• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಯುಷ್ಮಾನ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ

ನಚಿಕೇತು by ನಚಿಕೇತು
September 29, 2021
in ದೇಶ
0
ಆಯುಷ್ಮಾನ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ
Share on WhatsAppShare on FacebookShare on Telegram


ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯ ಹೊಸ ಹಂತಕ್ಕೆ ಚಾಲನೆ ನೀಡಿದ್ದಾರೆ. ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ, 21 ನೇ ಶತಮಾನದಲ್ಲಿ ಭಾರತವು ಮುಂದುವರೆಯಲು ಇಂದು ಅತ್ಯಂತ ಮಹತ್ವದ ದಿನ. ಕಳೆದ 7 ವರ್ಷಗಳ ಹಿಂದೆ ಆರಂಭಿಸಿದ ಆರೋಗ್ಯ ಅಭಿಯಾನವೂ ಈಗ ಹೊಸ ರೂಪ ಪಡೆದುಕೊಂಡಿದೆ. ಭಾರತ್ ಡಿಜಿಟಲ್ ಮಿಷನ್ ಇಂದಿನಿಂದ ಕಾರ್ಯಾರಂಭ ಆಗುತ್ತಿದೆ. ಇದು ಭಾರತೀಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಿ ಶಕ್ತಿಯನ್ನು ತುಂಬಲಿದೆ ಎಂದು ಅಭಿಪ್ರಾಯಪಟ್ಟರು.
3 ವರ್ಷಗಳ ಹಿಂದೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯನ್ನು ಆರಂಭಿಸಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಶುರುವಾಗುತ್ತಿದ್ದು, ನನಗೆ ಸಂತೋಷವಾಗಿದೆ ಎಂದರು.

ADVERTISEMENT

ಇನ್ನು ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ. ಈ ಹಿಂದೆ ಆರೋಗ್ಯ ಸೇತು ಆ್ಯಪ್ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಕಷ್ಟು ಸಹಾಯ ಮಾಡಿದೆ. ಉಚಿತ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್‌ ವ್ಯಾಕ್ಸಿನೇಷನ್ ಪೂರೈಸಿದೆ. ಇದರ ಹಿಂದೆ ಕೋ-ವಿನ್‌ ಆ್ಯಪ್ನ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ಕೊರೊನಾ ಅವಧಿಯಲ್ಲಿ ಟೆಲಿಮೆಡಿಸಿನ್‌ನ ವಿಸ್ತರಣೆಯೂ ಆಗಿದೆ. ಈ ಸೌಲಭ್ಯವು ರಿಮೋಟ್ ಸ್ಥಳಗಳಲ್ಲಿ ವಾಸವಾಗಿರುವ ದೇಶವಾಸಿಗಳು ನಗರದ ದೊಡ್ಡ ಆಸ್ಪತ್ರೆಗಳ ವೈದ್ಯರೊಂದಿಗೆ ಮನೆಯಲ್ಲಿಯೇ ಕುಳಿತು ಸಂಪರ್ಕಿಸಲು ಸಹಾಯ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಏನಿದು ಆಯುಷ್ಮಾನ್ ಡಿಜಿಟಲ್ ಮಿಷನ್‌?

ಇದು ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಸರಳವಾಗಿಸುವ ಯೋಜನೆ. ಈ ಯೋಜನೆಯಲ್ಲಿ ಪ್ರತಿಯೊಬ್ಬರಿಗೂ ಪ್ರತ್ಯೇಕ ಹೆಲ್ತ್ ಐಡಿಯನ್ನು ನೀಡಲಾಗುತ್ತದೆ. ಆರೋಗ್ಯದ ಬಗೆಗಿನ ಮಾಹಿತಿ ಹೆಲ್ತ್ ಐಡಿಯಲ್ಲಿ ಲಿಂಕ್ ಆಗಿರಲಿದ್ದು, ಸಂಪೂರ್ಣ ಮಾಹಿತಿ ಈ ಯೋಜನೆಯಲ್ಲಿ ಸುರಕ್ಷಿತವಾಗಿರುತ್ತೆ ಎನ್ನಲಾಗುತ್ತಿದೆ.

ಮೊಬೈಲ್ ಅಪ್ಲಿಕೇಶನ್‌ ಮೂಲಕ ಯೋಜನೆಯ ಮಾಹಿತಿ ಲಭ್ಯವಾಗಲಿದೆ. ಯೋಜನೆ ಮೂಲಕ ದೇಶದ ತಜ್ಞ ವೈದ್ಯರೊಂದಿಗೆ ಸಂಪರ್ಕ ಸಾಧಿಸಬಹುದಾಗಿದ್ದು, ಯಾವ ವೈದ್ಯರ ಬಳಿ ಯಾವುದಕ್ಕೆ ಚಿಕಿತ್ಸೆ ಎಂಬ ಮಾಹಿತಿ ಲಭ್ಯವಾಗಲಿದೆ. ಅಲ್ಲದೆ ಮನೆಯಲ್ಲೇ ಕೂತು ಆನ್‌ಲೈನ್‌ ಮೂಲಕ ಸಂಪರ್ಕ ಸಾಧಿಸಬಹುದಾಗಿದೆ. ಡಿಜಿಟಲ್ ಮೂಲಕ ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆಯನ್ನು ರಕ್ಷಿಸಲಾಗುತ್ತದೆ ಎನ್ನುತ್ತಿದೆ ಕೇಂದ್ರ.

ಆಯುಷ್ಮಾನ್ ಭಾರತ ಯೋಜನೆಯೂ ಕೂಡ ಇಂದಿನಿಂದ ಡಿಜಿಟಲ್ ರೂಪ ಪಡೆದಿದೆ. ಮೋದಿಯವರ ಡಿಜಿಟಲೀಕರಣ ಕನಸಿಗೆ ಈ ಯೋಜನೆಯೂ ಒಳಪಟ್ಟಿದೆ. ಆದ್ರೆ ಈ ಯೋಜನೆಯೂ ದೇಶದ ಜನತೆಗೆ ಎಷ್ಟು ಪ್ರಯೋಜನ ಆಗಲಿದೆ ಎಂದು ಕಾದು ನೋಡಬೇಕಿದೆ.

Tags: Ayushman BharatBJPCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

‘ಕಾಂಗ್ರೆಸ್ ಮುಕ್ತ ಭಾರತ’ದ ಕನಸು ಕಾಣುತ್ತಿರುವುದು ಕೇವಲ ಬಿಜೆಪಿಯಲ್ಲ

Next Post

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್.!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada