ಕಳೆದ ಎರಡು ವರ್ಷಗಳಲ್ಲಿ 100 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯುತಿದ್ದಾರೆ, ಹಾಗೂ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಬಯಸುವ SC, ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುವ ರಾಜ್ಯ ಸರ್ಕಾರದ ಶಿಕ್ಷಣ ಕಾರ್ಯಕ್ರಮವು ಕಳಪೆ ಅನುಷ್ಠಾನವನ್ನು ಸೂಚಿಸುತ್ತದೆ. ಇದರಲ್ಲಿ ಕನಿಷ್ಠ 50 ಪ್ರತಿಶತ ಬೆಂಗಳೂರು ನಗರದ ವಿದ್ಯಾರ್ಥಿಗಳು ಹಾಗೂ ಬಹುಪಾಲು ಜಿಲ್ಲೆಗಳಲ್ಲಿ, ಒಬ್ಬ ವಿದ್ಯಾರ್ಥಿಯು ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿಲ್ಲ ಎಂದು ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ದಾರಿಯಾಗಿದೆ.
ಬುಧವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮೇಲಿನ ಸಮಸ್ಯೆ ಕುರಿತು ಸಂಭಂದ ಪಟ್ಟ ಇಲಾಖೆ ಸಚಿವರಿಗೆ ಮತ್ತು ಸರ್ಕಾರಕ್ಕೆ ಪ್ರಶ್ನೆ ಕೇಳುವ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ. ಸರ್ಕಾರದ ಮಾಹಿತಿಯ ಪ್ರಕಾರ, 2020-21ರಲ್ಲಿ, 52 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ 7 ವಿದ್ಯಾರ್ಥಿಗಳು ಎಸ್ಸಿ-ಎಸ್‌ಟಿ ಸಮುದಾಯದಿಂದ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು, 2019ರಲ್ಲಿ 49 ವಿದ್ಯಾರ್ಥಿಗಳು ಸಮಾಜ ಕಲ್ಯಾ ಇಲಾಖೆಯಿಂದ ಮತ್ತು ಆರು ವಿದ್ಯಾರ್ಥಿಗಳು ಎಸ್ಸಿ, ಎಸ್‌ಟಿ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕೆ ಆಯ್ಕೆಯಾಗಿದ್ದರು, ಇದರಲ್ಲಿ ಕನಿಷ್ಠ ಅರ್ಧದಷ್ಟು ವಿದ್ಯಾರ್ಥಿಗಳು ಬೆಂಗಳೂರು ನಗರದಿಂದ ಬಂದವರು. ಅನೇಕ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಅರ್ಜಿದಾರರನ್ನು ನೋಡಬಹುದಾಗಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆ ಕುರಿತು ಕಲಾಪದಲ್ಲಿ ದ್ವನಿ ಎತ್ತಿದ ಶಾಸಕ ಹ್ಯಾರಿಸ್, ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವಲ್ಲಿ ಸರ್ಕಾರ ವಿಫಲವಾಗಿದೆ, ವಿದ್ಯಾರ್ಥಿಗಳನ್ನು ಅವಕಾಶ ವಂಚಿತರನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.
ಶಾಸಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸರ್ಕಾರವು ಹೆಚ್ಚಿನ ಜಾಗೃತಿ ಮೂಡಿಸಲು ಪ್ರಯತ್ನಗಳನ್ನು ಮಾಡುತ್ತಿದೆ , ಪ್ರಸ್ತುತ, ಸುಮಾರು 200 ವಿಶ್ವವಿದ್ಯಾಲಯಗಳನ್ನು ವಿದೇಶದಲ್ಲಿ ಗುರುತಿಸಲಾಗಿದೆ, ಇದಕ್ಕಾಗಿ ಸರ್ಕಾರವು ವಿದ್ಯಾರ್ಥಿವೇತನವನ್ನು ನೀಡುತ್ತಿದೆ ಎಂದು ಸಚಿವರು ಹೇಳಿದ್ದಾರೆ, ಈ ಕಾರ್ಯಕ್ರಮದ ಮೂಲಕ ಇಬ್ಬರು ವಿದ್ಯಾರ್ಥಿಗಳು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಓದುತ್ತಿದ್ದಾರೆ ಎಂದು ಹೇಳಿದ್ದಾರೆ.