• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರದ್ದು ಪ್ರಾಯೋಜಿತ ಪ್ರತಿಭಟನೆ ಎಂದ ಸಿಎಂ ಬೊಮ್ಮಾಯಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

Any Mind by Any Mind
September 25, 2021
in ಕರ್ನಾಟಕ, ರಾಜಕೀಯ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರನ್ನು ಅವಮಾನಿಸದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಗುಡುಗಿದ್ದಾರೆ.

ADVERTISEMENT

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ವಿಧಾನಮಂಡಲದ ಅಧಿವೇಶನದ ಕೊನೆಯ ದಿನವೂ ಕೂಡ ಕಾಂಗ್ರೆಸ್ ನಾಯಕರೊಂದಿಗೆ ಟಾಂಗಾದಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ. ಬಿಜೆಪಿಯವರು ಎಂದೂ ಜನಪರವಲ್ಲ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಾವು ಇಂದು ಬೆಲೆ ಏರಿಕೆ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದೇವೆ. ಇದು ಮೂರನೇ ದಿನದ ಹೋರಾಟವಾಗಿದೆ ಮೊದಲನೇ ದಿನ ಎತ್ತಿನ ಗಾಡಿಯಲ್ಲಿ ಪ್ರತಿಭಟನೆ, 2ನೇ ದಿನ ಸೈಕಲ್ನುಲ್ಲಿ. ಇಂದು ಟಾಂಗಾ ಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ಜನಸಾಮಾನ್ಯರ ಬದುಕಿಗೆ ಬೆಂಕಿ ಇಟ್ಟಿದೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ. ಬಿಜೆಪಿಯವರು ಎಂದೂ ಜನಪರವಲ್ಲ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ, ಜನರ ಹಾದಿ ತಪ್ಪಿಸುವುದೇ ಇವರ ಕೆಲಸ ಲಜ್ಜೆಗೆಟ್ಟವರು ಇವರು ಭಂಡರು.

ಕಾಂಗ್ರೆಸ್ ಸಾಮಾನ್ಯ ಮನುಷ್ಯನ ಧ್ವನಿಯಾಗಿದ್ದು, ಅವರ ಪರವಾಗಿ ನಾವು ಹೋರಾಟ ಮುಂದುವರಿಸುತ್ತೇವೆ. ತಮಿಳುನಾಡು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದೆ. ಕರ್ನಾಟಕದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 10 ರೂ. ತೆರಿಗೆಯನ್ನು ಇಳಿಸಲಿ. ನಮ್ಮ ಪಕ್ಷ ಈಗ ಅಧಿಕಾರದಲ್ಲಿದ್ದರೆ ನಾವು ಅದನ್ನುಕಡಿಮೆ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.

ಇದರ ನಡುವೇ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕಂದಾಯ ಸಚಿವ ಆರ್ ಅಶೋಕ್‌, ಪಕ್ಷದ ಪ್ರತಿಭಟನೆಯನ್ನು “ಅಗ್ಗದ ರಾಜಕೀಯ” ಅಥವಾ ಗಿಮಿಕ್ ಎಂದು ಕರೆದಿದ್ದಾರೆ. “ಕಾಂಗ್ರೆಸ್ ಚುನಾವಣೆಯಲ್ಲಿ ಸೋತು ಸುಣ್ಣವಾಗಿದೆ ಆದ್ದರಿಂದ ಟಾಂಗಾ ರ್ಯಾಲಿಗಳಂತಹ ಗಿಮಿಕ್ ರಾಜಕೀಯವನ್ನು ಬಳಸುತ್ತಿದೆ” ಎಂದು ಹೇಳಿದ್ದಾರೆ.

ಇದೇ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣವನ್ನು ಬಹಿಷ್ಕರಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ದ ತೀವ್ರ ಕಿಡಿಕಾರಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರಾಜ್ಯ ವಿಧಾನಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಹಲವು ಉದಾಹರಣೆಗಳಿವೆ ಎಂದಿದ್ದಾರೆ.

Tags: Basavaraj BommaiBJPCongress PartyFarmersFarmers protestನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಶ್ವದ ಬಲಿಷ್ಠ ಸೇನಾ ಪಡೆಗಳ ಸಾಲಿಗೆ ಭಾರತ; ದೇಶದ ಪ್ರಾಬಲ್ಯವೃದ್ಧಿ ನೋಡಿ ಕಂಗಾಲಾಯ್ತ ಚೀನಾ?

Next Post

ಫ್ರಾನ್ಸ್‌ನ ಐವರು ಸಚಿವರ ಫೋನ್‌ಗಳಲ್ಲಿ ಪೆಗಾಸಸ್‌ ಕುರುಹು ಪತ್ತೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಫ್ರಾನ್ಸ್‌ನ ಐವರು ಸಚಿವರ ಫೋನ್‌ಗಳಲ್ಲಿ ಪೆಗಾಸಸ್‌ ಕುರುಹು ಪತ್ತೆ

ಫ್ರಾನ್ಸ್‌ನ ಐವರು ಸಚಿವರ ಫೋನ್‌ಗಳಲ್ಲಿ ಪೆಗಾಸಸ್‌ ಕುರುಹು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada