• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2023 ಚುನಾವಣೆಯಲ್ಲಿ ಜೆಡಿಎಸ್‌ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ

Any Mind by Any Mind
September 29, 2021
in ಕರ್ನಾಟಕ, ರಾಜಕೀಯ
0
2023 ಚುನಾವಣೆಯಲ್ಲಿ ಜೆಡಿಎಸ್‌ನಿಂದ  30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ
Share on WhatsAppShare on FacebookShare on Telegram

2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ADVERTISEMENT

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ಕೇತಗಾನಹಳ್ಳಿಯ ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರ ಆರಂಭಕ್ಕು ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ ಮಾಡುವ ಕೆಲಸ ಮಾಡಲಾಗುವುದು ಎಂದ ಅವರು, ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ ಎಂದರು.

ಮಹಿಳೆಯರಿಗೂ ಟಾಸ್ಕ್:

ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಟಾಸ್ಕ್ ಕೊಡಲಾಗುವುದು. 3ನೇ ದಿನದ ಇಂದಿನ ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನಿಗದಿ ಮಾಡಲಾಗುವುದು.30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ, ಎಲ್ಲ ಮಹಿಳಾ ನಾಯಕಿಯರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ 33% ಮೀಸಲು ವಿಧೇಯಕ:

ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಮಹಿಳೆಯರಿಗೆ ಚುನಾವಣೆಯಲ್ಲಿ 33% ಮೀಸಲಾತಿ ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ. ಕರ್ನಾಟಕದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾಡುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದೇ ವೇಳೆ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯಾದ ಲೀಲಾದೇವಿ ಆರ್ ಪ್ರಸಾದ್ ಅವರು ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ಮಾಡಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹಾಜರಿದ್ದರು.

Tags: BJPCongress PartyElectionElectionsJDSJDS Karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಯ್ಕೆ

Next Post

ರಾಜ್ಯದಲ್ಲಿ ಶಿಕ್ಷಕರ ಅಭಾವ: ಕರೋನಾ ತಗ್ಗಿ ಶಾಲೆ ಆರಂಭವಾದರೂ ಮಕ್ಕಳಿಗೆ ಸಿಗಲಿದೆಯೇ ಉತ್ತಮ ಗುಣಮಟ್ಟದ ಶಿಕ್ಷಣ.?

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ರಾಜ್ಯದಲ್ಲಿ ಶಿಕ್ಷಕರ ಅಭಾವ: ಕರೋನಾ ತಗ್ಗಿ ಶಾಲೆ ಆರಂಭವಾದರೂ ಮಕ್ಕಳಿಗೆ ಸಿಗಲಿದೆಯೇ ಉತ್ತಮ ಗುಣಮಟ್ಟದ ಶಿಕ್ಷಣ.?

ರಾಜ್ಯದಲ್ಲಿ ಶಿಕ್ಷಕರ ಅಭಾವ: ಕರೋನಾ ತಗ್ಗಿ ಶಾಲೆ ಆರಂಭವಾದರೂ ಮಕ್ಕಳಿಗೆ ಸಿಗಲಿದೆಯೇ ಉತ್ತಮ ಗುಣಮಟ್ಟದ ಶಿಕ್ಷಣ.?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada