• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಅಮರೀಂದರ್ ಸಿಂಗ್: ಬಿಜೆಪಿ ನಾಯಕರ ಭೇಟಿ ವದಂತಿ !

Any Mind by Any Mind
September 29, 2021
in ದೇಶ, ರಾಜಕೀಯ
0
ದೆಹಲಿಯಲ್ಲಿ ಅಮರೀಂದರ್ ಸಿಂಗ್: ಬಿಜೆಪಿ ನಾಯಕರ ಭೇಟಿ ವದಂತಿ !
Share on WhatsAppShare on FacebookShare on Telegram

ಕಾಂಗ್ರೆಸ್ ಹಿರಿಯ ನಾಯಕ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಅವರ ಸ್ಥಾನಕ್ಕೆ ಅನಿರೀಕ್ಷಿತವಾಗಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ನೇಮಕ ಮಾಡಿದ ಬಳಿಕ, ಕೆಲವು ದಿನಗಳಿಂದ ಪಂಜಾಬ್ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ADVERTISEMENT

ಇದೀಗ ಒಂದು ಕಡೆ ಅಮರೀಂದರ್ ಸಿಂಗ್ ವಿರೋಧಿ ಬಣದ ನಾಯಕ ನವಜೋತ್ ಸಿಂಗ್ ಸಿಧು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರೆ, ಮತ್ತೊಂದು ಕಡೆ ಮಾಜಿ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆಯ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದಾರೆ.

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ನಿರ್ಣಾಯಕ ಘಟ್ಟಕ್ಕೆ ತಂದ ಪಂಜಾಬ್ ಬೆಳವಣಿಗೆ!

ಉತ್ತಮ ಆಡಳಿತ ಮತ್ತು ಪಕ್ಷ ಸಂಘಟನೆಯ ಹೊರತಾಗಿಯೂ ಚುನಾವಣಾ ಹೊಸ್ತಿಲಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಿಧು ಬಂಡಾಯಕ್ಕೆ ಮಣಿದು ತಮ್ಮ ರಾಜೀನಾಮೆ ಪಡೆದ ಪಕ್ಷದ ಹೈಕಮಾಂಡ್ ವಿರುದ್ಧ ಆಕ್ರೋಶಗೊಂಡಿರುವ ಸಿಂಗ್ ಅವರ ಈ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ. ಜೊತೆಗೆ ಪಕ್ಷದ ರಾಜ್ಯ ಘಟಕ ಈಗಾಗಲೇ ಒಡೆದ ಮನೆಯಾಗಿದ್ದು, ಹೊಸ ಸರ್ಕಾರದಲ್ಲಿ ಅಧಿಕಾರ ಪಡೆದಿರುವವರ ಒಂದು ಗುಂಪು, ಅಧಿಕಾರವಂಚಿತ ಸಿಂಗ್ ಬಣ ಮತ್ತು ಬಂಡಾಯ ನಾಯಕ ನವಜೋತ್ ಸಿಧು ಬಣಗಳ ನಡುವೆ ಪಕ್ಷದ ಒಗ್ಗಟ್ಟು ಹರಿದುಹಂಚಿಹೋಗಿದೆ. ಆದರೆ, ದೊಡ್ಡ ಸಂಖ್ಯೆಯ ಶಾಸಕರ ಪಡೆ ಸಿಂಗ್ ಅವರಿಗೆ ಆದ ಅನ್ಯಾಯದ ಹಿನ್ನೆಲೆಯಲ್ಲಿ ಅವರ ಪರ ನಿಂತಿದ್ದಾರೆ. ಆ ಹಿನ್ನೆಲೆಯಲ್ಲಿ ಕೂಡ ಸಿಂಗ್ ದೆಹಲಿ ಭೇಟಿ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಸಂಚಲನ ಮೂಡಿಸಿದೆ‌

ಈ ನಡುವೆ, ಅಮರೀಂದರ್  ಅವರು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಬಹುದು ಎಂದು ಕೆಲವು ಮಾಧ್ಯಮ ವರದಿ ಮಾಡಿವೆ. ಜೊತೆಗೆ ಮಂಗಳವಾರ ಸಂಜೆ ಹೊತ್ತಿಗೆ ಸಿಂಗ್ ಮತ್ತು ಬಿಜೆಪಿ ಹೈಕಮಾಂಡ್ ಅಮಿತ್ ಶಾ ಭೇಟಿಯ ಹಳೆಯ ಫೋಟೋಗಳು, ಹೊಸ ಭೇಟಿ ಮತ್ತು ಮಾತುಕತೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Breaking News – ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಆದರೆ, ಇಂತಹ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಾಲ್, ‘ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿ ಕುರಿತಂತೆ ಹಲವು ಊಹಾಪೋಹಗಳು ಎದ್ದಿವೆ. ವೈಯಕ್ತಿಕ ಕಾರಣಕ್ಕಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಸಮಯದಲ್ಲಿ ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡಲಿದ್ದಾರೆ ಮತ್ತು ನೂತನ ಮುಖ್ಯಮಂತ್ರಿಗಾಗಿ ಕಪುರ್‌ತಲಾದ ಮನೆಯನ್ನು ಖಾಲಿ ಮಾಡುತ್ತಾರೆ. ಈ ವಿಚಾರವಾಗಿ ಯಾವುದೇ ಅನಗತ್ಯ ಊಹಾಪೋಹಗಳ ಅಗತ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

ಅಲ್ಲದೆ ಸ್ವತಃ ಅಮರೀಂದರ್ ಸಿಂಗ್ ಕೂಡ ಈ ಬಗ್ಗೆ ಬುಧವಾರ ಬೆಳಗ್ಗೆ ಸ್ಪಷ್ಟನೆ ನೀಡಿದ್ದು, ತಮ್ಮ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ, ನೂತನ ಮುಖ್ಯಮಂತ್ರಿಗೆ ಮನೆ ಬಿಟ್ಟುಕೊಡಲು ಬಂದಿದ್ದೇನೆ. ಇದೇ ಸಮಯದಲ್ಲಿ ದೆಹಲಿಯ ಕೆಲವು ಮಿತ್ರರನ್ನು ಭೇಟಿಯಾಗುವುದಿದೆ ಅಷ್ಟೇ. ಅದು ಬಿಟ್ಟು ಉಳಿದ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ರಾಹುಲ್, ಪ್ರಿಯಾಂಕ ಅನನುಭವಿಗಳು; ಸಿಧು ಅಪಾಯಕಾರಿ- ಮಾಜಿ ಸಿಎಂ ಅಮರಿಂದರ್ ಸಿಂಗ್

ಈ ನಡುವೆ, ಸಿಧು ರಾಜೀನಾಮೆ ವಿಷಯ ದೆಹಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಮರೀಂದರ್ ಸಿಂಗ್ ರಾಜೀನಾಮೆ ಬಳಿಕ ನೂತನ ಸಿಎಂ ಆಯ್ಕೆ, ಸಂಪುಟ ರಚನೆ ಸೇರಿದಂತೆ ಪ್ರತಿ ಹಂತದಲ್ಲೂ ಪಕ್ಷದ ಹೈಕಮಾಂಡ್ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಹಿನ್ನೆಲೆಯಲ್ಲಿ ಸಿಧು ಸಿಡಿದೆದ್ದಿದಾರೆ. ಇದೀಗ ಈ ಬೆಳವಣಿಗೆಯಿಂದ ಪಕ್ಷದ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ. ತನ್ನ ತಂತ್ರಗಾರಿಕೆ ತನಗೇ ತಿರುಗುಬಾಣವಾದ ಸ್ಥಿತಿ ಕಾಂಗ್ರೆಸ್ ಹೈಕಮಾಂಡ್ ನದು.

ಪಂಜಾಬಿನಲ್ಲಿ ಕಾಂಗ್ರೆಸಿಗೆ ‘ದಲಿತ ಸಿಎಂ’ಗಿಂತ ಒಳ್ಳೆಯ ಆಯ್ಕೆ ಇರಲಿಲ್ಲ!

ಚುನಾವಣೆ ಹೊಸ್ತಿಲಲ್ಲಿ ಒಂದು ಕಡೆ ವಿಶ್ವಾಸಾರ್ಹ ನಾಯಕ ಅಮರೀಂದರ್ ಸಿಂಗ್ ಅವರ ವಿಶ್ವಾಸವನ್ನೂ ಕಳೆದುಕೊಂಡು, ಮತ್ತೊಂದು ಕಡೆ ಪರ್ಯಾಯ ನಾಯಕನಾಗಿ ಹೊರಹೊಮ್ಮುವ ಮಹತ್ವಾಕಾಂಕ್ಷೆಯ ಸಿಧು ಅಸಮಾಧಾನಕ್ಕೂ ಈಡಾಗಿ, ಹೈಕಮಾಂಡ್ ಪಕ್ಷದ ಪಂಜಾಬ್ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತದೆ ಮತ್ತು ಮುಂದಿನ ಚುನಾವಣೆಯನ್ನು ಹೇಗೆ ಎದುರಿಸುತ್ತದೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

Tags: Congress Partyನರೇಂದ್ರ ಮೋದಿಬಿಜೆಪಿ
Previous Post

ಸೈಕೋಪಾತ್‍ ಅತ್ಯಾಚಾರಿ, ಸರಣಿ ಹಂತಕ ಉಮೇಶರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್‌ ಮಹತ್ವದ ತೀರ್ಪು

Next Post

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಪರಿವಾರ ಒಂದು ಶಕ್ತಿ, ಅವರನ್ನು ಬಿಟ್ಟು ನಡೆಯೋಕೆ ನಮಗೆ ಹುಚ್ಚಿಲ್ಲ – Brijesh Kalapp

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
Next Post

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಪರಿವಾರ ಒಂದು ಶಕ್ತಿ, ಅವರನ್ನು ಬಿಟ್ಟು ನಡೆಯೋಕೆ ನಮಗೆ ಹುಚ್ಚಿಲ್ಲ - Brijesh Kalapp

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada