ಸಿಟಿ ಪ್ರಕರಣ ಕೋರ್ಟ್ ನಲ್ಲಿ ಇರುವಾಗಲೇ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮತ್ತೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವರಾಗಿದ್ದ ಬೆಳಗಾವಿ ಶಾಸಕ ರಾಮೇಶ್ ಜಾರಕಿಹೊಳಿ ಅವರ ಅಶ್ಲೀಲ ವೀಡಿಯೋವೊಂದು ಸಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿತ್ತು. ಅದಾದ ನಂತರ ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆ ಮತ್ತು ಕೋರ್ಟ್ ಎಂದು ಬ್ಯೂಸಿಯಾಗಿದ್ದರು. ಆದರೀಗ ದಿಢೀರ್ ಎಂದು ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಅವರು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ವೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಅನ್ನು ಅಧಿಕಾರಕ್ಕೆ ತರುವಲ್ಲಿ ನನ್ನ ಪಾತ್ರ ಮುಖ್ಯವಾದದ್ದು, ನಮ್ಮ ಸರ್ಕಾರ ಇರುವಾಗಲೇ ನನ್ನನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ಪ್ರಕರಣವನ್ನು ಈಗಳೂ ಮುಂದುವರಿಸುತ್ತಲೇ ಇದ್ದಾರೆ. ನಿಮ್ಮ (ಬಸವರಾಜ್ ಬೊಮ್ಮಾಯಿ) ನೇತೃತ್ವದ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂದು ನಂಬಿಕೆ ಇತ್ತು ಆದರೆ ಸಿಗದೆ ನಿರಾಶೆಯಾಗಿದೆ ಎಂಬ ಮಾತುಕತೆಗಳಾಗಿದೆ ಎನ್ನಲಾಗಿದೆ.
ನಿನ್ನೆ ಸೋಮವಾರ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಿಡುಗಡೆ ಪ್ರಕರಣ ಸಂಬಂಧ ಎಸ್ಐಟಿ ತನಿಖಾ ತಂಡ ಅಂತಿಮ ವರದಿ ಸಲ್ಲಿಸಲು ಇನ್ನೂ ಕಾಲ ಕೂಡಿ ಬಂದಂತೆ ಕಾಣುತ್ತಿಲ್ಲ. ಎಸ್ಐಟಿ ತನಿಖಾ ತಂಡ ರಚನೆಯ ಕಾನೂನು ಬದ್ಧತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ತನಿಖಾ ವರದಿಯನ್ನು ಸಲ್ಲಿಸುವ ಎಸ್ಐಟಿ ತಂಡದ ಕಾರ್ಯಕ್ಕೆ ಹಿನ್ನೆಡೆಯಾಗಿದೆ.
ಎಸ್ಐಟಿ ಮನವಿಗೆ ಆಕ್ಷೇಪ : ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಿಡುಗಡೆ ಸಂಬಂಧ ದಾಖಲಾಗಿದ್ದ ಎರಡು ದೂರುಗಳ ತನಿಖೆ ಪುರ್ಣಗೊಳಸಿರುವ ಎಸ್ಐಟಿ ತನಿಖಾ ತಂಡ ಎರಡು ಪ್ರಕರಣದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಸಂತ್ರಸ್ತ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷಾಧಾರ ಇಲ್ಲದ ಹಿನ್ನೆಲೆಯಲ್ಲಿ “ಬಿ” ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹನಿಟ್ರ್ಯಾಪ್ ಮಾಡಿರುವ ಆರೋಪ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್ಐಟಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.