• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

Any Mind by Any Mind
October 8, 2021
in ದೇಶ
0
ಶಾಲೆ ಪುನರಾರಂಭಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram
ADVERTISEMENT

ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್‌ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ಸಮಸ್ಸ್‌ ಜಾರಿ ಮಾಡಿದ್ದರು.

“ಘಟನೆ ನಡೆದಾಗ ಸ್ಥಳದಲ್ಲಿ ನನ್ನ ಮಗ ಇರಲಿಲ್ಲ ಎಂದು ಮಂತ್ರಿ ಹೇಳುತ್ತಾರೆ. ಆದರೆ, ಅವರ ಮಗ ಕಾರಿನಲ್ಲಿ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹೀಗಿದ್ದರೂ ಇನ್ನು ಸಹ ಅವರನ್ನು ಬಂಧಿಸಿಲ್ಲ ಮತ್ತು ಆರೋಪಿಯು ತಲೆಮರೆಸಿಕೊಂಡಿದ್ದು, ಉತ್ತರ ಪ್ರದೇಶ ಪೊಲೀಸರು ಆರೋಪಿಗಾಗಿ ಎಲ್ಲಾ ಕಡೆ ಬಲೆ ಬೀಸಿದ್ದಾರೆ. ಆದರೆ ಆತನನ್ನು ಸರ್ಕಾರವೇ ರಕ್ಷಿಸುತ್ತಿದ್ದೆ  ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ರೈತ ಸಂಘಟನೆ ಆರೋಪಿಸಿದೆ.

ಘಟನೆಯ ಕುರಿತು ಅಕ್ಟೋಬರ್‌ 7ರಂದು ಸಚಿವನ ಮಗನ ವಿರುದ್ದ ಪೊಲೀಸ್‌ ಇಲಾಖೆ ಸಮನ್ಸ್‌ ಜಾರಿ ಮಾಡಿರುವ ಕುರಿತು ಅವರ ಮನೆಯ ಮುಂಭಾಗ ಸಮನ್ಸ್‌ಅನ್ನು ಪೊಲೀಸರು ಅಂಟಿಸಿದರು. ಕೊಲೆ ಮತ್ತು ಗಲಭೆ ಅರೋಪದ ಅಡಿಯಲ್ಲಿ ಸೋಮವಾರದಂದು ಆಶೀಶ್‌ ಮಿಶ್ರಾ ವಿರುದ್ದ ಎಫ್‌ಐಆರ್‌ಅನ್ನು ಪೊಲೀಸರು ದಾಖಲಿಸಿದರು.

ಸುಪ್ರೀಂ ಕೋರ್ಟ್‌ ತನಿಖೆ

ಸುಪ್ರೀಂ ಕೋರ್ಟ್‌ನಲ್ಲಿ ತನಿಖೆ ಮುಂದುವರೆದಿದ್ದು ಉತ್ತರ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್‌ ಸಾಳ್ವೆ ಸದ್ಯಕ್ಕೆ ಲಭ್ಯವಿಲ್ಲದ ಕಾರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿತ್ತು.

ಸುಪ್ರೀಂ ಕೋರ್ಟ್‌ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಚಾಟಿ ಬೀಸಿದೆ. ಗಂಭೀರವಾದ ಘಟನೆ ನಡೆದು ಇಷ್ಟು ದಿನವಾದರು ಆರೋಪಿಯನ್ನು ಬಂಧಿಸಿಲ್ಲ ಮತ್ತು ಈ ಬಗ್ಗೆ ಆರೋಪಿಯ ವಿರುದ್ದ ಸಮನ್ಸ್‌ ಜಾರಿಯಾಗಿದ್ದರು ತನಿಖೆಗೆ ಹಾಜರಾಗದಿರುವುದು ಪೊಲೀಸರ ನಡೆಯನ್ನು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ ಎಂದು ತೀವ್ರ ಅಸಮಾಧಾನ ಹೊರ ಹಾಕಿದೆ.

ಸ್ಥಳಕ್ಕೆ ದೌಡಾಯಿಸುತ್ತಿರುವ ನಾಯಕರು
ಈ ನಡುವೆ ಲಖೀಂಪುರ್‌ ಖೇರಿಯಲ್ಲಿ ಘಟನೆ ಸಂಭವಿಸಿದ ಬಳಿಕ ದೇಶಾದಂತ್ಯ ರಾಜಕೀಯ ಪಕ್ಷ ಹಾಗೂ ಸಂಘಟನೆಯ ಮುಖಂಡರುಗಳು ಲಖೀಂಪುರ್‌ಗೆ ದೌಡಾಯಿಸುತ್ತಿದ್ದು ಎಲ್ಲರನ್ನು ಉತ್ತರ ಪ್ರದೇಶ ಪೊಲೀಸರು ತಡೆಯುತ್ತಿದ್ದಾರೆ. ಈ ನಡುವೆ ಪಂಜಾಬ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನವಕೋತ್‌ ಸಿಂಗ್‌ ಸಿಧುರನ್ನು ಉತ್ತರ ಪ್ರದೇಶದ ಗಡಿ ಶಹಜಹಾನ್‌ಪುರದಲ್ಲಿ ಪೊಲೀಸರು ತಡೆದಿದ್ದಾರೆ. ಒಂದು ವೇಳೆ ಪೊಲೀಸರು ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಲು ಬಿಡದಿದ್ದರೆ ಹಾಗೂ ಶುಕ್ರವಾರದೊಳಗೆ ಮಂತ್ರಿ ಮಗನನ್ನು ಬಂಧಿಸದಿದ್ದರೆ ತಾವು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಿಧು ಯುಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಶಿರೋಮಣಿ ಅಕಾಲಿದಳದ ನಿಯೋಗವು ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬವನ್ನು ಭೇಟಿ ಮಾಡಲು ಲಕನೌ ವಿಮಾನ ನಿಲ್ತಾಣಕ್ಕೆ ಆಗಮಿಸಿದ್ದು ಅವರು ಲಖೀಂಪುರ್‌ ಖೇರಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಕಾಲಿದಳದ ನಾಯಕಿ ಹರಸಿಮ್ರತ್‌ ಕೌರ್‌ ಬಾದಲ್ ʻʻಸರ್ಕಾರ ರೈತರ ಮಾತನ್ನು ಕೇಳುತ್ತಿಲ್ಲ, ರೈತರನ್ನು ಕೊಲ್ಲಲಾಗುತ್ತಿದೆ ರೈತರೊಂದಿಗೆ ನಾವು ಸದಾ ಇರುತ್ತೇವೆ” ಎಂದು ಹೇಳಿದ್ದಾರೆ.

ಇನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಕೂಡಾ ಘಟನೆ ಕುರಿತು ವಿಷಾದಿಸಿದ್ದು, ʻʻಮೃತ ರೈತ ಕುಟುಂಬಗಳಿಗೆ ಸರ್ಕಾರ ತಲಾ ಎರಡು ಕೋಟಿ ರೂಪಾಯಿ ಪರಿಹಾರ ಮೊತ್ತವನ್ನು ಘೋಷಿಸಬೇಕು ಮತ್ತು ಲಖೀಂಪುರ್‌ನಲ್ಲಿ ಘಟನೆ ನಡೆದ ನಂತರ ಸರ್ಕಾರ ಆ ಪ್ರದೇಶದಲ್ಲಿ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿದೆ ಜನರು ಯಾರು ಘಟನೆಯ ಸತ್ಯಾಂಶವನ್ನು ಹಂಚಿಕೊಳ್ಳದಂತೆ ಸರ್ಕಾರ ಅವರನ್ನು ತಡೆಯುವ ಮೂಲಕ ಜನರ ಭಾವನೆಗಳ ಜೊತೆ ಆಟವಾಡುತ್ತಿದ್ದೆ” ಎಂದು ಹೇಳಿದ್ದಾರೆ.

AICC ವಕ್ತಾರೆ ಲಾವಣ್ಯ ಬಲ್ಲಾಳ್ ಜೊತೆಗೆ ವಿಶೇಷ ಸಂದರ್ಶನ : ನಾಳೆ ಸಂಜೆ 5:30 ಗೆ
Tags: AccidentsAshish MishraBJPFarmersFarmers protestLakhimpur Kheri Eventlakimpurroad accidentUttar Pradeshuttara Pradesh GovernmentYogi Adityanathನರೇಂದ್ರ ಮೋದಿಬಿಜೆಪಿ
Previous Post

ಅರುಣಾಚಲ ಪ್ರದೇಶ: ಭಾರತ ಮತ್ತು ಚೀನಾ ನಡುವೆ ಘರ್ಷಣೆ

Next Post

ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada