• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆ ಭಾರತ್ ಬಂದ್; ಇಲ್ಲಿದೆ ಸಂಪೂರ್ಣ ವಿವರ.!

Any Mind by Any Mind
September 26, 2021
in ಕರ್ನಾಟಕ, ದೇಶ
0
ನಾಳೆ ಭಾರತ್ ಬಂದ್;  ಇಲ್ಲಿದೆ ಸಂಪೂರ್ಣ ವಿವರ.!
Share on WhatsAppShare on FacebookShare on Telegram
ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆ, ನೂತನ ಕೃಷಿ ಕಾಯ್ದೆಗಳ(Farm Laws)  ಸೇರಿದಂತೆ ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್‌ ಮೋರ್ಚಾ  ಸೆ.27 ರಂದು (ನಾಳೆ) ಭಾರತ್​ ಬಂದ್​ಗೆ (Bharat Bandh) ಕರೆ ನೀಡಿದೆ.

ಸೋಮವಾರದಂದು ದೇಶಾದ್ಯಂತ ಬಂದ್​​ಗೆ ಸಂಯುಕ್ತ ಕಿಸಾನ್ ಮೋರ್ಚಾ (Samyuktha Kisan Morcha) ನೀಡಿರುವ ಕರೆಗೆ ರೈತಪರ, ದಲಿತ ಹಾಗೂ ಸಮಾನ ಮನಸ್ಕ ಸಂಘಟನೆಗಳು ಬೆಂಬಲವನ್ನು ಸೂಚಿಸಿದೆ. ಒಟ್ಟಾರೆ ದೇಶದಾದ್ಯಂತ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್​ ಬಂದ್​ಗೆ ಬೆಂಬಲ ನೀಡಲಿವೆ.


KSRTC, BMTC ನೈತಿಕ ಬೆಂಬಲ ನೀಡಿದಾಗ್ಯೂ, ಬಸ್ಸುಗಳ ಸಂಚಾರ ಇರುತ್ತದೆ. ಅದೇ ರೀತಿ ಆಟೋ, ಊಬರ್, ಓಲಾ ಚಾಲಕರ ಸಂಘಟನೆಗಳೂ ಕೂಡಾ ರೈತರ ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ. ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ ಸೇರಿದಂತೆ ನಾನಾ ಸಂಘಟನೆಗಳು ಕೇವಲ ನೈತಿಕ ಬೆಂಬಲ ನೀಡುತ್ತಿವೆ. ಪೆಟ್ರೋಲ್‌ ಸೇರಿದಂತೆ ದಿನನಿತ್ಯ ಬಳಕೆಯ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಇರುವ ಆಕ್ರೋಶವೂ ಬಂದ್‌ಗೆ ಬೆಂಬಲ ನೀಡಲು ಪ್ರೇರಕವಾಗಿದೆ.

ಸಾಂಧರ್ಬಿಕ ಚಿತ್ರ


ಕರ್ನಾಟಕ ಬಂದ್​​ಗೆ ಕಬ್ಬು ಬೆಳೆಗಾರರ ಸಂಘ, ರೈತ ಸಂಘ, ಹಸಿರು ಸೇನೆ ಸೇರಿ ಕೆಲ ಸಂಘಟನೆಗಳು ಬೆಂಬಲ ನೀಡಲಿವೆ.  ಬಂದ್​​​ ಇದ್ದರೂ ಕರ್ನಾಟಕದಲ್ಲಿ ಎಲ್ಲವೂ ಯಥಾಸ್ಥಿತಿ ಇರುವ ಸಾಧ್ಯತೆ ಇದೆ. ಬಹುತೇಕ ಸಂಘಟನೆಗಳು ಬಂದ್​ಗೆ ನೈತಿಕ ಬೆಂಬಲ ನೀಡಲಿವೆ. ನೈತಿಕ ಬೆಂಬಲ ನೀಡುತ್ತೇವೆ, ಆದರೆ ಅಂಗಡಿ ಮುಂಗಟ್ಟು ಬಂದ್​ ಮಾಡಲ್ಲ ಎಂದು ಹೇಳುತ್ತಿದ್ದಾರೆ. ಲಾಕ್‌ಡೌನ್‌, ಕರೋನಾ ಮೂರನೆ ಅಲೆಯ ಆರ್ಥಿಕ ಹೊಡೆತದಿಂದ ಬೇಸತ್ತಿರುವ ಅನೇಕ ವ್ಯಾಪಾರಿಗಳು ಬಂದ್‌ಗೆ ನೈತಿಕ ಬೆಂಬಲ ನೀಡಿ, ವ್ಯಾಪಾರ-ವಹಿವಾಟುಗಳನ್ನು ನಡೆಸಲು ಯೋಜಿಸಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಕರ್ನಾಟಕ ಬಂದ್ ಅಂಗವಾಗಿ ನಾಳೆ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಗಾಂಧಿ ಪ್ರತಿಮೆ ಇಂದ, ರೈತ ಸಂಘಟನೆಗಳು ದಲಿತ ಸಂಘಟನೆಗಳು ಜನಪರ ಸಂಘಟನೆಗಳು ಕನ್ನಡ ಸಂಘಟನೆಗಳು ಮಹಿಳಾ ಸಂಘಟನೆಗಳು ಎಲ್ಲ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸೇರಿ ವಿನೂತನ ರೀತಿಯಲ್ಲಿ ಭಾರತ್ ಬಂದ್ ಯಶಸ್ವಿಗೆ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ  ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪರವಾಗಿ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲ:

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್‌ ಬಂದ್‌ಗೆ ಕಾಂಗ್ರೆಸ್‌ ಕೂಡಾ ಬೆಂಬಲ ವ್ಯಕ್ತಪಡಿಸಿದೆ.

ಡಿ.ಕೆ. ಶಿವಕುಮಾರ್

‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ. ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಠ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ. ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಏಳು ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಪಕ್ಷ ಬೆಂಬಲಿಸಲಿದೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆ ಮುಂದೂಡಿಕೆ

ಭಾರತ್ ಬಂದ್ ಘೋಷಣೆಯಾಗಿರುವ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿ ವಿಶ್ವವಿದ್ಯಾಲಯ ಆದೇಶ ಪ್ರಕಟಿಸಿದೆ.

ಬೆಂಗಳೂರು ನಗರ ವಿವಿ

ಸದ್ಯ ಪದವಿ, ಸ್ನಾತಕೋತ್ತರ, Bed ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತ್​ ಬಂದ್​​ ಹಿನ್ನೆಲೆ ಟ್ರಾಫಿಕ್​ ಜಾಮ್ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಅಲ್ಲದೆ ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳ ಜತೆಗೆ ಮೆರವಣಿಗೆ ಹಿನ್ನೆಲೆ ಟ್ರಾಫಿಕ್​ ಜಾಮ್ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ವಿವಿ ಮುನ್ನೆಚ್ಚರಿಕೆ ವಹಿಸಿಕೊಂಡಿದೆ.

ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌

ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಘೋಷಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿ, ಎಲ್ಲಾ ಎಸಿಪಿಗಳು, 120ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 150ಕ್ಕೂ ಹೆಚ್ಚು ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ, ಭದ್ರತೆಗಾಗಿ ನಾಳೆ 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಸಾಂಧರ್ಬಿಕ ಚಿತ್ರ

ಮುಂಜಾನೆ 5 ಗಂಟೆಯಿಂದಲೇ ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿ ವಿಭಾಗದಲ್ಲಿ ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್‌ ಮಾಡಲಾಗಿದೆ. ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಫ್ರೀಡಂಪಾರ್ಕ್‌, ಟೌನ್‌ಹಾಲ್‌ನಲ್ಲಿ ಹೆಚ್ಚುವರಿ ಭದ್ರತೆ ಇದೆ. ಹೆಚ್ಚುವರಿಯಾಗಿ ಕೆಎಸ್​ಆರ್​ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.

ಸಾರ್ವಜನಿಕರ ದೈನಂದಿನ ಕೆಲಸಕ್ಕೆ ಅಡ್ಡಿಪಡಿಸುವಂತಿಲ್ಲ. ನಾಳೆ ಯಾವುದೇ ರಸ್ತೆ ತಡೆಗಳಿಗೆ ಅನುಮತಿ ನೀಡಿಲ್ಲ. ಈವರೆಗೂ ಯಾರೂ ಮೆರವಣಿಗೆಗೆ ಅನುಮತಿ ಕೇಳಿಲ್ಲ. ಪ್ರತಿಭಟನೆ ಹೆಸರಿನಲ್ಲಿ ನಿಯಮ ಉಲ್ಲಂಘಿಸುವಂತಿಲ್ಲ. ದುಷ್ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಭಾರತ್ ಬಂದ್ ಯಶಸ್ವಿಗೊಳಿಸುವಂತೆ ಕುರುಬೂರು Shanthkumar  ಮನವಿ
Tags: BJPBMTCCongress PartyCovid 19farm lawsKSRTCಆಟೋಊಬರ್ಓಲಾಕಬ್ಬು ಬೆಳೆಗಾರರ ಸಂಘಕರ್ನಾಟಕ ಬಂದ್ಕೆಎಸ್ಆರ್ಟಿಸಿಕೋವಿಡ್-19ಟ್ಯಾಕ್ಸಿ ಮಾಲೀಕರ ಸಂಘನರೇಂದ್ರ ಮೋದಿನೂತನ ಕೃಷಿ ಕಾಯ್ದೆಬಿಎಂಟಿಸಿ ನೌಕರರ ಸಂಘಬಿಜೆಪಿಬೆಂಗಳೂರುಬೆಲೆ ಏರಿಕೆಭಾರತ್ ಬಂದ್ರೈತ ಸಂಘಲಾರಿ ಮಾಲೀಕರ ಸಂಘಸಂಯುಕ್ತ ಕಿಸಾನ್ ಮೋರ್ಚಾಹಸಿರು ಸೇನೆಹೋಟೆಲ್ ಮಾಲೀಕರ ಸಂಘ
Previous Post

ಸದಾ ಸುಳ್ಳಿನೆಡೆಗೆ ಮುಖ ಮಾಡಿವ ʼಸಿದ್ದಹಸ್ತರಿಗೆʼ JDS ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ: ಅವರಿವರ ಜತೆ ಹೋಗುವ ಪಕ್ಷ ಎಂದ ಸಿದ್ದರಾಮಯ್ಯ ಹೇಳಿಕೆಗೆ HDK ತಿರುಗೇಟು

Next Post

ಹಾನಗಲ್ ಉಪಚುನಾವಣೆ: ಉದಾಸಿ ಫ್ಯಾಮಿಲಿಗೆ ಕಾದಿದೆಯಾ ಶಾಕ್?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಹಾನಗಲ್ ಉಪಚುನಾವಣೆ: ಉದಾಸಿ ಫ್ಯಾಮಿಲಿಗೆ ಕಾದಿದೆಯಾ ಶಾಕ್?

ಹಾನಗಲ್ ಉಪಚುನಾವಣೆ: ಉದಾಸಿ ಫ್ಯಾಮಿಲಿಗೆ ಕಾದಿದೆಯಾ ಶಾಕ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada