ಉತ್ತರಪ್ರದೇಶದ ಲಖೀಂಪುರ್ನಲ್ಲಿ ನಡೆದ ಅಪಘಾತ ಮತ್ತು ಹಿಂಸಾಚಾರ ಘಟನೆ ಸದ್ಯ ರಾಜಕೀಯ ತಿರುವು ತಗೆದುಕೊಂಡಿದೆ. ಈಗಾಗಲೇ ಅಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರೈತರ ಮೇಲೆ ಕಾರು ಹತ್ತಿಸಿ ನಾಲ್ವರನ್ನ ಬಲಿ ತೆಗೆದುಕೊಂಡ ಆರೋಪ ಕೇಂದ್ರ ಸಚಿವರ ಮಗನ ಮೇಲಿದೆ. ಹೀಗಾಗಿಯೇ ಈ ಪ್ರಕರಣದಲ್ಲಿ ಇಡೀ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮಧ್ಯಪ್ರವೇಶ ಮಾಡಿವೆ. ಹೀಗಾಗಿ ಈ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಕೇಂದ್ರ ಸಚಿವರು ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ರು. ಈ ಸಂದರ್ಭದಲ್ಲಿ ಲಖೀಂಪುರ ಖೇರಿಯಲ್ಲಿ ಭಾನುವಾರ ಹಿಂಸಾಚಾರ ನಡೆದು 8 ಮಂದಿ ಮೃತಪಟ್ಟಿದ್ದಾರೆ. ಈ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ರೈತ ನಾಯಕ ಡಾ. ದರ್ಶನ್ ಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರ್ ಹತ್ತಿಸಿ ಕೊಲೆ ಮಾಡಿದ್ದಾನೆ ಅಂತ ಆರೋಪಿಸಿದ್ದಾರೆ. ಆದ್ರೆ ಇದಕ್ಕೆ ಪ್ರತಿಕ್ರಿಯಿಸಿರುವ ಅಜಯ್ ಮಿಶ್ರಾ, ಘಟನೆ ನಡೆದ ಸ್ಥಳದಲ್ಲಿ ನನ್ನ ಮಗ ಇರಲೇ ಇಲ್ಲ ಅಂತ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಅಲ್ಲದೆ ಹಿಂಸಾಚಾರದಲ್ಲಿ ನಮ್ಮ ಮೂವರು ಕಾರ್ಯಕರ್ತರು ಮತ್ತು ಚಾಲಕನನ್ನು ಕೊಲೆಗೈಯ್ಯಲಾಗಿದೆ ಅನ್ನೋದು ಅಜಯ್ ಮಿಶ್ರಾ ವಾದ.
ಇನ್ನು, ಈ ಪ್ರಕರಣದಲ್ಲಿ ಮೊದಲು ಪ್ರವೇಶ ಮಾಡಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ. ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ಲಖಿಂಪುರ್ ಖೇರಿಗೆ ತೆರಳಿದ್ದರು. ಆದ್ರೆ ಅವರನ್ನ ಪೊಲೀಸ್ರು ವಶಕ್ಕೆ ಪಡೆದು ಪೊಲೀಸರು ಬಂಧಿಸಿದರು.
ಪ್ರಿಯಾಂಕಾ ಗಾಂಧಿ ಬಂಧನದ ಬಳಿಕ ರಾಹುಲ್ ಗಾಂಧಿ ಸೇರಿದಂತೆ ಇಡೀ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತು. ನೀವು ಯಾರಿಗೂ ಹೆದರೋದಿಲ್ಲ ಎಂದು ಗೊತ್ತಿದೆ. ನಿಮ್ಮ ಧೈರ್ಯಕ್ಕೆ ಬಿಜೆಪಿ ಸರ್ಕಾರ ದಿಗ್ರ್ಭಮೆಗೊಂಡಿದೆ. ನ್ಯಾಯಕ್ಕಾಗಿ ನಡೆಯುತ್ತಿರುವ ಈ ಅಹಿಂಸಾತ್ಮಕ ಹೋರಾಟದಲ್ಲಿ ಅನ್ನದಾತರಿಗೆ ಗೆಲವು ಸಿಗಲಿದೆ ಎಂದು ಹಲವರು ಟ್ವೀಟ್ ಮಾಡಿದ್ದರು.
ಪ್ರಿಯಾಂಕಾ ಗಾಂಧಿಯನ್ನ ತಡೆದಿರುವುದನ್ನು ಖಂಡಿಸಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲೂ ಭಾರೀ ಪ್ರತಿಭಟನೆಗಳು ನಡೆದವು. ಹಿಂಸಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಸಚಿವ ಮಿಶ್ರಾ ರಾಜೀನಾಮೆ ಕೊಡಬೇಕು. ರಾಮ ರಾಜ್ಯ ಮಾಡ್ತೀವಿ ಅಂತ ಬಂದವರು ರಾವಣ ರಾಜ್ಯ ಮಾಡ್ತಿದ್ದಾರೆ. ಪ್ರಿಯಾಂಕ ಗಾಂಧಿಯವರೇ ನಿಮ್ಮ ಹಿಂದೆ ಇಡೀ ದೇಶದ ಜನರಿದ್ದಾರೆ. ನೀವು ಮುನ್ನುಗ್ಗಿ, ನಾವು ನಿಮ್ಮ ಬೆನ್ನ ಹಿಂದೆ ಯಾವಾಗಲೂ ಇರುತ್ತೇವೆ. ದೇಶದ ಜನರೇ ಬಿಜೆಪಿಗೆ ಪಾಠ ಕಲಿಸ್ತಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಲಖಿಂಪುರ್ ಖೇರಿಯ ಹಿಂಸಾಚಾರ ಖಂಡಿಸಿ ಮಾಜಿ ಸಿಎಂ ಅಖಿಲೇಶ್ ಯಾದವ್, ಪಂಜಾಬ್ ಸಿಎಂ ಚನ್ನಿ, ಛತ್ತೀಸ್ಗಡ ಸಿಎಂ ಭೂಪೇಶ್ ಬಘೇಲ್ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಲಕ್ನೋ ಏರ್ಪೋರ್ಟ್ನಲ್ಲೇ ಎಲ್ಲರನ್ನು ತಡೆಯಲಾಯ್ತು. ಕೇವಲ ರಾಹುಲ್ ಗಾಂಧಿಯವರಿಗೆ ಮಾತ್ರ ಭೇಟಿಗೆ ಅವಕಾಶ ನೀಡಲಾಗಿತ್ತು.
ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಮೃತಪಟ್ಟಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ್ದು, ತಲಾ 45 ಲಕ್ಷ ರೂ. ನೀಡುವುದಾಗಿ ಯುಪಿ ಸರ್ಕಾರ ಘೋಷಣೆ ಮಾಡಿದೆ. ಅಲ್ಲದೆ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಮೃತರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವ ಭರವಸೆ ನೀಡಲಾಗಿದೆ. ಇದಲ್ಲದೆ ರೈತರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರೊಬ್ಬರಿಂದ ಘಟನೆಯ ತನಿಖೆ ನಡೆಸಲಾಗುತ್ತದೆ ಅಂತಾ ಉತ್ತರ ಪ್ರದೇಶ ಪೊಲೀಸ್ ಎಡಿಜಿ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಸುಪ್ರೀಂಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಉತ್ತರ ಪ್ರದೇಶ ಸರ್ಕಾರಕ್ಕೆ ಚಾಟಿ ಬೀಸಿದೆ. ಯಾರ ವಿರುದ್ಧ ಎಫ್ಐಆರ್ ಮಾಡಿದ್ದೀರಿ ಎಂದು ನಾಳೆ ವರದಿ ಕೊಡಿ ಎಂದು ತಪರಾಕಿ ಬಾರಿಸಿದೆ. ನೀವು ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಸುತ್ತಿಲ್ಲ. ಸಾವಿನ ಹೊಣೆ ನೀವು ಹೊರಬೇಕಾಗುತ್ತದೆ ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದೆ.