಠ ಉತ್ತೀರ್ಣ ಅಂಕ ನೀಡಲಾಗಿತ್ತು. 4,50,706 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ – 1,95,650 & ದ್ವಿತೀಯ ದರ್ಜೆ 1,47, 055ಯಲ್ಲಿ ತೇರ್ಗಡೆಹೊಂದಿದ್ದರು.
CET ಫಲಿತಾಂಶ ಕೂಡ ಇಂದೇ ಪ್ರಕಟ.!!
2021-22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವು ಇಂದು (ಸೆಪ್ಟೆಂಬರ್ 20) ಪ್ರಕಟವಾಗಲಿದೆ. ಹಾಗೆಯೇ ಕೌನ್ಸೆಲಿಂಗ್ ಪ್ರಕ್ರಿಯೆಯು ಅಕ್ಟೋಬರ್ನಿಂದ ಪ್ರಾರಂಭವಾಗಲಿದೆ. ಈ ವರ್ಷ ಒಟ್ಟು 2,01,834 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದು, ಶೇ.92.90% ಹಾಜರಾತಿ ದಾಖಲಾಗಿದೆ. ಅದೇ ರೀತಿ 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.80.48% ಹಾಜರಾತಿ ದಾಖಲಾಗಿದೆ. 1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.95.88% ಹಾಜರಾತಿ ದಾಖಲಾಗಿದೆ. 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದು ಶೇ.95.91% ಹಾಜರಾತಿ ದಾಖಲಾಗಿದೆ.
ಆಗಸ್ಟ್ 28, 29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂಜಿನಿಯರಿಂಗ್, ಯೋಗಾ, ನ್ಯಾಚುರೋಪತಿ, ಬಿಫಾರ್ಮ್, ಫಾರ್ಮಾ ಡಿ, ವೆಟರ್ನರಿ ಮತ್ತು ಫಾರ್ಮ್ ಸೈನ್ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಮಧ್ಯಾಹ್ನ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಯಲಿದೆ. ಸುದ್ದಿಗೋಷ್ಠಿ ಬಳಿಕ 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. kea.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇಂದು ಸಂಜೆ 4 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಪ್ರಸಕ್ತ ವರ್ಷದಲ್ಲಿ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ. ಜೊತೆಗೆ ಪದವಿ ಪದವಿ ಪ್ರವೇಶಕ್ಕೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಈ ಹಿಂದೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದರು. ರಾಜ್ಯದಲ್ಲಿ ಈ ವರ್ಷ ಕೋವಿಡ್ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೇ ಪಾಸು ಮಾಡಿದೆ. ಆದರೆ ಆಗಸ್ಟ್ 28, 29 ಹಾಗೂ 30ರಂದು ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. 530 ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದವು. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ನಡೆಸಲಾಗಿತ್ತು.
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದರು, ಅವರಲ್ಲಿ ಭೌತಶಾಸ್ತ್ರಕ್ಕೆ 1,93,588 ಮತ್ತು ರಸಾಯನಶಾಸ್ತ್ರಕ್ಕೆ 1,93,522 ಹಾಜರಾಗಿದ್ದರು. ಆ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆದಿದ್ದರು. ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಸಿಇಟಿ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ರ್ಯಾಂಕ್ ನಿರ್ಧಾರ ಮಾಡಲಾಗುವುದು ಎಂದು ಸಚಿವರು ಈಗಾಗಲೇ ತಿಳಿಸಿದ್ದಾರೆ. ಇಂಜಿನಿಯರಿಂಗ್ ಶುಲ್ಕ ಹೆಚ್ಚಳದ ಕುರಿತು ಅತೀ ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.
ಅಕ್ಟೋಬರ್ 1ರವರೆಗೆ ಪದವಿ ಕಾಲೇಜು ಪ್ರವೇಶಕ್ಕೆ ಅವಕಾಶ.!!
ಸಿಇಟಿ ಫಲಿತಾಂಶ ಇಂದು (ಸೆ.20ರಂದು) ಪ್ರಕಟವಾಗಲಿದೆ. ಪದವಿ ಕಾಲೇಜುಗಳಿಗೆ ಅಕ್ಟೋಬರ್ 1ರವರೆಗೂ ದಾಖಲಾಗಲು ಅವಕಾಶ ನೀಡಲಾಗಿದೆ. ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದು ಸಚಿವರು ಹೇಳಿದ್ದರು.






