• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನರ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಸಾದ್ಯವಿಲ್ಲ: ದೇವೇಗೌಡರ ಗುಡುಗು

ಪ್ರತಿಧ್ವನಿ by ಪ್ರತಿಧ್ವನಿ
September 27, 2021
in ಕರ್ನಾಟಕ
0
ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳ ತಿಕ್ಕಾಟದಲ್ಲಿ ಚರ್ಚೆ ಇಲ್ಲದೆ ಬಿಲ್ ಪಾಸ್: ಮಾಜಿ ಪ್ರಧಾನಿ ದೇವೇಗೌಡ ಬೇಸರ
Share on WhatsAppShare on FacebookShare on Telegram

ಜೆಡಿಎಸ್ ಅವರಿವರ ಜೊತೆ ಸೇರುವ ಪಕ್ಷ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಟ್ವೀಟ್ ಮಾಡಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಕ ಈಗ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ADVERTISEMENT

2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.O’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಹೇಳಿದ್ದಾರೆ.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದಿದ್ದಾರೆ.

ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ: 

ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. 

ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣ್ಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು  ಎಂದು ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ‘ ಎಂಬ ವಿಷಯದ ಬಗ್ಗೆ ಮಾತನಾಡಿದ್ದಾರೆ. 

ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.

Tags: Congress PartyH D DevegowdaJDS Karnatakasiddaramaiahಎಚ್ ಡಿ ಕುಮಾರಸ್ವಾಮಿಕೋವಿಡ್-19
Previous Post

ಕಳೆದ 6 ವರ್ಷಗಳ ಮೋದಿ ಆಢಳಿತದಲ್ಲಿ ಭಾರತ ವಿಶ್ವಬ್ಯಾಂಕ್‌ನ ಎಲ್ಲಾ ಸಾಲಗಳನ್ನು ಮರುಪಾವತಿಸಿದೆಯೇ? – Fact Check

Next Post

ಐಟಿ ಸೆಲ್ ಎಂಬ ಚೋರ್ ಬಜಾರೂ, ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾದ ಮಾನವೂ!

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಐಟಿ ಸೆಲ್ ಎಂಬ ಚೋರ್ ಬಜಾರೂ, ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾದ ಮಾನವೂ!

ಐಟಿ ಸೆಲ್ ಎಂಬ ಚೋರ್ ಬಜಾರೂ, ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾದ ಮಾನವೂ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada